ಬ್ರೇಕಿಂಗ್ ನ್ಯೂಸ್
03-07-22 10:07 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 3: ಉದಯಪುರದಲ್ಲಿ ಇಸ್ಲಾಮಿಕ್ ಮೂಲಭೂತವಾದಿಗಳಿಂದ ಕೊಲೆಯಾದ ಕನ್ನಯ್ಯಲಾಲ್ ಕುಟುಂಬಕ್ಕೆ ಭಾರೀ ಪ್ರಮಾಣದಲ್ಲಿ ದೇಣಿಗೆ ಹರಿದು ಬಂದಿದೆ. 14 ಸಾವಿರಕ್ಕೂ ಹೆಚ್ಚು ದಾನಿಗಳು ಈವರೆಗೆ 1.70 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ ಎಂದು ಬಿಜೆಪಿ ನಾಯಕ ಕಪಿಲ್ ಮಿಶ್ರಾ ಮಾಹಿತಿ ನೀಡಿದ್ದಾರೆ.
ಈ ಪೈಕಿ ಒಂದು ಕೋಟಿ ರೂಪಾಯಿ ಮೊತ್ತವನ್ನು ಕನ್ನಯ್ಯ ಲಾಲ್ ಕುಟುಂಬಕ್ಕೆ ನೀಡಲಾಗುವುದು. ಕುಟುಂಬದ ಆಧಾರಸ್ತಂಭ ಕಳಕೊಂಡಿರುವುದರಿಂದ ಹಣಕ್ಕೆ ಸಮಸ್ಯೆ ಬರಬಾರದು. ಸಾವಿರಾರು ಮಂದಿ ದೇಣಿಗೆ ನೀಡಿದ್ದಾರೆ. ನಾವು ಒಂದು ಕೋಟಿ ಸಂಗ್ರಹಿಸುವ ಉದ್ದೇಶ ಇರಿಸಿಕೊಂಡಿದ್ದೆವು. ನಿರೀಕ್ಷೆಗೂ ಮೀರಿ ಪ್ರತಿಕ್ರಿಯೆ ಬಂದಿದ್ದು 14,416 ಮಂದಿ 1.70 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ ಎಂದು ಕಪಿಲ್ ಮಿಶ್ರಾ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.
ನಾವು ಕನ್ನಯ್ಯಲಾಲ್ ಅವರನ್ನು ಮರಳಿ ತರಲು ಸಾಧ್ಯವಿಲ್ಲ. ಆದರೆ ಅವರ ಕುಟುಂಬ ಹಣ ಇಲ್ಲದೆ ಕಷ್ಟಕ್ಕೆ ಒಳಗಾಗಬಾರದು. ಮಕ್ಕಳ ಶಿಕ್ಷಣ, ಮನೆಯ ಬ್ಯಾಂಕ್ ಸಾಲ ಕಟ್ಟಲು ತೊಂದರೆ ಆಗಬಾರದೆಂದು ಫಂಡ್ ರೈಸ್ ಮಾಡಿದ್ದೇವೆ. ಈ ಪೈಕಿ ಒಂದು ಕೋಟಿ ಆ ಕುಟುಂಬಕ್ಕೆ ನೀಡಲಿದ್ದು, ಉಳಿದವನ್ನು ಉಮೇಶ್ ಕೊಲ್ಹೆ ಮತ್ತು ಈ ಸಂದರ್ಭದಲ್ಲಿ ಗಾಯಗೊಂಡವರ ಕುಟುಂಬಗಳಿಗೆ ನೀಡಲಾಗುವುದು ಎಂದು ಕಪಿಲ್ ಮಿಶ್ರಾ ತಿಳಿಸಿದ್ದಾರೆ.
ಕನ್ನಯ್ಯ ಲಾಲ್ ಕೊಲೆಯ ಸಂದರ್ಭದಲ್ಲಿ ಪಾರು ಮಾಡಲು ಯತ್ನಿಸಿದ ಈಶ್ವರ್ ಸಿಂಗ್ ಕುಟುಂಬಕ್ಕೆ 25 ಲಕ್ಷ ನೀಡಲಾಗುವುದು. 30 ಲಕ್ಷವನ್ನು ಮಹಾರಾಷ್ಟ್ರದ ಅಮರಾವತಿಯಲ್ಲಿ ಕೊಲೆಯಾದ ಉಮೇಶ್ ಕೊಲ್ಹೆ ಕುಟುಂಬಕ್ಕೆ ನೀಡಲಿದ್ದೇವೆ. ಇನ್ನು ಹತ್ತು ದಿನಗಳಲ್ಲಿ ಕುಟುಂಬಗಳ ಬ್ಯಾಂಕ್ ಖಾತೆಯನ್ನು ಪಡೆದು ಹಣವನ್ನು ಹಸ್ತಾಂತರ ಮಾಡಲಾಗುವುದು ಎಂದು ಕಪಿಲ್ ಮಿಶ್ರಾ ಹೇಳಿದ್ದಾರೆ. ರಾಜಸ್ಥಾನದಲ್ಲಿ ಉದ್ರಿಕ್ತರ ಗುಂಪನ್ನು ಚದುರಿಸುವ ಸಂದರ್ಭದಲ್ಲಿ ಪೊಲೀಸ್ ಸಿಬಂದಿ ಸಂದೀಪ್ ಮೇಲೆ ಹಲ್ಲೆ ನಡೆಸಲಾಗಿತ್ತು. ಆತನ ಕುಟುಂಬಕ್ಕೂ 5 ಲಕ್ಷ ನೀಡಲಾಗುವುದು. ದೇಣಿಗೆ ಕೊಟ್ಟವರೆಲ್ಲರಿಗೂ ಕೃತಜ್ಞತೆಗಳನ್ನು ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ.
On Sunday (July 3), BJP leader Kapil Mishra shared the information that more than 14,000 donors from across the globe have come together to contribute a whopping ₹1.7 crore for the family of Kanhaiya Lal. Lal, a tailor by occupation, was beheaded by two extremists, namely, Riyaz Attari and Mohammad Ghaus, for sharing a post in support of the ex-BJP spokesperson Nupur Sharma.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 07:02 pm
Mangalore Correspondent
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
Yaticorp, Mangalore, AI: ಯತಿಕಾರ್ಪ್ ಸಂಸ್ಥೆಯಿಂದ...
15-09-25 08:28 pm
16-09-25 07:12 pm
HK News Desk
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm