ಬ್ರೇಕಿಂಗ್ ನ್ಯೂಸ್
04-07-22 12:23 pm HK News Desk ದೇಶ - ವಿದೇಶ
ಮುಂಬೈ, ಜುಲೈ 4 : ಉಡುಪಿ ಮೂಲದ ಸಿನಿ ಶೆಟ್ಟಿ ಎಂಬ 21 ವರ್ಷದ ಬೆಡಗಿ ಮಿಸ್ ಇಂಡಿಯಾ -2022 ಆಗಿ ಹೊರ ಹೊಮ್ಮಿದ್ದಾರೆ.
21ರ ಹರೆಯದ ಸಿನಿ ಶೆಟ್ಟಿ ಮೂಲತಃ ಉಡುಪಿ ಜಿಲ್ಲೆಯ ಇನ್ನಂಜೆಯ ಹುಡುಗಿ. ಸ್ಪರ್ಧೆಯಲ್ಲಿ ಸಿನಿ ಶೆಟ್ಟಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು. ಭಾನುವಾರ ಜುಲೈ 4ರಂದು ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ ಮಿಸ್ ಇಂಡಿಯಾ ಸ್ಪರ್ಧೆಯ ಫೈನಲ್ ಸುತ್ತಿನಲ್ಲಿ ಸಿನಿ ಶೆಟ್ಟಿ ಮಿಸ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.
ಸಿನಿ ಮುಂಬೈನಲ್ಲಿ ಹುಟ್ಟಿ ಬೆಳೆದರೂ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಕನ್ನಡಿಗ ಹುಡುಗಿ ಎನ್ನುವುದನ್ನು ತೋರಿಸಿದ್ದಾರೆ. ಸದ್ಯ ಮುಂಬೈನಲ್ಲಿ ಚಾರ್ಟರ್ಡ್ ಫೈನಾನ್ಶಿಯಲ್ ಅನಾಲಿಸ್ಟ್ ಕೋರ್ಸ್ ವ್ಯಾಸಾಂಗ ಮಾಡುತ್ತಿದ್ದಾರೆ. ಮುಂದಿನ ಬಾರಿ ನಡೆಯುವ 71ನೇ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಸಿನಿ ಶೆಟ್ಟಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.
ರಾಜಸ್ಥಾನದ ರೂಬಲ್ ಶೇಕಾವತ್ ಮತ್ತು ಉತ್ತರ ಪ್ರದೇಶದ ಶಿಂತಾನಾ ಚೌಹಾಣ್ ಮೊದಲ ಮತ್ತು ಎರಡನೇ ರನ್ನರ್ ಅಪ್ ಆಗಿ ಹೊರಹೊಮ್ಮಿದರು. 2021ರ ಸಾಲಿನ ಫೆಮಿನಾ ಮಿಸ್ ಇಂಡಿಯಾ ಮಾನಸ ವಾರಣಾಸಿ ಈ ಬಾರಿಯ ಮಿಸ್ ಇಂಡಿಯಾ ಮುಡಿಗೇರಿಸಿದ ಸಿನಿ ಶೆಟ್ಟಿಗೆ ಕಿರೀಟವನ್ನು ತೊಡಿಸಿದ್ದಾರೆ.
Sini Shetty of Karnataka was crowned the coveted Femina Miss India World 2022, Rajasthan's Rubal Shekhawat as First Runner-Up, and Uttar Pradesh's Shinata Chauhan as Second Runner-Up during the glamorous ceremony held on July 3 at the Jio World Convention Centre in Mumbai. The 21-year-old Sini hails from Innanje of Udupi district. She represented Karnataka in the contest. Sini was born and broughtup in Mumbai but she represented Karnataka in the miss India contest. Currently she is studying Chartered Financial Analyst course.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 07:02 pm
Mangalore Correspondent
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
Yaticorp, Mangalore, AI: ಯತಿಕಾರ್ಪ್ ಸಂಸ್ಥೆಯಿಂದ...
15-09-25 08:28 pm
16-09-25 07:12 pm
HK News Desk
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm