ಬ್ರೇಕಿಂಗ್ ನ್ಯೂಸ್
14-07-22 10:59 am HK News Desk ದೇಶ - ವಿದೇಶ
Photo credits : Law Beat
ನವದೆಹಲಿ, ಜುಲೈ 14: ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿ ಉಪ ತಹಶೀಲ್ದಾರ್ ಜಾಮೀನು ಅರ್ಜಿಯ ವಿಚಾರಣೆಯನ್ನ ತಡೆ ಹಿಡಿಯುವಂತೆ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ಜಾಮೀನು ಅರ್ಜಿಯ ವಿಚಾರಣೆಯ ವೇಳೆ ನ್ಯಾಯಮೂರ್ತಿ ಎಚ್.ಪಿ ಸಂದೇಶ್ ಅವರು ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಕಾರ್ಯವೈಖರಿ ವಿರುದ್ಧ ಟೀಕಿಸಿದ್ದನ್ನು ಪ್ರಶ್ನಿಸಿ, ಎಡಿಜಿಪಿ ಪರವಾಗಿ ಸಲ್ಲಿಕೆಯಾಗಿರುವ ಮೇಲ್ಮನವಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ತ್ರಿಸದಸ್ಯ ಪೀಠ ಈ ನಿರ್ದೇಶನ ನೀಡಿದೆ.
ಮಂಗಳವಾರ ವಿಚಾರಣೆಯ ವೇಳೆ ಕರ್ನಾಟಕ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ‘ಎಸಿಬಿ ಕಾರ್ಯವೈಖರಿ ಟೀಕಿಸಿದ ಕಾರಣಕ್ಕೆ ವರ್ಗಾವಣೆ ಬೆದರಿಕೆ ಬಂದಿದೆ ಎಂಬ ನ್ಯಾಯಮೂರ್ತಿ ಸಂದೇಶ್ ಅವರ ಹೇಳಿಕೆ ಹಾಗೂ ಸೀಮಂತ್ ಕುಮಾರ್ ಸಿಂಗ್ ಅವರ ಮೇಲ್ಮನವಿ ಪ್ರಕರಣಗಳನ್ನು ಮಂಗಳವಾರ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿತ್ತು. ಸುಪ್ರೀಂ ಕೋರ್ಟ್ ತುರ್ತಾಗಿ ವಿಚಾರಣೆ ಕೈಗೆತ್ತಿಕೊಳ್ಳಲು ಒಪ್ಪಿದ ನಂತರವೂ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿಯ ವಿಚಾರಣೆ ನಡೆಸಿರುವುದು ಸರಿಯಲ್ಲ ಎಂದು ವಾದಿಸಿದರು.
ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಪರವಾಗಿ ಹಾಜರಾದ ಹಿರಿಯ ವಕೀಲ ಅಮಿತ್ ಕುಮಾರ್, ‘ನನ್ನ ಕಕ್ಷಿದಾರರ ವಾರ್ಷಿಕ ಗೋಪ್ಯ ವರದಿಗಳನ್ನು ತೆರೆದ ನ್ಯಾಯಾಲಯದಲ್ಲಿ ಓದಲಾಗಿದೆ. ಅವರ ಪರ ವಾದಗಳನ್ನು ಆಲಿಸದೆ ನಿರ್ದೇಶನಗಳನ್ನು ನೀಡಲಾಗಿದೆ’ ಎಂದು ಆಕ್ಷೇಪಿಸಿದರು.
ವಾದಗಳನ್ನು ಆಲಿಸಿದ ನ್ಯಾಯಪೀಠವು, ಜುಲೈ 11ರಂದು ಹೈಕೋರ್ಟ್ ನೀಡಿದ ಆದೇಶ ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಆದೇಶಗಳ ವಿವರ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿತು.
ಲಂಚ ಪ್ರಕರಣದಲ್ಲಿ ಆರೋಪಿಯಾಗಿರುವ ಉಪ ತಹಶೀಲ್ದಾರ್ ಪಿ.ಎಸ್. ಮಹೇಶ್ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಕಳೆದ ವಾರ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಚ್.ಪಿ.ಸಂದೇಶ್, ಎಸಿಬಿಯ ಕಾರ್ಯವೈಖರಿ ವಿರುದ್ಧ ಕೆಂಡ ಕಾರಿದ್ದರು. ಎಸಿಬಿಯ ಮುಖ್ಯಸ್ಥ ಎಡಿಜಿಪಿಯೇ ಕಳಂಕಿತ ಅಧಿಕಾರಿ ಎಂದೂ ಕಿಡಿಕಾರಿದ್ದರು. ಎಸಿಬಿ ಮುಖ್ಯಸ್ಥರನ್ನು ಟೀಕಿಸಿದ್ದಕ್ಕೆ ವರ್ಗಾವಣೆ ಬೆದರಿಕೆ ಬಂದಿದೆ ಎಂದೂ ಹೇಳಿದ್ದರು.
The Supreme Court on Tuesday asked the Karnataka High Court judge, who had made some adverse remarks against the Karnataka Anti-Corruption Bureau (ACB) chief during a bail plea hearing, to defer the next hearing of the case by three days so as to enable it to go through an order passed by him on July 11.A bench presided by Chief Justice of India N V Ramana was told that the order wherein the judge had recorded the alleged indirect threats he received for going against the official was yet to be uploaded.
28-11-24 10:41 pm
Bangalore Correspondent
Karkala Drowning, Udupi News; ಕಾರ್ಕಳದ ದುರ್ಗಾ...
28-11-24 09:41 pm
ಲಾಕಪ್ ಡೆತ್ ; ನಾಲ್ವರು ಪೊಲೀಸರಿಗೆ ಏಳು ವರ್ಷ ಜೈಲು...
28-11-24 05:04 pm
MLA Gaviyappa, DK Shivakumar: ಯಾವುದೇ ಕಾರಣಕ್ಕೂ...
26-11-24 10:46 pm
Shivamogga, Monkey fever, Dinesh Gundu Rao: ಮ...
26-11-24 10:23 pm
27-11-24 02:00 pm
HK News Desk
ರಸ್ತೆ ಬದಿ ಮಲಗಿದ್ದ ಅಲೆಮಾರಿ ಗುಂಪಿನ ಮೇಲಿಂದ ಹರಿದ...
27-11-24 12:36 pm
ಕ್ಯುಆರ್ ಕೋಡ್ ಸಹಿತ ಹೊಸ ನಮೂನೆಯ ಪ್ಯಾನ್ 2.0 ಜಾರಿ...
26-11-24 09:43 pm
BJP Devendra Fadnavis, Eknath Shinde: ಮಹಾರಾಷ್...
26-11-24 07:32 pm
ಪ್ರವಾಸೋದ್ಯಮ ಇಲಾಖೆಗೆ ನಿಗದಿಪಡಿಸಿದ್ದ ದರ್ಶನ ಟಿಕೆಟ...
23-11-24 11:07 pm
28-11-24 09:58 pm
Mangalore Correspondent
Mangalore, DFYI protest, Anupam Agarwal: ಪೊಲೀ...
28-11-24 06:05 pm
VHP, Mangalore, Bangladesh: ಬಾಂಗ್ಲಾದೇಶದಲ್ಲಿ ಹ...
28-11-24 03:24 pm
Belthangady suicide, Crime, Mangalore; ನಂಬಿಸಿ...
28-11-24 02:13 pm
Mangalore, Anupam Agarwal, Ramanatha Rai: ರಸ್...
28-11-24 01:56 pm
27-11-24 03:36 pm
HK News Desk
Mangalore, Robbery, Crime : ಕೊಲ್ಯದ ಜಾಯ್ ಲ್ಯಾಂ...
27-11-24 01:11 pm
Mangalore crime, ACP Dhanya Nayak, Drugs: ಎಸಿ...
26-11-24 03:10 pm
ಹುಬ್ಬಳ್ಳಿ ದರೋಡೆ ಪ್ರಕರಣದಲ್ಲಿ ಮಂಗಳೂರು ನಂಟು ; ಉಳ...
25-11-24 06:17 pm
Honeytrap Bangalore, Crime, Udupi: ಪ್ರೊಫೆಸರ್...
24-11-24 04:33 pm