ಮಂಗಳೂರು ಮೂಲದ ಮಾರ್ಗರೆಟ್ ಆಳ್ವಾಗೆ ಉಪ ರಾಷ್ಟ್ರಪತಿ ಅಭ್ಯರ್ಥಿ ಭಾಗ್ಯ ; ದೊಡ್ಡ ಗೌರವ ಎಂದ ಆಳ್ವಾ  

17-07-22 09:23 pm       Mangalore Correspondent   ದೇಶ - ವಿದೇಶ

ಮಂಗಳೂರು ಮೂಲದ ಹಿರಿಯ ಕಾಂಗ್ರೆಸ್ ನಾಯಕಿ, ಮಾಜಿ ಕೇಂದ್ರ ಸಚಿವೆ, ನಿವೃತ್ತ ರಾಜ್ಯಪಾಲೆ ಮಾರ್ಗರೆಟ್ ಆಳ್ವಾ ಅವರನ್ನು ಉಪ ರಾಷ್ಟ್ರಪತಿ ಸ್ಥಾನದ ವಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ.

ನವದೆಹಲಿ, ಜುಲೈ 16: ಮಂಗಳೂರು ಮೂಲದ ಹಿರಿಯ ಕಾಂಗ್ರೆಸ್ ನಾಯಕಿ, ಮಾಜಿ ಕೇಂದ್ರ ಸಚಿವೆ, ನಿವೃತ್ತ ರಾಜ್ಯಪಾಲೆ ಮಾರ್ಗರೆಟ್ ಆಳ್ವಾ ಅವರನ್ನು ಉಪ ರಾಷ್ಟ್ರಪತಿ ಸ್ಥಾನದ ವಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ.

ಉತ್ತರಾಖಂಡ ಮತ್ತು ರಾಜಸ್ಥಾನದ ರಾಜ್ಯಪಾಲರೂ ಆಗಿದ್ದ ಮಾರ್ಗರೆಟ್ ಆಳ್ವಾ ಹೆಸರನ್ನು ಉಪ ರಾಷ್ಟ್ರಪತಿ ಸ್ಥಾನದ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ನಿವಾಸದಲ್ಲಿ ಪ್ರತಿಪಕ್ಷಗಳ ನಾಯಕರು ಸಭೆ ನಡೆಸಿ ಮಾರ್ಗರೆಟ್ ಹೆಸರನ್ನು ಅಂತಿಮಗೊಳಿಸಿದ್ದಾರೆ. ಎನ್ ಡಿಎ ಮೈತ್ರಿಕೂಟದಿಂದ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್ ಹೆಸರನ್ನು ಉಪ ರಾಷ್ಟ್ರಪತಿ ಸ್ಥಾನಕ್ಕೆ ಅಭ್ಯರ್ಥಿ ಮಾಡಲಾಗಿದೆ. ಆಗಸ್ಟ್ 6ರಂದು ಉಪ ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ಮಂಗಳೂರಿನಲ್ಲಿ ಜನಿಸಿದ್ದ ಮಾರ್ಗರೆಟ್ ಆಳ್ವಾ, ಬೆಂಗಳೂರಿನ ಮೌಂಟ್ ಕಾರ್ಮೆಲ್ ಸ್ಕೂಲ್ ನಲ್ಲಿ ಬಿಎ ಪದವಿ ಮುಗಿಸಿದ್ದರು. ಆಬಳಿಕ ಸರಕಾರಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದು ವಕೀಲರಾಗಿದ್ದರು. ಜೊತೆ ಜೊತೆಗೆ ಕಾಂಗ್ರೆಸ್ ಪಕ್ಷದಲ್ಲಿ ಪ್ರತಿನಿಧಿಸಿ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದರು. ಉತ್ತರ ಕನ್ನಡ ಜಿಲ್ಲೆಯಿಂದ ಮೊದಲ ಬಾರಿಗೆ ಸಂಸದೆಯಾಗಿ ಆಯ್ಕೆಯಾಗಿದ್ದರು. ಒಂದು ಬಾರಿ ರಾಜ್ಯಸಭಾ ಸದಸ್ಯರಾಗಿಯೂ ಇದ್ದರು. ಆನಂತರ, ಗೋವಾ, ಗುಜರಾತ್, ರಾಜಸ್ಥಾನ, ಉತ್ತರಾಖಂಡ ರಾಜ್ಯಪಾಲರಾಗಿ 2014ರಲ್ಲಿ ನಿವೃತ್ತಿ ಪಡೆದಿದ್ದರು. ಇದೀಗ 80 ವರ್ಷದ ಮಾರ್ಗರೆಟ್ ಅವರನ್ನು ದೇಶದ ಎರಡನೇ ಅತ್ಯುನ್ನತ ಹುದ್ದೆಗೆ ಅಭ್ಯರ್ಥಿಯಾಗಿ ಮಾಡಲಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮಾರ್ಗರೆಟ್ ಆಳ್ವಾ, ಉಪ ರಾಷ್ಟ್ರಪತಿ ಸ್ಥಾನಕ್ಕೆ ಅಭ್ಯರ್ಥಿಯಾಗಿರುವುದು ತನಗೆ ಸಿಕ್ಕ ದೊಡ್ಡ ಗೌರವ. ತುಂಬು ನಮ್ರತೆಯಿಂದ ಈ ಗೌರವವನ್ನು ಸ್ವೀಕರಿಸುತ್ತೇನೆ ಎಂದು ಹೇಳಿದ್ದಾರೆ. 1969ರಲ್ಲಿ ರಾಜಕೀಯ ಪ್ರವೇಶ ಮಾಡಿದ್ದ ಮಾರ್ಗರೆಟ್, ಐದು ವರ್ಷಗಳ ನಂತರ ಮೊದಲ ಬಾರಿಗೆ ರಾಜ್ಯಸಭೆಗೆ ಆಯ್ಕೆಯಾಗಿದ್ದರು. 1974, 1980, 1986, 1992ರಲ್ಲಿ ನಾಲ್ಕು ಬಾರಿ ರಾಜ್ಯಸಭೆ ಸದಸ್ಯರಾಗಿದ್ದರು. ಆನಂತರ ಒಂದು ಬಾರಿ ಉತ್ತರ ಕನ್ನಡ ಕ್ಷೇತ್ರದಲ್ಲಿ ಸಂಸದೆಯಾಗಿ ಆಯ್ಕೆಯಾಗಿದ್ದರು. ಐದು ದಶಕದ ಉದ್ದಕ್ಕೂ ರಾಜಕೀಯ ಜೀವನದಲ್ಲಿದ್ದ ಮಾರ್ಗರೆಟ್ ಆಳ್ವಾರದ್ದು ವರ್ಣರಂಜಿತ ಅಧ್ಯಾಯ.

Veteran Congress leader and former Union Minister Margaret Alva was on Sunday announced as the opposition's Vice Presidential candidate.The name of Alva, who has also been Governor of Uttarakhand and Rajasthan, and hails from Karnataka, was decided after opposition parties met at NCP supremo's Sharad Pawar residence.The NDA has fielded West Bengal Governor Jagdeep Dhankar for the post.BJP chief J P Nadda announced the name of Dhankhar after the Parliamentary Board meeting at party headquarters on Saturday evening.