ಬ್ರೇಕಿಂಗ್ ನ್ಯೂಸ್
01-08-22 03:25 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 1 : 2024ರಲ್ಲಿ ಬಿಜೆಪಿ-ಜೆಡಿಯು ಸೇರಿದಂತೆ ಎನ್ ಡಿಎ ಮಿತ್ರಪಕ್ಷಗಳು ಜೊತೆಯಾಗಿ ಚುನಾವಣೆ ಎದುರಿಸಲಿದ್ದು, ನರೇಂದ್ರ ಮೋದಿಯವರೇ ಬಿಜೆಪಿಯ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ ಮಾಡಿದ್ದಾರೆ. ಬಿಹಾರದ ಪಾಟ್ನಾದಲ್ಲಿ ಬಿಜೆಪಿಯ ವಿವಿಧ ಮೋರ್ಚಾಗಳ ಎರಡು ದಿನಗಳ ಜಂಟಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಸಮಾರೋಪದಲ್ಲಿ ಅವರು ಮಾತನಾಡಿದರು.
2024ರ ಲೋಕಸಭೆ ಚುನಾವಣೆಗೆ ಪ್ರಧಾನಿ ಅಭ್ಯರ್ಥಿ ಯಾರಾಗ್ತಾರೆ ಅನ್ನೋದರ ಬಗ್ಗೆ ಚರ್ಚೆ ಇತ್ತು. ಅಲ್ಲದೆ, ಪ್ರಧಾನಿ ಮೋದಿ ಅವರು ರಾಜಕೀಯದಿಂದ ನಿವೃತ್ತಿ ಹೊಂದಲಿದ್ದು, ಅಮಿತ್ ಷಾ ಅಥವಾ ಹೊಸ ಮುಖಗಳಿಗೆ ಬಿಜೆಪಿ ಮಣೆ ನೀಡಲಿದೆ ಎಂಬ ಊಹಾಪೋಹ ಎದ್ದಿರುವಾಗಲೇ ಬಿಜೆಪಿ ಪಾಲಿನ ಚಾಣಕ್ಯ ಎಂದೇ ಗುರುತಿಸಲ್ಪಟ್ಟ ಅಮಿತ್ ಷಾ ಸ್ವತಃ ಸ್ಪಷ್ಟನೆ ನೀಡಿದ್ದು ಗೊಂದಲಕ್ಕೆ ತೆರೆ ಎಳೆಯುವ ಯತ್ನ ಮಾಡಿದ್ದಾರೆ.
ಅಮಿತ್ ಶಾ ಹೇಳಿದ್ದೇನು?
2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿಯವರನ್ನು ಮತ್ತೊಮ್ಮೆ ಗೆಲ್ಲಿಸಲು ಬಿಜೆಪಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಅಮಿತ್ ಶಾ ಕರೆ ನೀಡಿದ್ದಾರೆ. ಪಾಟ್ನಾದಲ್ಲಿ ನಡೆದ ಬಿಜೆಪಿಯ ಎಲ್ಲಾ 7 ಮೋರ್ಚಾಗಳ ಮೊದಲ ಜಂಟಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಸಮಾರೋಪ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಶಾ, 'ಬೂತ್ ಮಟ್ಟದಲ್ಲಿ ದಲಿತರು, ಆದಿವಾಸಿಗಳು ಮತ್ತು ಇತರ ಹಿಂದುಳಿದ ವರ್ಗಗಳ (ಒಬಿಸಿ) ದುರ್ಬಲ ವರ್ಗಗಳಿಗಾಗಿ ಮೋದಿಯವರ ರಾಜಕೀಯ ಅಭಿಯಾನವನ್ನು ಬೆಂಬಲಿಸಬೇಕು. ಬಿಜೆಪಿ ಮತ್ತು ಮೋದಿಯವರಿಗೆ ಬೆಂಬಲ ನೀಡುವ ಬಗ್ಗೆ ಸಾರ್ವಜನಿಕ ಜಾಗೃತಿ ಮೂಡಿಸಬೇಕು' ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮೋದಿ ಅವರನ್ನು ಸತತ 3ನೇ ಅವಧಿಗೆ ಪಕ್ಷದ ಪ್ರಧಾನಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲು ಸರ್ವಾನುಮತದಿಂದ ನಿರ್ಧರಿಸಲಾಗಿದೆ ಎಂದು ಸಭೆಯಲ್ಲಿದ್ದ ಪಕ್ಷದ ಹಿರಿಯ ಮುಖಂಡರೊಬ್ಬರು ಮಾಹಿತಿ ನೀಡಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದೆ ಎಂದು ಇದೇ ವೇಳೆ ಅಮಿತ್ ಶಾ ಭರವಸೆ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮಾತನಾಡಿ, '2024ರ ಲೋಕಸಭೆ ಮತ್ತು 2025ರ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಯು ಒಟ್ಟಾಗಿ ಸ್ಪರ್ಧಿಸಲಿವೆ. ಈ ಬಗ್ಗೆ ಯಾವುದೇ ಗೊಂದಲವಿಲ್ಲವೆಂದು ತಿಳಿಸಿದರು. ಬಿಹಾರದಲ್ಲಿ ಮೊದಲ ಬಾರಿಗೆ ಅಮಿತ್ ಶಾ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಿದ್ದರು.
Union Home Minister Amit Shah on Sunday presided over the valedictory session of the two-day joint national executive meeting of different BJP Morchas in Patna. Addressing the meeting, Shah said, “BJP-JDU will contest elections together in 2024, Narendra Modi will be BJP’s prime ministerial candidate.”For the 2024 Lok Sabha elections, the discussion of prime ministerial candidates is always a hot topic. Often there is speculation about Prime Minister Narendra Modi’s retirement from politics and the coronation of new faces.
28-11-24 10:41 pm
Bangalore Correspondent
Karkala Drowning, Udupi News; ಕಾರ್ಕಳದ ದುರ್ಗಾ...
28-11-24 09:41 pm
ಲಾಕಪ್ ಡೆತ್ ; ನಾಲ್ವರು ಪೊಲೀಸರಿಗೆ ಏಳು ವರ್ಷ ಜೈಲು...
28-11-24 05:04 pm
MLA Gaviyappa, DK Shivakumar: ಯಾವುದೇ ಕಾರಣಕ್ಕೂ...
26-11-24 10:46 pm
Shivamogga, Monkey fever, Dinesh Gundu Rao: ಮ...
26-11-24 10:23 pm
27-11-24 02:00 pm
HK News Desk
ರಸ್ತೆ ಬದಿ ಮಲಗಿದ್ದ ಅಲೆಮಾರಿ ಗುಂಪಿನ ಮೇಲಿಂದ ಹರಿದ...
27-11-24 12:36 pm
ಕ್ಯುಆರ್ ಕೋಡ್ ಸಹಿತ ಹೊಸ ನಮೂನೆಯ ಪ್ಯಾನ್ 2.0 ಜಾರಿ...
26-11-24 09:43 pm
BJP Devendra Fadnavis, Eknath Shinde: ಮಹಾರಾಷ್...
26-11-24 07:32 pm
ಪ್ರವಾಸೋದ್ಯಮ ಇಲಾಖೆಗೆ ನಿಗದಿಪಡಿಸಿದ್ದ ದರ್ಶನ ಟಿಕೆಟ...
23-11-24 11:07 pm
28-11-24 09:58 pm
Mangalore Correspondent
Mangalore, DFYI protest, Anupam Agarwal: ಪೊಲೀ...
28-11-24 06:05 pm
VHP, Mangalore, Bangladesh: ಬಾಂಗ್ಲಾದೇಶದಲ್ಲಿ ಹ...
28-11-24 03:24 pm
Belthangady suicide, Crime, Mangalore; ನಂಬಿಸಿ...
28-11-24 02:13 pm
Mangalore, Anupam Agarwal, Ramanatha Rai: ರಸ್...
28-11-24 01:56 pm
27-11-24 03:36 pm
HK News Desk
Mangalore, Robbery, Crime : ಕೊಲ್ಯದ ಜಾಯ್ ಲ್ಯಾಂ...
27-11-24 01:11 pm
Mangalore crime, ACP Dhanya Nayak, Drugs: ಎಸಿ...
26-11-24 03:10 pm
ಹುಬ್ಬಳ್ಳಿ ದರೋಡೆ ಪ್ರಕರಣದಲ್ಲಿ ಮಂಗಳೂರು ನಂಟು ; ಉಳ...
25-11-24 06:17 pm
Honeytrap Bangalore, Crime, Udupi: ಪ್ರೊಫೆಸರ್...
24-11-24 04:33 pm