ಬ್ರೇಕಿಂಗ್ ನ್ಯೂಸ್
17-08-22 02:21 pm HK News Desk ದೇಶ - ವಿದೇಶ
ಮುಂಬೈ, ಆಗಸ್ಟ್ 17 : ತನ್ನ ಪ್ರೇಮ ಸಂಬಂಧಕ್ಕೆ ಅಡ್ಡಿಪಡಿಸಿದ್ದ ತಂದೆಯನ್ನು ಸ್ವಂತ ಮಗಳೇ ಅತ್ಯಾಚಾರದ ಆರೋಪ ಹೊರಿಸಿ ಜೈಲಿಗಟ್ಟಿರುವ ಪ್ರಕರಣ ಮಹಾರಾಷ್ಟ್ರದಲ್ಲಿ ಬೆಳಕಿಗೆ ಬಂದಿದೆ. ನಿರಪರಾಧಿ ತಂದೆ ಐದೂವರೆ ವರ್ಷಗಳ ಕಾಲ ಜೈಲು ವಾಸ ಅನುಭವಿಸಿದ್ದು ವಿಚಾರಣೆ ನಡೆಸಿದ ಕೋರ್ಟ್ ಇದೀಗ ತಂದೆಯನ್ನು ದೋಷಮುಕ್ತಗೊಳಿಸಿದೆ.
14 ವರ್ಷದ ಬಾಲಕಿ ಸರ್ಕಾರಿ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿದ್ದಳು. ತಂದೆ, ತಾಯಿ, ಇಬ್ಬರು ಕಿರಿಯ ಸಹೋದರಿಯರು, ಮತ್ತಿಬ್ಬರು ಸಹೋದರರೊಂದಿಗೆ ವಾಸವಿದ್ದ ಕುಟುಂಬ. 2017ರ ಮಾರ್ಚ್ 5ರಂದು ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದಾಗಿ ಶಾಲೆಯ ಶಿಕ್ಷಕರ ಮುಂದೆ ಅಳಲು ತೋಡಿಕೊಂಡಿದ್ದಳು. 2016ರ ಜನವರಿಯಿಂದ 2017ರ ಮಾರ್ಚ್ವರೆಗೂ ತನ್ನ ಮೇಲೆ ಪ್ರತೀ ತಿಂಗಳು ಮೂರ್ನಾಲ್ಕು ಸಲ ತಂದೆಯೇ ಅತ್ಯಾಚಾರ ಮಾಡಿದ್ದಾರೆ ಎಂದು ದೂರಿದ್ದಳು.
ಬಾಲಕಿ ಈ ರೀತಿ ಆರೋಪ ಮಾಡುತ್ತಿದ್ದಂತೆ ಶಿಕ್ಷಕರು ಮಹಿಳಾ ಸ್ವಯಂಸೇವಾ ಸಂಸ್ಥೆಗೆ ಮಾಹಿತಿ ನೀಡಿದ್ದರು. ಅಂಧೇರಿಯ ಡಿ.ಎನ್ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿತ್ತು. ಮಹಿಳಾ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶಾಲೆಗೆ ತೆರಳಿ ಬಾಲಕಿ ಹಾಗೂ ಶಿಕ್ಷಕಿಯ ಹೇಳಿಕೆ ದಾಖಲಿಸಿದ್ದರು. ಬಾಲಕಿಗೆ ವೈದ್ಯಕೀಯ ಪರೀಕ್ಷೆ ನಡೆಸಿದ ಪೊಲೀಸರು ಮಾರ್ಚ್ 2017ರಲ್ಲಿ ಎಫ್ಐಆರ್ ದಾಖಲಿಸಿ ತಂದೆಯನ್ನು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಜೈಲಿಗಟ್ಟಿದ್ದರು. ತನಿಖೆ ನಡೆಸಿದ ಪೊಲೀಸರು ಕೋರ್ಟ್‌ಗೆ ಚಾರ್ಜ್ಶೀಟ್ ಸಲ್ಲಿಸಿದ್ದರು. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಮಹಾರಾಷ್ಟ್ರ ವಿಶೇಷ ಪೋಕ್ಸೊ ನ್ಯಾಯಾಲಯ ಇದೀಗ ಆರೋಪಿ ತಂದೆಯನ್ನು ದೋಷಮುಕ್ತಗೊಳಿಸಿ ಜೈಲಿನಿಂದ ಬಿಡುಗಡೆಗೊಳಿಸಿದೆ.
ಬಾಲಕಿ ಓರ್ವ ಯುವಕನೊಂದಿಗೆ ಪ್ರೀತಿಸುವ ನೆಪದಲ್ಲಿ ಅಕ್ರಮ ಸಂಬಂಧ ಹೊಂದಿದ್ದಳು ಎನ್ನಲಾಗಿತ್ತು. ಇದಕ್ಕೆ ತಂದೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ, ತಂದೆಯ ಮೇಲೆಯೇ ಅತ್ಯಾಚಾರದ ಸುಳ್ಳು ಆರೋಪ ಹೊರಿಸಿರುವುದು ಕೋರ್ಟ್ ವಿಚಾರಣೆ ವೇಳೆ ಸಾಬೀತಾಗಿದೆ. ಬಾಲಕಿಯ ಮಾನಸಿಕ ಪರಿಸ್ಥಿತಿ ಚೆನ್ನಾಗಿಲ್ಲ ಎಂಬ ಅಂಶವೂ ಈ ಸಂದರ್ಭದಲ್ಲಿ ಬೆಳಕಿಗೆ ಬಂದಿದೆ. ಇದಲ್ಲದೆ, ದೈಹಿಕ ಪರೀಕ್ಷೆ ವೇಳೆ ಬಾಲಕಿಯ ಮೇಲೆ ತಂದೆಯಿಂದಲೇ ಅತ್ಯಾಚಾರ ನಡೆದಿದೆ ಎಂಬುದಕ್ಕೆ ಪುರಾವೆಗಳು ಸಿಕ್ಕಿಲ್ಲ ಎಂದು ವೈದ್ಯರು ನೀಡಿದ್ದ ವರದಿಯನ್ನು ಕೋರ್ಟ್ ಪರಿಗಣಿಸಿದೆ.
A man falsely accused of sexual assault by his daughter for objecting to her relationship with a boy was acquitted by a local court in Andheri for lack of evidence after spending five and a half years in jail. It is learned that the girl, who was 14 years old and was studying in class VII in a government school at the time had accused her father of continuously raping her. While she was shifted to a juvenile home, the man was arrested by the police under POCSO Act.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm