ಬ್ರೇಕಿಂಗ್ ನ್ಯೂಸ್
28-08-22 05:49 pm HK News Desk ದೇಶ - ವಿದೇಶ
ಇಸ್ಲಮಾಬಾದ್, ಆ 28: ಪಾಕಿಸ್ತಾನದ ಅನೇಕ ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಕಳೆದ 24 ಗಂಟೆಗಳಲ್ಲಿ 119 ಜನರು ಸಾವನ್ನಪ್ಪಿದ್ದಾರೆ. ಒಟ್ಟು ಸಾವಿನ ಸಂಖ್ಯೆಯನ್ನು 1,033ಕ್ಕೆ ಏರಿಕೆಯಾಗಿದೆ.
ಪಾಕಿಸ್ತಾನದಲ್ಲಿ ಮಾನ್ಸೂನ್ ಪ್ರವಾಹವು ವಿನಾಶವನ್ನು ಮುಂದುವರೆಸಿದ್ದು, ದೇಶದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ ಕಳೆದ 24 ಗಂಟೆಗಳಲ್ಲಿ 119 ಜನರು ಸಾವನ್ನಪ್ಪಿದ್ದಾರೆ. ಇದು ದುರಂತದಿಂದ ಒಟ್ಟು ಸಾವಿನ ಸಂಖ್ಯೆಯನ್ನು 1,033 ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.
ಶನಿವಾರ ಬಲೂಚಿಸ್ತಾನದಲ್ಲಿ ನಾಲ್ಕು ಮಂದಿ, ಗಿಲ್ಗಿಟ್ ಬಾಲ್ಟಿಸ್ತಾನ್‌ದಿಂದ ಆರು, ಖೈಬರ್ ಪಖ್ತುಂಖ್ವಾದಿಂದ 31 ಮತ್ತು ಸಿಂಧ್‌ನಿಂದ 76 ಸಾವುಗಳು ವರದಿಯಾಗಿವೆ. ಇನ್ನು ಮಾನ್ಸೂನ್ ಪ್ರವಾಹವು 4 ದಶಲಕ್ಷಕ್ಕೂ ಹೆಚ್ಚು ಜನರ ಮೇಲೆ ಪರಿಣಾಮ ಬೀರುವುದರಿಂದ ಪಾಕಿಸ್ತಾನ ಸರಕಾರವು ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ.
ಭಾರೀ ಮಳೆಯು 33 ಮಿಲಿಯನ್‌ಗಿಂತಲೂ ಹೆಚ್ಚು ಜನರ ಮೇಲೆ ಪರಿಣಾಮ ಬೀರಿದೆ. ದೇಶದ ಕೆಲವು ಭಾಗಗಳನ್ನು ಸಂಪೂರ್ಣವಾಗಿ ಹಾನಿಗೊಳಿಸಿದೆ. ಪಾಕಿಸ್ತಾನದ ಕನಿಷ್ಠ 110 ಜಿಲ್ಲೆಗಳು ಪ್ರವಾಹಕ್ಕೆ ತುತ್ತಾಗಿವೆ. ಒಟ್ಟು 72 ಜಿಲ್ಲೆಗಳನ್ನು ವಿಪತ್ತು ಪೀಡಿತ ಎಂದು ಘೋಷಿಸಲಾಗಿದೆ, ದೇಶವು ಒಂದು ದಶಕದಲ್ಲಿಯೇ ಅತ್ಯಂತ ಭೀಕರವಾದ ನೈಸರ್ಗಿಕ ವಿಕೋಪದಿಂದ ಬಳಲುತ್ತಿದೆ.
ಪ್ರವಾಹದಿಂದ ಒಟ್ಟು 9,49,858 ಮನೆಗಳು ನಾಶವಾಗಿವೆ, ಅದರಲ್ಲಿ 6,62,446 ಮನೆಗಳು ಭಾಗಶಃ ಹಾನಿಗೊಳಗಾಗಿವೆ ಮತ್ತು 2, 87,412 ಸಂಪೂರ್ಣವಾಗಿ ನಾಶವಾಗಿವೆ. ಪ್ರವಾಹ ಸಂಬಂಧಿತ ಘಟನೆಗಳಲ್ಲಿ 7,00,000 ಜಾನುವಾರುಗಳು ಸಾವನ್ನಪ್ಪಿವೆ.
ಶನಿವಾರದಂದು, ಪಾಕಿಸ್ತಾನದ ಪ್ರವಾಹ ಮುನ್ಸೂಚನೆ ವಿಭಾಗ (ಎಫ್‌ಎಫ್‌ಡಿ) ಮುಂದಿನ 24 ಗಂಟೆಗಳಲ್ಲಿ ನೌಶೇರಾದ ಕಾಬೂಲ್ ನದಿಯಲ್ಲಿ ಅತಿ ಹೆಚ್ಚು ಮತ್ತು ಹೆಚ್ಚಿನ ಮಟ್ಟದ ಪ್ರವಾಹ ಮುಂದುವರಿಯುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ರವಾನಿಸಿದೆ.
ನಿರಂತರವಾಗಿ ಸುರಿಯತ್ತಿರುವ ಜೋರು ಮಳೆಯಿಂದಾಗಿ ಪರಿಹಾರ ಕಾರ್ಯಾಚರಣೆಗಳನ್ನು ಕೈಗೊಳ್ಳಲು ಕಷ್ಟಕರವಾಗಿದೆ. ಸಂತ್ರಸ್ತರಿಗೆ ವಿಶೇಷ ಪ್ಯಾಕೇಜ್‌ಗಳನ್ನು ತಲುಪಿಸುವ ಹೆಲಿಕಾಪ್ಟರ್‌ಗಳ ಹಾರಾಟವು ಇಲ್ಲಿ ಕಷ್ಟವಾಗಿದೆ. ಭಾರೀ ಮಳೆಯಿಂದ ಉಂಟಾದ ಹಠಾತ್ ಪ್ರವಾಹಗಳಿಂದಾಗಿ ದೇಶದ ವಿವಿಧ ಪ್ರದೇಶಗಳಲ್ಲಿ ಸೇತುವೆಗಳು ಮತ್ತು ರಸ್ತೆಗಳು ಕೊಚ್ಚಿ ಹೋಗಿವೆ. ಸುಮಾರು 30 ಮಿಲಿಯನ್ ಜನರು ಆಶ್ರಯವಿಲ್ಲದೆ ಪರದಾಡಿದ್ದಾರೆ.
The death toll from ravaging monsoon floods in Pakistan has crossed 1,000, as several countries, including Qatar and Iran, pledged emergency support in the wake of a deluge that has been described as a “humanitarian disaster of epic proportions”.The country’s National Disaster Management Authority (NDMA) said on Sunday that the toll since June has reached 1,033, with 119 people dying in the last 24 hours. It warned of “very high” level flooding in some areas alongside the Kabul and Indus Rivers, particularly in Nowshera in Khyber Pakhtunkhwa (KP) province and Kalabagh and Chashma in Punjab province.
28-11-24 05:04 pm
Bangalore Correspondent
MLA Gaviyappa, DK Shivakumar: ಯಾವುದೇ ಕಾರಣಕ್ಕೂ...
26-11-24 10:46 pm
Shivamogga, Monkey fever, Dinesh Gundu Rao: ಮ...
26-11-24 10:23 pm
BJP, Vijayendra: ಉಪ ಚುನಾವಣೆ ಸೋಲು ; ಪಕ್ಷದ ಕಾರ್...
26-11-24 06:56 pm
MLA Gaviyappa, Congress: ಗ್ಯಾರಂಟಿ ಸ್ಕೀಂನಿಂದಾಗ...
26-11-24 06:11 pm
27-11-24 02:00 pm
HK News Desk
ರಸ್ತೆ ಬದಿ ಮಲಗಿದ್ದ ಅಲೆಮಾರಿ ಗುಂಪಿನ ಮೇಲಿಂದ ಹರಿದ...
27-11-24 12:36 pm
ಕ್ಯುಆರ್ ಕೋಡ್ ಸಹಿತ ಹೊಸ ನಮೂನೆಯ ಪ್ಯಾನ್ 2.0 ಜಾರಿ...
26-11-24 09:43 pm
BJP Devendra Fadnavis, Eknath Shinde: ಮಹಾರಾಷ್...
26-11-24 07:32 pm
ಪ್ರವಾಸೋದ್ಯಮ ಇಲಾಖೆಗೆ ನಿಗದಿಪಡಿಸಿದ್ದ ದರ್ಶನ ಟಿಕೆಟ...
23-11-24 11:07 pm
28-11-24 06:05 pm
Mangalore Correspondent
VHP, Mangalore, Bangladesh: ಬಾಂಗ್ಲಾದೇಶದಲ್ಲಿ ಹ...
28-11-24 03:24 pm
Belthangady suicide, Crime, Mangalore; ನಂಬಿಸಿ...
28-11-24 02:13 pm
Mangalore, Anupam Agarwal, Ramanatha Rai: ರಸ್...
28-11-24 01:56 pm
ಸ್ಪೀಕರ್ ಆಗಿ ಹತ್ತು ದೇಶ ಸುತ್ತಿದ ಯುಟಿ ಖಾದರ್ ; ಜ...
28-11-24 01:25 pm
27-11-24 03:36 pm
HK News Desk
Mangalore, Robbery, Crime : ಕೊಲ್ಯದ ಜಾಯ್ ಲ್ಯಾಂ...
27-11-24 01:11 pm
Mangalore crime, ACP Dhanya Nayak, Drugs: ಎಸಿ...
26-11-24 03:10 pm
ಹುಬ್ಬಳ್ಳಿ ದರೋಡೆ ಪ್ರಕರಣದಲ್ಲಿ ಮಂಗಳೂರು ನಂಟು ; ಉಳ...
25-11-24 06:17 pm
Honeytrap Bangalore, Crime, Udupi: ಪ್ರೊಫೆಸರ್...
24-11-24 04:33 pm