ಬ್ರೇಕಿಂಗ್ ನ್ಯೂಸ್
29-08-22 12:28 pm HK News Desk ದೇಶ - ವಿದೇಶ
ಮುಂಬೈ, ಆಗಸ್ಟ್ 29 : ಮಂಗಳೂರು ಮೂಲದ ಯುವತಿ ದಿವಿತಾ ರೈ ಪ್ರತಿಷ್ಠಿತ ಲಿವಾ ಮಿಸ್ ದಿವಾ ಯುನಿವರ್ಸ್-2022 (LIVA Miss Diva Universe 2022) ಸೌಂದರ್ಯ ಸ್ಪರ್ಧೆಯಲ್ಲಿ ಕಿರೀಟ ತನ್ನದಾಗಿಸಿಕೊಂಡಿದ್ದಾರೆ. 23 ವರ್ಷ ವಯಸ್ಸಿನ ಇವರು ಮಿಸ್ ಯುನಿವರ್ಸ್ 2022 ಸೌಂದರ್ಯ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಮುಂಬೈನಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ 2021ರ ಮಿಸ್ ಯುನಿವರ್ಸ್ ಹರ್ನಾಝ್ ಸಂಧು ಅವರು, ದಿವಿತಾ ರೈ ಅವರಿಗೆ ಲಿವಾ ಮಿಸ್ ದಿವಾ 2022 ಪ್ರಶಸ್ತಿ ಕಿರೀಟ ತೊಡಿಸಿದರು. ತೆಲಂಗಾಣ ಮೂಲದ ಪ್ರಜ್ಞಾ ಅಯ್ಯಂಗಾರಿಯವರು ಲಿವಾ ಮಿಸ್ ದಿವಾ ಸುಪ್ರ ನ್ಯಾಷನಲ್-2022 ಗೌರವಕ್ಕೆ ಪಾತ್ರರಾದರು.
ಅಪಾರ ಅಭಿಮಾನಿಗಳು ಮತ್ತು ತಾರಾಬಳಗ ಪಾಲ್ಗೊಂಡಿದ್ದ ಈ ಕಾರ್ಯಕ್ರಮ ಮುಂಬೈನ ಮಹಾಲಕ್ಷ್ಮಿಯಲ್ಲಿರುವ ಫೇಮಸ್ ಸ್ಟುಡಿಯೋದಲ್ಲಿ ನಡೆಯಿತು. ಮಿಸ್ ಯುನಿವರ್ಸ್ 2022 ಹರ್ನಾಝ್ ಕೌರ್ ಸಂಧು ಮತ್ತು ಮಾಜಿ ಮಿಸ್ ಯುನಿವರ್ಸ್ ಲಾರಾದತ್ತಾ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದರು. ಹರ್ನಾಝ್ ಅವರಿಗೆ ಪ್ರೈಡ್ ಆಫ್ ಇಂಡಿಯಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮಂಗಳೂರಿನಲ್ಲಿ ಜನಿಸಿದ ದಿವಿತಾ ರೈ ಅವರ ತಂದೆ ದಿಲೀಪ್ ರೈ ಹಾಗೂ ತಾಯಿ ಪವಿತ್ರಾ ರೈ. ತಂದೆಯ ಉದ್ಯೋಗದ ಕಾರಣದಿಂದಾಗಿ ದಿವಿತಾ ಬೇರೆ ಬೇರೆ ಸ್ಥಳಗಳಲ್ಲಿ ಬೆಳೆದಿದ್ದರು. ಮುಂಬೈನಲ್ಲಿ ನೆಲೆಸಿರುವ ಅವರು ಜೆ.ಜೆ.ಕಾಲೇಜ್ ಆಫ್ ಆರ್ಕಿಟೆಕ್ಚರ್ ನಲ್ಲಿ ಪದವಿ ಪಡೆದಿದ್ದಾರೆ. ಇವರ ಅಣ್ಣ ದೈವಿಕ್ ರೈ ಕ್ರಿಕೆಟಿಗ. ಭಾರತದ ಒಳಾಂಗಣ ಕ್ರಿಕೆಟ್ ತಂಡದ ಸದಸ್ಯರಾಗಿರುವ ಇವರು 2017ರ ಒಳಾಂಗಣ ಕ್ರಿಕೆಟ್ ವಿಶ್ವಕಪ್ ಜಯಿಸಿದ ಭಾರತ ತಂಡದಲ್ಲಿದ್ದರು.
It’s that time of the year again when we’re going to celebrate beauty, fashion and lifestyle in full swing! Yes, you read it right! Miss Diva 2022 is back to choose the best person among the participants who could represent India with pride on the global stage as Miss Diva Universe 2022 and Miss Diva Supranational 2022.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm