ಬ್ರೇಕಿಂಗ್ ನ್ಯೂಸ್
31-08-22 08:06 pm HK News Desk ದೇಶ - ವಿದೇಶ
ನವದೆಹಲಿ, ಆ 31: ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ತಾಯಿ ವಿಧಿವಶರಾದರು. ಇಟಲಿಯಲ್ಲಿನ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಸೋನಿಯಾ ಗಾಂಧಿ ತಾಯಿ, ಸಂಸದ ರಾಹುಲ್ ಗಾಂಧಿ ಅಜ್ಜಿ ಪಾವೊಲಾ ಮೈನೋ ಆಗಸ್ಟ್ 27ರಂದು ನಿಧನರಾಗಿದ್ದಾರೆ. ಮಂಗಳವಾರ ಅಂತ್ಯಕ್ರಿಯೆ ನಡೆದಿದೆ.ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಸಂವಹನ ವಿಭಾಗದ ಉಸ್ತುವಾರಿ ಜೈರಾಮ್ ರಮೇಶ್ ಈ ಕುರಿತು ಟ್ವೀಟ್ ಮಾಡಿದ್ದಾರೆ. ವೈದ್ಯಕೀಯ ಪರೀಕ್ಷೆಗಾಗಿ ಸೋನಿಯಾ ಗಾಂಧಿ ವಿದೇಶಕ್ಕೆ ತೆರಳಿದ್ದು, ರಾಹುಲ್ ಗಾಂಧಿ ಸಹ ಅವರ ಜೊತೆ ಇದ್ದಾರೆ.

ತಮ್ಮ ಟ್ವೀಟ್‌ನಲ್ಲಿ ಜೈರಾಮ್ ರಮೇಶ್, 'ಶ್ರೀಮತಿ ಸೋನಿಯಾ ಗಾಂಧಿಯವರ ತಾಯಿ, ಶ್ರೀಮತಿ ಪಾವೊಲಾ ಮೈನೋ ಅವರು 27 ಆಗಸ್ಟ್ 2022 ರಂದು ಶನಿವಾರ ಇಟಲಿಯಲ್ಲಿ ತಮ್ಮ ಮನೆಯಲ್ಲಿ ನಿಧನರಾದರು. ಅಂತ್ಯಕ್ರಿಯೆ ನಿನ್ನೆ ನಡೆಯಿತು' ಎಂದು ಮಾಹಿತಿ ನೀಡಿದ್ದಾರೆ.

ವಿದೇಶದಲ್ಲಿರುವ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಎಂದು ನವದೆಹಲಿಗೆ ವಾಪಸ್ ಆಗಲಿದ್ದಾರೆ? ಎಂಬುದು ಇನ್ನೂ ಖಚಿತವಾಗಿಲ್ಲ. ಆದರೆ ದೆಹಲಿಯಲ್ಲಿ ಸೆಪ್ಟೆಂಬರ್ 4ರಂದು ನಡೆಯಲಿರುವ 'ಮೆಹೆಂಗೈ ಪರ್ ಹಲ್ಲಾ ಬೋಲ್' ಜಾಥಾ ಉದ್ದೇಶಿಸಿ ಅವರು ಮಾತನಾಡಲಿದ್ದಾರೆ ಎಂಬ ಮಾಹಿತಿ ಇದೆ.
ಭಾನುವಾರ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಬಗ್ಗೆ ಚರ್ಚಿಸಲು ಸಭೆ ನಡೆದಿತ್ತು. ಸೋನಿಯಾ ಗಾಂಧಿ ವಿದೇಶದಿಂದಲೇ ಸಭೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಪಾಲ್ಗೊಂಡಿದ್ದರು. ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದ್ದು, ಅಗತ್ಯವಿದ್ದರೆ ಅಕ್ಟೋಬರ್ 19ರಂದು ಮತ ಎಣಿಕೆ ನಡೆಯಲಿದೆ.
ಕಾಂಗ್ರೆಸ್ ಪಕ್ಷ ಕಾಶ್ಮೀರದಿಂದ ಕನ್ಯಾಕುಮಾರಿ ತನಕ 'ಭಾರತ್ ಜೋಡೋ' ಯಾತ್ರೆಗೆ ತಯಾರಿ ನಡೆಸಿದೆ. ಸೆಪ್ಟೆಂಬರ್ 7ರಂದು ಈ ಯಾತ್ರೆಗೆ ಚಾಲನೆ ಸಿಗಲಿದೆ. 3500 ಕಿ. ಮೀ.ಗಳ ದೊಡ್ಡ ಪಾದಯಾತ್ರೆ ಇದಾಗಿದೆ. ಸುಮಾರು 150 ದಿನಗಳ ಕಾಲ ನಡೆಯುವ ಬೃಹತ್ ಪಾದಯಾತ್ರೆ ನಡೆಯಲಿದೆ.
Congress president Sonia Gandhi’s mother, Paola Maino, died on August 27 and her funeral was held on Tuesday. Sonia Gandhi had left last week to meet her mother. This was part of her trip abroad for medical check-ups, where her son Rahul Gandhi and daughter Priyanka Gandhi Vadra went with her.Jairam Ramesh, Congress general secretary of communications, has tweeted the news of the death of Sonia Gandhi’s mother.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
09-09-26 03:29 pm
HK News Staffer
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
09-09-26 07:45 pm
HK News Staffer
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm
ಹೆಂಡತಿ ಅಡುಗೆ ಮಾಡಲ್ಲ, ಅತಿಯಾಗಿ ಮೊಬೈಲ್ ಫೋನ್ ಬಳಸು...
09-09-26 06:20 pm
8 ತಿಂಗಳ ಬಳಿಕ ನಾಪತ್ತೆಯಾಗಿದ್ದ ಬೆಂಗಳೂರು ಪಿಯು ವಿದ...
09-09-26 12:16 pm
ಸೌದಿ ಅರೇಬಿಯಾದಲ್ಲಿ ಕುತ್ತಾರಿನ ಯುವಕ ದಿಢೀರ್ ಸಾವು...
08-09-26 09:19 pm