ಬ್ರೇಕಿಂಗ್ ನ್ಯೂಸ್
03-09-22 05:45 pm HK News Desk ದೇಶ - ವಿದೇಶ
ಶ್ರೀಲಂಕಾ,ಸೆ.3 : ಸ್ವಯಂ ಘೋಷಿತ ದೇವಮಾನವ ಮತ್ತು ಅತ್ಯಾಚಾರದ ಆರೋಪ ಹೊತ್ತಿರುವ ಸ್ವಾಮಿ ನಿತ್ಯಾನಂದ ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿರುವುದರಿಂದ ಶ್ರೀಲಂಕಾದಲ್ಲಿ ವೈದ್ಯಕೀಯ ಆಶ್ರಯವನ್ನು ಕೋರಿದ್ದಾರೆ ಎನ್ನಲಾಗಿದೆ.
ತನ್ನ ಆರೋಗ್ಯದಲ್ಲಿ ಕ್ಷೀಣಿಸುತ್ತಿರುವುದರಿಂದ ತನ್ನ ಜೀವ ಅಪಾಯದಲ್ಲಿದೆ ಎಂದು ನಿತ್ಯಾನಂದ ಸ್ವಾಮಿ ಶ್ರೀಲಂಕಾದ ಮೊರೆ ಹೋಗಿದ್ದಾರೆ. ಭಾರತದಿಂದ ಪರಾರಿಯಾಗಿಯಾಗಿರುವ ನಿತ್ಯಾನಂದ ಸ್ವಾಮಿ ತನ್ನದೇ ಸಾಮ್ರಾಜ್ಯವನ್ನು ಕಟ್ಟಿಕೊಂಡಿದ್ದರು. ಆಗಸ್ಟ್ 7ರಂದು ದ್ವೀಪ ರಾಷ್ಟ್ರ ಶ್ರೀಲಂಕಾದ ಅಧ್ಯಕ್ಷರಿಗೆ ಪತ್ರ ಬರೆದಿರುವ ನಿತ್ಯಾನಂದ ಸ್ವಾಮಿ ತನಗೆ ವೈದ್ಯಕೀಯ ಆರೈಕೆಯ ‘ತುರ್ತು’ ಅಗತ್ಯವಿದೆ ಎಂದಿದ್ದಾರೆ.
ತಾನೇ ಸ್ಥಾಪಿಸಿದ ಕೈಲಾಸ ರಾಜ್ಯದಲ್ಲಿ ವೈದ್ಯಕೀಯ ಮೂಲಸೌಕರ್ಯಗಳ ಕೊರತೆಯಿದೆ ಎಂದು ನಿತ್ಯಾನಂದ ಶ್ರೀಲಂಕಾದ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. ನಿತ್ಯಾನಂದ ತೀವ್ರವಾಗಿ ಅಸ್ವಸ್ಥರಾಗಿದ್ದಾರೆ. ಅವರಿಗೆ ಚಿಕಿತ್ಸೆಯ ಅವಶ್ಯಕತೆಯಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ನಿತ್ಯಾನಂದ ಪರವಾಗಿ ಕೈಲಾಸದ ವಿದೇಶಾಂಗ ವ್ಯವಹಾರಗಳ ಮಂತ್ರಿ ಎಂದು ಹೇಳಿಕೊಳ್ಳುವ ನಿತ್ಯ ಪ್ರೇಮಾತ್ಮ ಆನಂದ ಸ್ವಾಮಿಯವರು ಶ್ರೀಲಂಕಾದ ಅಧ್ಯಕ್ಷರಿಗೆ ಬರೆದ ಪತ್ರದಲ್ಲಿ ಈ ಬಗ್ಗೆ ವಿನಂತಿ ಮಾಡಲಾಗಿದೆ.
ಹಿಂದೂ ಧರ್ಮದ ಪರಮ ಪೀಠಾಧಿಪತಿ ಪೂಜ್ಯ ನಿತ್ಯಾನಂದ ಪರಮಶಿವಂ ಅವರಿಗೆ ಗಂಭೀರ ವೈದ್ಯಕೀಯ ಸ್ಥಿತಿಗೆ ತುರ್ತು ವೈದ್ಯಕೀಯ ಆರೈಕೆಯ ಅಗತ್ಯವಿದೆ. ಪ್ರಸ್ತುತ ಕೈಲಾಸದಲ್ಲಿ ಲಭ್ಯವಿರುವ ವೈದ್ಯಕೀಯ ಸೌಲಭ್ಯಗಳು ಅವರಿಗೆ ಸಾಕಾಗುತ್ತಿಲ್ಲ. ಈ ಸಮಯದಲ್ಲಿ ಅತ್ಯಂತ ತುರ್ತಾಗಿ ಅಗತ್ಯವಿರುವ ವೈದ್ಯಕೀಯ ಮೂಲಸೌಕರ್ಯವನ್ನು ನಮ್ಮ ಕೈಲಾಸ ಹೊಂದಿಲ್ಲ. ಹೀಗಾಗಿ, ನಿಮ್ಮ ಸಹಾಯ ಕೋರುತ್ತಿದ್ದೇವೆ ಎಂದು ಪತ್ರದಲ್ಲಿ ಬರೆಯಲಾಗಿದೆ.
2018ರ ನವೆಂಬರ್‌ನಲ್ಲಿ ನಿತ್ಯಾನಂದ ಸ್ವಾಮಿಯ ಇಬ್ಬರು ಶಿಷ್ಯರನ್ನು ಅಪಹರಣ ಮಾಡಿದ ಹಿನ್ನೆಲೆಯಲ್ಲಿ ಗುಜರಾತ್ ಪೊಲೀಸರು ಅವರನ್ನು ಬಂಧಿಸಿದ್ದರು. ಅದಾದ ಬಳಿಕ ನಿತ್ಯಾನಂದ ಭಾರತದಿಂದ ಪರಾರಿಯಾಗಿದ್ದರು. ಕರ್ನಾಟಕದಲ್ಲಿ ನಿತ್ಯಾನಂದನ ವಿರುದ್ಧ ಅತ್ಯಾಚಾರ ಆರೋಪ ಕೂಡ ದಾಖಲಾಗಿತ್ತು. 2010ರಲ್ಲಿ ನಿತ್ಯಾನಂದನ ಮಾಜಿ ಚಾಲಕ ಲೆನಿನ್ ನೀಡಿದ ದೂರಿನ ಆಧಾರದ ಮೇಲೆ ನಿತ್ಯಾನಂದನ ವಿರುದ್ಧ ಅತ್ಯಾಚಾರ ಆರೋಪಗಳನ್ನು ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ನಿತ್ಯಾನಂದನನ್ನು ಬಂಧಿಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.
Self-proclaimed spiritual leader and accused of rape, Nithyananda is reportedly seeking political asylum in Sri Lanka. Citing a deterioration in his health, the fugitive godman penned a letter to the president of the island nation on August 7 and flagged an 'urgent' need for medical attention. The letter mentioned the scarcity of medical infrastructure in the Sovereign State of Shrikailasa, an island established and named by the spiritual leader.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm