ಬ್ರೇಕಿಂಗ್ ನ್ಯೂಸ್
05-09-22 06:22 pm HK News Desk ದೇಶ - ವಿದೇಶ
ನವದೆಹಲಿ, ಸೆ 05: ಹಿಜಾಬ್ ಕುರಿತು ಕರ್ನಾಟಕ ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್ 7ಕ್ಕೆ ಮುಂದೂಡಿಕೆ ಮಾಡಿದೆ. ಕರ್ನಾಟಕದ ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿರ್ಬಂಧಿಸುವಂತೆ ಹೈಕೋರ್ಟ್ ಆದೇಶ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಹಲವು ಸಂಘಟನೆಗಳು ಮತ್ತು ವ್ಯಕ್ತಿಗಳು ಮೇಲ್ಮನವಿ ಅರ್ಜಿಯನ್ನು ಸಲ್ಲಿಸಿದ್ದರು. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧದ ವಿವಿಧ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಬುಧವಾರಕ್ಕೆ ಮುಂದೂಡಿದೆ.
ಹಿಜಾಬ್ ಧರಿಸುವುದು ಸಂವಿಧಾನದ 25ನೇ ವಿಧಿಯ ಅಡಿಯಲ್ಲಿ ರಕ್ಷಿಸಬಹುದಾದ ಅತ್ಯಗತ್ಯ ಧಾರ್ಮಿಕ ಆಚರಣೆಯ ಭಾಗವಲ್ಲ ಎಂಬ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಹಲವಾರು ಅರ್ಜಿಗಳು ಸಲ್ಲಿಕೆಯಾಗಿವೆ.
ಈ ಹಿಂದೆ, ಆಗಿನ ಸಿಜೆಐ ಎನ್. ವಿ. ರಮಣ ನೇತೃತ್ವದ ಪೀಠದ ಮುಂದೆ ಹಲವಾರು ಸಂದರ್ಭಗಳಲ್ಲಿ ತುರ್ತು ವಿಚಾರಣೆಗಾಗಿ ಅರ್ಜಿಗಳನ್ನು ಉಲ್ಲೇಖಿಸಲಾಗಿತ್ತು. ಆದರೆ ಪ್ರಕರಣವನ್ನು ವಿಚಾರಣೆಗೆ ಪಟ್ಟಿ ಮಾಡಿರಲಿಲ್ಲ. ಉನ್ನತ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿರುವ ಮೇಲ್ಮನವಿಗಳಲ್ಲಿ ಒಂದು "ಸರ್ಕಾರಿ ಅಧಿಕಾರಿಗಳ ಮಲತಾಯಿ ವರ್ತನೆಯು ವಿದ್ಯಾರ್ಥಿಗಳ ನಂಬಿಕೆಯ ಮೇಲೆ ಕೆಟ್ಟ ಪರಿಣಾ ಬೀರುತ್ತದೆ ಮತ್ತು ಅನಗತ್ಯ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಗೆ ಕಾರಣವಾಗುತ್ತದೆ" ಎಂದು ಆರೋಪಿಸಿದೆ.
"ಭಾರತದ ಸಂವಿಧಾನದ 25ನೇ ವಿಧಿಯ ಅಡಿಯಲ್ಲಿ ಪ್ರತಿಪಾದಿಸಲಾದ ಅಗತ್ಯ ಧಾರ್ಮಿಕ ಆಚರಣೆಗಳ ಮೂಲಭೂತ ಅಂಶವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗಿಲ್ಲ" ಎಂದು ಮನವಿಯಲ್ಲಿ ಆರೋಪಿಸಲಾಗಿದೆ. "ಹಿಜಾಬ್ ಅಥವಾ ಶಿರಸ್ತ್ರಾಣವನ್ನು ಧರಿಸುವುದು ಇಸ್ಲಾಂ ಧರ್ಮದ ಆಚರಣೆಗೆ ಅಗತ್ಯವಾದ ಅಭ್ಯಾಸವಾಗಿದೆ" ಎಂದು ಅದರಲ್ಲಿ ಸೇರಿಸಲಾಗಿದೆ.
After intense arguments, the Supreme Court on Monday adjourned to 7 September the hearing on various pleas against Karnataka High Court’s judgment upholding the ban on Hijab in educational institutions.A bench, comprising Justices Hemant Gupta and Sudhanshu Dhulia, is hearing the batch of petitions against the HC order.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm