ಸಿಧು ಮೂಸೆವಾಲಾ ಹತ್ಯೆ ಪ್ರಕರಣ ; ಭಯೋತ್ಪಾದಕ ನಂಟು, ದೆಹಲಿ ಸೇರಿ ವಿವಿಧೆಡೆ ಎನ್ಐಎ ದಾಳಿ 

12-09-22 12:03 pm       HK News Desk   ದೇಶ - ವಿದೇಶ

ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಭಯೋತ್ಪಾದಕ ಸಂಘಟನೆಗಳ ಕೈವಾಡದ ಶಂಕೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ದೆಹಲಿ, ದೆಹಲಿ-ಎನ್‌ಸಿಆರ್, ಹರಿಯಾಣ ಮತ್ತು ಪಂಜಾಬ್‌ನ ಅನೇಕ ಸ್ಥಳಗಳಲ್ಲಿ ಸೋಮವಾರ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. 

ನವದೆಹಲಿ, ಸೆ.12: ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಭಯೋತ್ಪಾದಕ ಸಂಘಟನೆಗಳ ಕೈವಾಡದ ಶಂಕೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ದೆಹಲಿ, ದೆಹಲಿ-ಎನ್‌ಸಿಆರ್, ಹರಿಯಾಣ ಮತ್ತು ಪಂಜಾಬ್‌ನ ಅನೇಕ ಸ್ಥಳಗಳಲ್ಲಿ ಸೋಮವಾರ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. 

ಈ ಕುರಿತು ಎಎನ್ಐ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದ್ದು, ಸ್ಥಳೀಯ ಪೊಲೀಸ್ ಪಡೆ ಸಹಾಯದೊಂದಿಗೆ ಎನ್‌ಐಎ ಏಕಕಾಲದಲ್ಲಿ ವಿವಿಧೆಡೆ ದಾಳಿ ನಡೆಸಿರುವ ಫೋಟೊಗಳನ್ನು ಹಂಚಿಕೊಂಡಿದೆ.‌

ಸಿಧು ಮೂಸೆವಾಲಾ ಹತ್ಯೆಗೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ಭಯೋತ್ಪಾದಕ ನಂಟಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿತ್ತು. ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯಿ ಸಿಧು ಮೂಸೆವಾಲಾ ಹತ್ಯೆಯ ಪ್ರಮುಖ ಸಂಚುಕೋರ ಎನ್ನಲಾಗಿದ್ದು, ಸದ್ಯ ಜೈಲಿನಲ್ಲಿದ್ದಾನೆ. ಬಿಷ್ಣೋಯಿ ಸಹಚರ ಕೆನಡಾದಲ್ಲಿ ನೆಲೆಸಿರುವ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್ ತಾನೇ ಕೃತ್ಯ ಎಸಗಿದ್ದಾಗಿ ಹೇಳಿಕೊಂಡಿದ್ದ.‌ ಈ ಬಗ್ಗೆಯೂ ಆತನ ಪಾತ್ರವನ್ನು ಎನ್‌ಐಎ ತನಿಖೆ ನಡೆಸುತ್ತಿದೆ. ಮೇ 29ರಂದು ಸಿಧು ಮೂಸೆವಾಲಾ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆಗೈದಿದ್ದರು.

 

The National Investigation Agency (NIA) is conducting raids across 50 locations in Delhi, Haryana and Punjab in connection with suspected terror gangs linked to the killing of Punjabi singer Sidhu Moose Wala, sources said on Monday.