ಬ್ರೇಕಿಂಗ್ ನ್ಯೂಸ್
12-09-22 06:53 pm HK News Desk ದೇಶ - ವಿದೇಶ
ಪಣಜಿ, ಸೆ.12: ಬಿಜೆಪಿ ನಾಯಕಿ, ಟಿವಿ ರಿಯಾಲಿಟಿ ಶೋ ತಾರೆ ಸೋನಾಲಿ ಫೋಗಟ್ ಸಾವಿನ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಲು ಗೋವಾ ಸರಕಾರ ಶಿಫಾರಸು ಮಾಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೋವಾ ಸಿಎಂ ಪ್ರಮೋದ್ ಸಾವಂತ್, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಪತ್ರ ಬರೆದಿದ್ದು ಸಿಬಿಐ ತನಿಖೆ ನಡೆಸಲು ಕೋರಿದ್ದೇನೆ ಎಂದು ತಿಳಿಸಿದ್ದಾರೆ.
ಹರ್ಯಾಣದಲ್ಲಿ ಬಿಗ್ ಬಾಸ್ ತಾರೆಯೂ ಆಗಿದ್ದ ಸೋನಾಲಿ ಫೋಗಟ್ ಆಗಸ್ಟ್ 23ರಂದು ಗೋವಾಕ್ಕೆ ಬಂದಿದ್ದ ವೇಳೆ ನಿಗೂಢ ಸಾವು ಕಂಡಿದ್ದರು. ಈ ಬಗ್ಗೆ ಕುಟುಂಬಸ್ಥರು ಸೋನಾಲಿ ಜೊತೆಗಿದ್ದ ಮ್ಯಾನೇಜರ್ ಬಗ್ಗೆಯೇ ಸಂಶಯ ವ್ಯಕ್ತಪಡಿಸಿದ್ದರು. ತನಿಖೆ ನಡೆಸಿದ್ದ ಗೋವಾ ಪೊಲೀಸರು ಇಬ್ಬರು ಮ್ಯಾನೇಜರ್ ಸೇರಿದಂತೆ ಐದು ಮಂದಿಯನ್ನು ಬಂಧಿಸಿದ್ದರು.

ಆದರೆ ಪ್ರಕರಣದ ತನಿಖೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಸೋದರರು ಸಿಬಿಐ ತನಿಖೆ ನಡೆಸಲು ಒತ್ತಾಯಿಸಿದ್ದರು. ಹರ್ಯಾಣದಲ್ಲಿ ನೆಲೆಸಿದ್ದ ಸೋನಾಲಿ ಫೋಗಟ್ ಅವರ ಪತಿ ನಾಲ್ಕು ವರ್ಷಗಳ ಹಿಂದೆಯೇ ತೀರಿಕೊಂಡಿದ್ದರು. ಆನಂತರ, ಪರಿಚಯ ಆಗಿದ್ದ ಸುಖ್ ವಿಂದರ್ ಸಿಂಗ್ ತಾನೇ ಆಕೆಯ ಮ್ಯಾನೇಜರ್ ಆಗಿ ಜೊತೆ ಸೇರಿಕೊಂಡಿದ್ದ. ಆದರೆ ಈ ನಡುವೆ ಆಕೆಗೆ ಮತ್ತು ಬರಿಸುವ ಜ್ಯೂಸ್ ಕೊಟ್ಟು ಅತ್ಯಾಚಾರ ಎಸಗಿದ್ದಲ್ಲದೆ, ಅದರ ವಿಡಿಯೋ ಮಾಡಿಟ್ಟು ಆಕೆಯ ಆಸ್ತಿಯನ್ನು ಕೊಳ್ಳೆ ಹೊಡೆದಿದ್ದರು. ಪದೇ ಪದೇ ಅತ್ಯಾಚಾರ ನಡೆಸಿ ಕಿರುಕುಳ ನೀಡುತ್ತಿದ್ದರು ಅನ್ನುವ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಸೋನಾಲಿ ಸೋದರನೇ ಮಾಧ್ಯಮಕ್ಕೆ ಮಾಹಿತಿ ನೀಡಿದ್ದು, ಇದು ಸಹಜ ಸಾವಲ್ಲ, ಕೊಲೆಯೆಂದು ಆರೋಪ ಮಾಡಿದ್ದರು. ಅದರಂತೆ, ಗೋವಾ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದರು.
The Ministry of Home Affairs (MHA) on Monday recommended a CBI probe into BJP leader Sonali Phogat’s death case, sources told ANI news agency.Earlier in the day, the Goa government said it will hand over the investigation of the case to the Central Bureau of Investigation. Chief Minister Pramod Sawant wrote to Union Home Minister Amit Shah to hand over the murder case to the central agency.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm