ಬ್ರೇಕಿಂಗ್ ನ್ಯೂಸ್
13-09-22 10:33 pm HK News Desk ದೇಶ - ವಿದೇಶ
ಅಹ್ಮದಾಬಾದ್, ಸೆ.13 : ಆಮ್ ಆದ್ಮಿ ಪಕ್ಷ ಗುಜರಾತ್‌ನಲ್ಲಿ ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ಭ್ರಷ್ಟಾಚಾರ ರಹಿತ ಆಡಳಿತ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಭರವಸೆ ನೀಡಿದ್ದಾರೆ.
ಈ ವರ್ಷದ ಅಂತ್ಯದಲ್ಲಿ ನಡೆಯಲಿರುವ ಗುಜರಾತ್ ವಿಧಾನಸಭೆ ಚುನಾವಣೆಗೆ ಪ್ರಚಾರ ನಡೆಸುತ್ತಿರುವ ಅವರು, ಮಂಗಳವಾರ ಅಹ್ಮದಾಬಾದ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದರು. ರಾಜ್ಯದಲ್ಲಿ ಎಎಪಿ ಸರ್ಕಾರ ರಚಿಸಿದರೆ ಮುಖ್ಯಮಂತ್ರಿ, ಸಚಿವರು, ಶಾಸಕರು, ವಿರೋಧ ಪಕ್ಷದ ಶಾಸಕರು ಮತ್ತು ಸರ್ಕಾರಿ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ಪಾಲ್ಗೊಳ್ಳುವುದಿಲ್ಲ. ಭ್ರಷ್ಟಾಚಾರ ನಡೆಸಿ ಸಿಕ್ಕಿಬಿದ್ದವರನ್ನು ಜೈಲಿಗೆ ಕಳಿಸಲಾಗುವುದು ಎಂದು ಪಕ್ಷವು ಭರವಸೆ ನೀಡುತ್ತದೆ ಎಂದರು.
ಅಹ್ಮದಾಬಾದ್‌ನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಗುಜರಾತ್‌ನಲ್ಲಿ ನಾನು ಯಾರನ್ನೇ ಭೇಟಿಯಾದರೂ ಅವರು ನನಗೆ ಮೊದಲು ಹೇಳುವುದು ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎಂದು. ಸರ್ಕಾರದಿಂದ ಕೆಲಸ ಮಾಡಿಸಿಕೊಳ್ಳಬೇಕಾದರೆ ಲಂಚ ನೀಡಲೇಬೇಕಾದ ಪರಿಸ್ಥಿತಿ ಇದೆ. ಆಡಳಿತದ ಕೆಳ ಹಂತಗಳಲ್ಲಿ ಭ್ರಷ್ಟಾಚಾರವಿದೆ. ಮೇಲಿನ ಹಂತಗಳಲ್ಲಿ ಹಗರಣಗಳು ನಡೆದಿವೆ. ಇದರ ವಿರುದ್ಧ ಮಾತನಾಡಿದವರನ್ನು ಬೆದರಿಸಲಾಗುತ್ತದೆ' ಎಂದು ಹೇಳಿದರು.
ತೆರಿಗೆ ರೂಪದಲ್ಲಿ ಸಾರ್ವಜನಿಕರಿಂದ ಸಂಗ್ರಹವಾಗುವ ಪ್ರತಿಯೊಂದು ರೂಪಾಯಿಯೂ ಗುಜರಾತ್ ಜನರ ಸೇವೆಗಾಗಿ ವಿನಿಯೋಗವಾಗುತ್ತದೆ. ಗುಜರಾತ್‌ನಲ್ಲಿ ಶಾಸಕರು ಮತ್ತು ಸರ್ಕಾರಿ ಅಧಿಕಾರಿಗಳು ಸದ್ಯ ನಡೆಸುತ್ತಿರುವ ಅಕ್ರಮ ವ್ಯವಹಾರಗಳನ್ನು ತಡೆಯಲಾಗುವುದು. ಈಗಿನ ರಾಜ್ಯ ಸರ್ಕಾರ ನಡೆಸಿರುವ ಹಗರಣಗಳ ತನಿಖೆ ನಡೆಸಿ, ಅಕ್ರಮವಾಗಿ ಸಂಗ್ರಹವಾಗಿರುವ ಹಣವನ್ನು ಗುಣಮಟ್ಟದ ಶಿಕ್ಷಣ, ಉಚಿತ ವಿದ್ಯುತ್‌ನಂಥ ಸಾರ್ವಜನಿಕರ ಸೇವೆಗೆ ವಿನಿಯೋಗ ಮಾಡಲಾಗುವುದು ಎಂದರು.
ದೆಹಲಿ ಮಾದರಿಯಲ್ಲೇ ಸರ್ಕಾರದ ಹಲವಾರು ಸೇವೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಕೆಲಸವನ್ನು ಮಾಡಲಾಗುವುದು ಎಂದವರು ಹೇಳಿದರು.
Delhi Chief Minister Arvind Kejriwal on Tuesday promised to provide the people of Gujarat a “corruption-free" government if the Aam Aadmi Party comes to power in the state currently governed by the BJP. The AAP’s national convener announced that if his party voted to power in Gujarat, where the Assembly elections are due later this year, it will ensure its chief minister, ministers as well as lawmakers from other parties and government officers do not indulge in corruption and are jailed if caught doing so.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 07:12 pm
HK News Desk
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm