ಬ್ರೇಕಿಂಗ್ ನ್ಯೂಸ್
14-09-22 09:55 pm Bangalore Correspondent ದೇಶ - ವಿದೇಶ
ನವದೆಹಲಿ, ಸೆ.14: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿರುವ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಸಿಬಿಐ ಅಧಿಕಾರಿಗಳು ಬೆಂಗಳೂರು, ನವದೆಹಲಿ ಸೇರಿದಂತೆ 33 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ.
ಸಬ್ ಇನ್ಸ್ಪೆಕ್ಟರ್ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಜಮ್ಮು ಕಾಶ್ಮೀರ ಗವರ್ನರ್ ಮನೋಜ್ ಸಿನ್ಹಾ ಸಿಬಿಐ ತನಿಖೆಗೆ ಆದೇಶ ಮಾಡಿದ್ದರು. ಅದರಂತೆ, ಸಿಬಿಐ ತನಿಖೆ ಶುರು ಮಾಡಿದ್ದು ಜಮ್ಮು, ಶ್ರೀನಗರ, ಕರ್ನಾಲ್, ಮಹೇಂದರ್‌ಗಢ, ಹರಿಯಾಣದ ರೇವಾರಿ, ಗುಜರಾತ್‌ನ ಗಾಂಧಿನಗರ, ಉತ್ತರ ಪ್ರದೇಶದ ಗಾಜಿಯಾಬಾದ್, ಕರ್ನಾಟಕದ ಬೆಂಗಳೂರು ಮತ್ತು ರಾಜಧಾನಿ ದೆಹಲಿ ಸೇರಿ ದೇಶದಾದ್ಯಂತ ಸುಮಾರು 33 ಕಡೆಗಳಲ್ಲಿ ದಾಳಿ ನಡೆಸಿ, ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದೆ.
ವಿವಿಧೆಡೆ ಪರಿಶೀಲನೆ ವೇಳೆ ಕೆಲವು ತಿದ್ದುಪಡಿ ಮಾಡಿದ ದಾಖಲೆಗಳು, ಡಿಜಿಟಲ್ ಪುರಾವೆಗಳು ದೊರೆತಿದ್ದು, ಅವನ್ನು ವಶಪಡಿಸಿಕೊಳ್ಳಲಾಗಿದೆ, ಸಿಬಿಐ ತನಿಖೆ ಸಂದರ್ಭದಲ್ಲಿ ಬೆಂಗಳೂರಿನ ಕೋಚಿಂಗ್ ಸೆಂಟರ್‌ನ ಮಾಲೀಕರೊಬ್ಬರನ್ನು ವಿಚಾರಣೆ ನಡೆಸಲಾಗಿದೆ. ಮಾರ್ಚ್ 27, 2022 ರಂದು ನಡೆದ ಲಿಖಿತ ಪರೀಕ್ಷೆಯಲ್ಲಿ ಕೆಲವು ವ್ಯಕ್ತಿಗಳು ಅಕ್ರಮ ನಡೆಸಿರುವುದು ಕಂಡುಬಂದಿತ್ತು.
ಜಮ್ಮು ಕಾಶ್ಮೀರದ ಪೊಲೀಸ್, ಡಿಎಸ್ಪಿ, ಸಿಆರ್ ಪಿಎಫ್ ಕಚೇರಿಗೂ ದಾಳಿ ನಡೆಸಲಾಗಿದೆ. ಜಮ್ಮುವಿನ ಕೋಚಿಂಗ್ ಸೆಂಟರಿನಲ್ಲಿ ತರಬೇತಿ ಪಡೆದಿದ್ದ ಹೆಚ್ಚಿನವರು ಉದ್ಯೋಗಕ್ಕೆ ಆಯ್ಕೆಯಾಗಿದ್ದರು. ಆನ್ಲೈನ್ ಪರೀಕ್ಷೆ ನಡೆಸಲಾಗಿದ್ದು ಅದರಲ್ಲಿ ಅಕ್ರಮ ನಡೆಸಲಾಗಿದೆ ಎಂದು ಎಫ್ಐಆರ್ ನಲ್ಲಿ ಉಲ್ಲೇಖಿಸಲಾಗಿದೆ. ಅಕ್ರಮ ನಡೆದಿದ್ದರಿಂದ ಪಿಎಸ್ಐ ನೇಮಕಾತಿಯನ್ನು ಆಗಸ್ಟ್ ತಿಂಗಳಲ್ಲಿ ರದ್ದುಪಡಿಸಿದ್ದ ಮನೋಜ್ ಸಿನ್ಹಾ, ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದರು.
1200 ಹುದ್ದೆಗಳಿಗೆ ನಡೆಸಲಾಗಿದ್ದ ಪರೀಕ್ಷೆ ಫಲಿತಾಂಶವನ್ನು ಜೂನ್ 4 ರಂದು ಪ್ರಕಟಿಸಲಾಗಿತ್ತು. 97 ಸಾವಿರ ಮಂದಿ ಪರೀಕ್ಷೆ ಬರೆದಿದ್ದರು. ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ಅಭ್ಯರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಜಮ್ಮು, ರಜೌರಿ ಮತ್ತು ಸಾಂಬಾ ಜಿಲ್ಲೆಗಳಿಂದ ಹೆಚ್ಚಿನ ಮಂದಿ ಆಯ್ಕೆಯಾಗಿದ್ದು ಅಕ್ರಮದ ಶಂಕೆಗೆ ಕಾರಣವಾಗಿತ್ತು. ತನಿಖೆಯಲ್ಲಿ ಅಕ್ರಮ ಕಂಡುಬಂದಲ್ಲಿ ಮರು ಪರೀಕ್ಷೆ ನಡೆಸುವುದಾಗಿ ಜಮ್ಮು ಕಾಶ್ಮೀರ ಆಡಳಿತ ಹೇಳಿಕೊಂಡಿದೆ.
The Central Bureau of Investigation on Tuesday said that a gang domiciled in Haryana was involved in an alleged scam in the recruitment of Sub Inspectors in the J&K police. The recruitments were cancelled by the J&K administration earlier this year.The CBI officials conducted raids at around 36 places on Tuesday in J&K, Haryana, Delhi, Uttar Pradesh, Gujarat and Karnataka. The officials claimed that the candidates paid around Rs 20-30 lakh to access the question papers.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm