ಬ್ರೇಕಿಂಗ್ ನ್ಯೂಸ್
15-09-22 08:38 pm HK News Desk ದೇಶ - ವಿದೇಶ
ನವದೆಹಲಿ, ಸೆ.15 : ಯುದ್ಧ ಪೀಡಿತ ಉಕ್ರೇನಿಂದ ಮರಳಿದ್ದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಭಾರತದಲ್ಲಿ ಶಿಕ್ಷಣ ಮುಂದುವರಿಸುವುದಕ್ಕೆ ಕೇಂದ್ರ ಸರಕಾರ ನಿರಾಕರಣೆ ಮಾಡಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ನೋಟೀಸಿಗೆ ಉತ್ತರ ನೀಡಿರುವ ಕೇಂದ್ರ ಸರಕಾರ, ರಾಷ್ಟ್ರೀಯ ವೈದ್ಯಕೀಯ ಆಯೋಗದ ಕಾಯ್ದೆ ಪ್ರಕಾರ ಉಕ್ರೇನ್ ವಿವಿಯ ವಿದ್ಯಾರ್ಥಿಗಳಿಗೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.
ಉಕ್ರೇನ್, ರಷ್ಯಾ ಯುದ್ಧದಿಂದ ಸಾವಿರಾರು ವೈದ್ಯಕೀಯ ವಿದ್ಯಾರ್ಥಿಗಳು ಭಾರತಕ್ಕೆ ಮರಳಿದ್ದರು. ತಮ್ಮ ಶಿಕ್ಷಣ ಅರ್ಧಕ್ಕೆ ನಿಂತಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ಮುಂದುವರಿಸಲು ಅವಕಾಶ ನೀಡುವಂತೆ ಕೋರಿ ಹಲವು ವಿದ್ಯಾರ್ಥಿಗಳು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್, ಕೇಂದ್ರ ಸರಕಾರಕ್ಕೆ ನೋಟಿಸ್ ಜಾರಿ ಮಾಡಿತ್ತು.
ಈ ಬಗ್ಗೆ ಅಫಿಡವಿಟ್ ಸಲ್ಲಿಸಿರುವ ಭಾರತ ಸರಕಾರ, ಇಂತಹ ಸಡಿಲಿಕೆಗಳಿಂದ ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಗುಣಮಟ್ಟಕ್ಕೆ ತೊಂದರೆಯಾಗಲಿದೆ ಎಂದು ಅಭಿಪ್ರಾಯಪಟ್ಟಿದೆ. ನೀಟ್‌ನಲ್ಲಿ ಕಳಪೆ ಅರ್ಹತೆ ಹೊಂದಿದ್ದರೂ, ಸುಲಭದಲ್ಲಿ ವೈದ್ಯಕೀಯ ಸೀಟು ಕೈಗೆಟುಕುವ ಕಾರಣಕ್ಕೆ ವಿದ್ಯಾರ್ಥಿಗಳು ವಿದೇಶಗಳಿಗೆ ಹೋಗಿದ್ದಾರೆ. ದೇಶದ ವೈದ್ಯಕೀಯ ಕಾಲೇಜುಗಳಲ್ಲಿ ಕಳಪೆ ಮೆರಿಟ್ ವಿದ್ಯಾರ್ಥಿಗಳಿಗೆ ಅವಕಾಶ ನೀಡುವುದು ಭವಿಷ್ಯದಲ್ಲಿ ಸಮಸ್ಯೆಗೆ ಕಾರಣವಾಗಬಹುದು ಎಂದು ಅಫಿಡವಿಟ್‌ನಲ್ಲಿ ಸರ್ಕಾರ ಉಲ್ಲೇಖಿಸಿದೆ.
ಯುದ್ಧದ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಉಕ್ರೇನ್‌ನಿಂದ ವಿದ್ಯಾರ್ಥಿಗಳನ್ನು ಮರಳಿ ಕರೆಸಲು ಕ್ರಮಗಳನ್ನು ತೆಗೆದುಕೊಂಡಿತ್ತು. ಆದರೆ ಅವರಿಗೆ ಭಾರತದ ವೈದ್ಯಕೀಯ ಕಾಲೇಜುಗಳಲ್ಲಿ ಸೀಟುಗಳನ್ನು ನೀಡಲು ಸಾಧ್ಯವಾಗುವುದಿಲ್ಲ. ಸರ್ಕಾರ ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕಿದೆ ಎಂದು ಹೇಳಿದೆ.
In a significant development, the Central Government has told the Supreme Court that Indian medical students who returned from Ukraine cannot be accommodated in Indian universities as there is no provision in the National Medical Commission Act allowing it.Allowing such relaxation will hamper the standards of medical education in India, the Centre stated in the counter-affidavit filed before the Supreme Court.
15-07-25 10:35 am
Bangalore Correspondent
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:32 am
Mangalore Correspondent
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm