ಬ್ರೇಕಿಂಗ್ ನ್ಯೂಸ್
19-09-22 01:41 pm HK News Desk ದೇಶ - ವಿದೇಶ
ಮುಂಬೈ, ಸೆ.19: ಭಾರತೀಯ ಮಾರುಕಟ್ಟೆಯಲ್ಲಿ ಪ್ರಾಬಲ್ಯ ಮೆರೆದಿರುವ 'ಜಾನ್ಸನ್ ಆಂಡ್ ಜಾನ್ಸನ್' ಬೇಬಿ ಪೌಡರ್‌ಗೆ ಮಹಾರಾಷ್ಟ್ರ ಸರ್ಕಾರ ನಿಷೇಧ ಹೇರಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದಾಗಿ ಮಹಾರಾಷ್ಟ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಜಾನ್ಸನ್ ಆಂಡ್ ಜಾನ್ಸನ್ ಬೇಬಿ ಪೌಡರ್‌ನಿಂದ ಮಕ್ಕಳ ಚರ್ಮದ ಮೇಲಾಗುವ ಪರಿಣಾಮಗಳ ಬಗ್ಗೆ ದೂರುಗಳು ಕೇಳಿ ಬಂದಿತ್ತು. ಹೀಗಾಗಿ ಅವುಗಳ ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿತ್ತು. ಪ್ರಯೋಗಾಲಯದಿಂದ ಬಂದ ಫಲಿತಾಂಶದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.
ಕೋಲ್ಕತ್ತಾದ ಕೇಂದ್ರ ಔಷಧೀಯ ಪ್ರಯೋಗಾಲಯದ ವರದಿ ಕೂಡ, ಜಾನ್ಸನ್ ಆಂಡ್ ಜಾನ್ಸನ್ ಬೇಬಿ ಪೌಡರ್ ಶಿಶುಗಳ ಆರೋಗ್ಯಕ್ಕೆ ಒಳ್ಳೆಯದಲ್ಲ ಎನ್ನುವ ವರದಿ ನೀಡಿತ್ತು. ಇದಾದ ಬಳಿಕ ಮಹಾರಾಷ್ಟ್ರ ಸರ್ಕಾರ ಇಂಥಹದ್ದೊಂದು ನಿರ್ಧಾರ ತೆಗೆದುಕೊಂಡಿದೆ.
ನಿಷೇಧ ಹೇರುವುದಕ್ಕೂ ಮುನ್ನ ಮಹಾರಾಷ್ಟ್ರ ಆಹಾರ ಹಾಗೂ ಔಷಧ ಆಡಳಿತವು ಜಾನ್ಸನ್ ಆಂಡ್ ಜಾನ್ಸನ್ ಬೇಬಿ ಪೌಡರ್‌ನ ಸ್ಯಾಂಪಲ್‌ಗಳನ್ನು ಪುಣೆ ಹಾಗೂ ನಾಸಿಕ್‌ನಲ್ಲಿರುವ ಪ್ರಯೋಗಾಲಯಕ್ಕೆ ಕಳುಹಿಸಿ ಪರೀಕ್ಷೆಗೆ ಒಳಪಡಿಸಿತ್ತು. ಅಲ್ಲಿಂದ ಬಂದ ವರದಿಯನ್ವಯ ಇದೀಗ ಲೈಸೆನ್ಸ್ ರದ್ದು ಮಾಡುವ ನಿರ್ಧಾರ ಕೈಗೊಂಡಿದೆ.
ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾದ ಸ್ಯಾಂಪಲ್‌ಗಳು 'ಪ್ರಾಮಾಣಿತ ಗುಣಮಟ್ಟ'ದಲ್ಲಿ ಇಲ್ಲ. IS 5339:2004 ಹೇಳಲಾದ ಗುಣಮಟ್ಟದಲ್ಲಿ ಇಲ್ಲ ಎಂದು ಪರೀಕ್ಷೆಯಲ್ಲಿ ಗೊತ್ತಾಗಿದೆ.
ಹೀಗಾಗಿ ಡ್ರಗ್ಸ್ ಕಾಸ್ಮೆಟಿಕ್ಸ್ ಕಾಯ್ದೆ 1940 ರ ಅನ್ವಯ ಜಾನ್ಸನ್ ಆಂಡ್ ಜಾನ್ಸನ್ ಕಂಪನಿಗೆ ಮಹಾರಾಷ್ಟ್ರ ಆಹಾರ ಹಾಗೂ ಔಷಧ ಆಡಳಿತ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಅಲ್ಲದೇ ಮಾರುಕಟ್ಟೆಯಲ್ಲಿ ಇರುವ ಉತ್ಪನ್ನಗಳನ್ನು ಹಿಂಪಡೆಯಬೇಕು ಎಂದು ನಿರ್ದೇಶನ ನೀಡಿದೆ.
ಇನ್ನು ಮಹಾರಾಷ್ಟ್ರ ಆಹಾರ ಹಾಗೂ ಔಷಧ ಆಡಳಿತ ನೀಡಿರುವ ನೊಟಿಸ್‌ಗೆ ಕಂಪನಿ ಪ್ರತಿಕ್ರಿಯೆ ನೀಡಿದ್ದು, ಇದರ ವಿರುದ್ಧ ನ್ಯಾಯಾಲಯಕ್ಕೆ ಹೋಗುವುದಾಗಿ ತಿಳಿಸಿದೆ.
Maharashtra's Food and Drugs Administration (FDA) on Friday cancelled the baby powder manufacturing licence of Johnson & Johnson Pvt Ltd "in the interest of public health at large". In a release, the state government agency said the company's product, Johnson's Baby Powder, may affect the skin of newborn babies.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm