ಬ್ರೇಕಿಂಗ್ ನ್ಯೂಸ್
06-10-22 01:09 pm HK News Desk ದೇಶ - ವಿದೇಶ
ಕ್ಯಾಲಿಫೋರ್ನಿಯಾ, ಅ. 6: ಅಮೆರಿಕದ ಕ್ಯಾಲಿಫೋರ್ನಿಯಾ ನಗರದಲ್ಲಿ ಅಪಹರಣಕ್ಕೀಡಾಗಿದ್ದ ಭಾರತ ಮೂಲದ ಕುಟುಂಬದ ನಾಲ್ವರು ಸದಸ್ಯರನ್ನು ಕೊಲೆ ಮಾಡಲಾಗಿದ್ದು ಹಣ್ಣಿನ ತೋಟದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಎಂಟು ತಿಂಗಳ ಹೆಣ್ಣು ಮಗುವನ್ನೂ ನಿರ್ದಯವಾಗಿ ಕೊಲೆ ಮಾಡಲಾಗಿದೆ.
ಎಂಟು ತಿಂಗಳ ಮಗು ಆರೂಹಿ ಧೇರಿ ಮತ್ತು ಆಕೆಯ ಪೋಷಕರಾದ 27 ವರ್ಷದ ಜಸ್ಲೀನ್ ಕೌರ್ ಮತ್ತು 36 ವರ್ಷದ ಜಸ್ದೀಪ್ ಸಿಂಗ್ ಮತ್ತು ಸಂಬಂಧಿ 39 ವರ್ಷದ ಅಮನದೀಪ್ ಸಿಂಗ್ ಅವರನ್ನು ಉತ್ತರ ಕ್ಯಾಲಿಫೋರ್ನಿಯಾದ ಮರ್ಸಿಡ್ ಕೌಂಟಿಯಲ್ಲಿರುವ ಮನೆಯಿಂದ ಅಪಹರಿಸಲಾಗಿತ್ತು.
ಅ.5ರ ಬುಧವಾರ ಸಂಜೆ ನಾಲ್ವರ ಶವಗಳು ಇಂಡಿಯಾನಾ ರಸ್ತೆ ಮತ್ತು ಹಚಿನ್ಸನ್ ರಸ್ತೆ ಬಳಿಯ ಹಣ್ಣಿನ ತೋಟದಲ್ಲಿ ಪತ್ತೆಯಾಗಿವೆ. ತೋಟದಲ್ಲಿ ಕೆಲಸ ಮಾಡುವ ಕಾರ್ಮಿಕರು ಶವಗಳನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಅಪಹರಣದ ಬಗ್ಗೆ ಪೊಲೀಸರು ಬಿಡುಗಡೆ ಮಾಡಿದ್ದ ವಿಡಿಯೋದಲ್ಲಿ ಜಸ್ದೀಪ್ ಸಿಂಗ್ ಮತ್ತು ಅಮನದೀಪ್ ಸಿಂಗ್ ಅವರ ಕೈಗಳನ್ನು ಕಟ್ಟಿ ಎಳೆದುಕೊಂಡು ಹೋಗುವ ದೃಶ್ಯಗಳು ಸೆರೆಯಾಗಿದ್ದವು. ಕೆಲವು ಸೆಕೆಂಡುಗಳ ನಂತರ ಮಗು ಮತ್ತು ಆಕೆಯ ತಾಯಿ ಕೂಡ ಕಟ್ಟಡದಿಂದ ಹೊರಬರುವುದು ದೃಶ್ಯದಲ್ಲಿ ಕಂಡಿತ್ತು. ಕುಟುಂಬದ ಎಲ್ಲ ನಾಲ್ಕು ಸದಸ್ಯರನ್ನು ಒಂದು ಟ್ರಕ್‌ನಲ್ಲಿ ತುಂಬಿಸಿ ಕರೆದೊಯ್ಯಲಾಗಿತ್ತು.
ಕುಟುಂಬವನ್ನು ಅಪಹರಿಸಿದ ಒಂದು ದಿನದ ನಂತರ, ಪೊಲೀಸರು ಶಂಕಿತ ಅಪಹರಣಕಾರ ಎನ್ನಲಾದ 48 ವರ್ಷದ ಜೀಸಸ್ ಮ್ಯಾನುಯೆಲ್ ಸಲ್ಗಾಡೊ ಎಂಬಾತನನ್ನು ಬಂಧಿಸಿದ್ದರು. ಬಂಧನದ ಸಂದರ್ಭದಲ್ಲಿ ಸಲ್ಗಾಡೊ ಆತ್ಮಹತ್ಯೆಗೂ ಪ್ರಯತ್ನಿಸಿದ್ದ. ಪೊಲೀಸರು ಬಳಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಆರೋಪಿ ತಾನೇ ಕೊಲೆ ಮಾಡಿದ್ದಾಗಿಯೂ ಒಪ್ಪಿಕೊಂಡಿದ್ದ. ಯಾಕಾಗಿ ಕೊಲೆ ನಡೆಸಿದ್ದಾನೆಂದು ತಿಳಿದುಬಂದಿಲ್ಲ.
A baby girl, her parents and uncle who were kidnapped at gunpoint from their central California business two days ago were found dead Wednesday, the sheriff of Merced County said.“Our worst fears have been confirmed,” Sheriff Vern Warnke told reporters Wednesday night.A farmworker found the bodies close together in a Merced County orchard, he said.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm