ಡೀಸೆಲ್ ಟ್ರಕ್ಕಿಗೆ ಸ್ಲೀಪರ್ ಕೋಚ್ ಬಸ್ ಡಿಕ್ಕಿ ; 12 ಮಂದಿ ಸಜೀವ ದಹನ, 38 ಜನರಿಗೆ ಗಾಯ ! 

08-10-22 04:52 pm       HK News Desk   ದೇಶ - ವಿದೇಶ

ಯಾಣಿಕರನ್ನು ಹೊತ್ತ ಬಸ್ಸೊಂದು ಟ್ರಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಅಪಘಾತಕೀಡಾಗಿ ಬೆಂಕಿ ಹೊತ್ತಿಕೊಂಡು 12 ಮಂದಿ ಪ್ರಯಾಣಿಕರು ಸಜೀವ ದಹನಗೊಂಡು ಹಲವರು ಗಂಭೀರ ಗಯಾಗೊಂಡಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ.

ನಾಸಿಕ್,ಅ.8 : ಪ್ರಯಾಣಿಕರನ್ನು ಹೊತ್ತ ಬಸ್ಸೊಂದು ಟ್ರಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಅಪಘಾತಕೀಡಾಗಿ ಬೆಂಕಿ ಹೊತ್ತಿಕೊಂಡು 12 ಮಂದಿ ಪ್ರಯಾಣಿಕರು ಸಜೀವ ದಹನಗೊಂಡು ಹಲವರು ಗಂಭೀರ ಗಯಾಗೊಂಡಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ.

ನಾಸಿಕ್- ಔರಂಗಾಬಾದ್ ಹೆದ್ದಾರಿಯಲ್ಲಿ ಡೀಸೆಲ್ ಸಾಗಿಸುತ್ತಿದ್ದ ಟ್ರೈಲರ್ ಟ್ರಕ್‌ಗೆ ಸ್ಲೀಪರ್ ಕೋಚ್ ಬಸ್ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಬೆಂಕಿ ಹೊತ್ತಿಕೊಂಡಿದೆ."ಮೃತರಲ್ಲಿ ಹೆಚ್ಚಿನವರು ಸ್ಲೀಪರ್ ಕೋಚ್ ಬಸ್‌ನಲ್ಲಿದ್ದ ಪ್ರಯಾಣಿಕರೇ ಆಗಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಲಾಗಿದೆ" ಎಂದು ನಾಸಿಕ್ ಉಪ ಪೊಲೀಸ್ ಆಯುಕ್ತ ಅಮೋಲ್ ತಾಂಬೆ ತಿಳಿಸಿದ್ದಾರೆ.

Nashik bus fire death toll 12 Dead Several Injured As Bus Catches Fire In Maharashtra  Nashik

ಬಸ್‌ನಿಂದ ಬೆಂಕಿಗೆ ಬೃಹತ್ ಉಂಡೆಗಳು ಉರಿಯುತ್ತಿರುವುದು ಮತ್ತು ಅವುಗಳನ್ನು ನಿಯಂತ್ರಿಸಲು ಅಗ್ನಿಶಾಮಕ ಸಿಬ್ಬಂದಿ ಪ್ರಯತ್ನಿಸುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಮುಂಜಾನೆ 5.15ರ ಸುಮಾರಿಗೆ ಈ ಭಯಾನಕ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

12 dead after bus hits truck, catches fire in Nashik; PM Modi, Maharashtra  CM announce ex-gratia

ಬೆಂಕಿಯ ಕೆನ್ನಾಲಗೆ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಇದರಿಂದಾಗಿ ಬಸ್‌ನ ಹತ್ತಿರ ಸುಳಿಯಲೂ ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ಪ್ರಯಾಣಿಕರನ್ನು ಉಳಿಸಲು ಯಾವ ಪ್ರಯತ್ನ ಮಾಡಲೂ ಆಗಲಿಲ್ಲ ಎಂದು ಸ್ಥಳೀಯರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

At least 11 dead, many injured as bus catches fire after hitting a truck in  Nashik

ಈ ಭಯಾನಕ ಅಪಘಾತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಗಾಯಾಳುಗಳಿಗೆ 50,000 ರೂ ನೀಡಲಾಗುತ್ತದೆ.

PM Modi's Emergency anniversary shot at Congress in Germany- The New Indian  Express

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಕೂಡ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ ಘೋಷಣೆ ಮಾಡಿದ್ದಾರೆ.

With Cabinet expansion on cards, Maharashtra CM Eknath Shinde to leave for  Delhi tonight - Oneindia News

ಗಾಯಾಳುಗಳ ಎಲ್ಲ ಚಿಕಿತ್ಸಾ ವೆಚ್ಚವನ್ನು ಮಹಾರಾಷ್ಟ್ರ ಸರ್ಕಾರವೇ ಭರಿಸಲಿದೆ ಎಂದು ಸಚಿವ ದಾದಾ ಭುಸೆ ತಿಳಿಸಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆಯೇ ಇಡೀ ಬಸ್ಸನ್ನು ಬೆಂಕಿ ಆವರಿಸಿಕೊಂಡಿದೆ. ಸುಟ್ಟ ಗಾಯಗಳಿಂದಾಗಿ ಅನೇಕರು ಮೃತಪಟ್ಟಿದ್ದಾರೆ. ಗಾಯಗೊಂಡವರಲ್ಲಿ ಅನೇಕರ ಸ್ಥಿತಿ ಗಂಭೀರವಾಗಿದೆ. ಹೀಗಾಗಿ ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

At least eleven people were killed and several others suffered injuries after a bus carrying them caught fire in Maharashtra’s Nashik last night. The bus caught fire on Aurangabad road in Nashik after hitting a truck at around 5.15 am. Several passengers were trapped in the blazing vehicle, while others were seriously wounded.