ಬ್ರೇಕಿಂಗ್ ನ್ಯೂಸ್
13-10-22 12:11 pm HK News Desk ದೇಶ - ವಿದೇಶ
ನವದೆಹಲಿ, ಅ.13: ಕರ್ನಾಟಕದ ಹಿಜಾಬ್ ವಿವಾದ ಕುರಿತ ವಾದ, ಪ್ರತಿವಾದಗಳನ್ನು ಆಲಿಸಿದ್ದ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ವಿಭಿನ್ನ ತೀರ್ಪು ನೀಡಿ ಗಮನಸೆಳೆದಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ವಿಭಿನ್ನ ತೀರ್ಪು ಪ್ರಕಟಿಸಿದ್ದಾರೆ.
ನ್ಯಾಯಮೂರ್ತಿ ಸುಧಾಂಶು ಧುಲಿಯಾ ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶವನ್ನು ರದ್ದುಗೊಳಿಸಿದ್ದಾರೆ. ಆದರೆ ಹೇಮಂತ್ ಗುಪ್ತಾ ಮೇಲ್ಮನವಿಗಳನ್ನು ವಜಾಗೊಳಿಸಿದ್ದು ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿದಿದ್ದಾರೆ. ಹೀಗಾಗಿ ಅಂತಿಮ ತೀರ್ಪು ನೀಡಲಾಗದೆ, ಮುಂದಿನ ತೀರ್ಮಾನಕ್ಕಾಗಿ ಮುಖ್ಯ ನ್ಯಾಯಮೂರ್ತಿಗಳ ನಿರ್ಣಯಕ್ಕೆ ಬಿಟ್ಟಿದ್ದಾರೆ. ಇದರಿಂದಾಗಿ ತ್ರಿಸದಸ್ಯ ಅಥವಾ ಸಾಂವಿಧಾನಿಕ ಪೀಠಕ್ಕೆ ಹಿಜಾಬ್ ಕುರಿತ ಅರ್ಜಿ ವರ್ಗಾವಣೆಯಾಗುವ ಸಾಧ್ಯತೆಯಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಅರ್ಜಿದಾರರ ಪರ ವಕೀಲ ಎಜಾಬ್ ಮಕ್ಬೂಲ್, ಹಿಜಾಬ್ ನಿಷೇಧ ಪ್ರಕರಣವನ್ನು ದೊಡ್ಡ ಪೀಠ ಅಥವಾ ಮುಖ್ಯ ನ್ಯಾಯಮೂರ್ತಿಗಳ ಮುಂದೆ ಇಡಬೇಕು ಎಂದು ಪೀಠ ಹೇಳಿರುವುದಾಗಿ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಶಾಲೆ, ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ನಿಷೇಧಿಸಿದ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿಹಿಡಿದು ಹೈಕೋರ್ಟ್ ತೀರ್ಪು ನೀಡಿತ್ತು. ಈ ಆದೇಶದ ವಿರುದ್ಧ ಕೆಲ ವಿದ್ಯಾರ್ಥಿಗಳು ಹಾಗೂ ಮುಸ್ಲಿಂ ಸಂಘಟನೆಗಳು ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿಗಳನ್ನು ಸಲ್ಲಿಸಿದ್ದವು. ಸೆಪ್ಟೆಂಬರ್ ತಿಂಗಳಲ್ಲಿ ಹತ್ತು ದಿನಗಳ ಕಾಲ ತುರ್ತು ವಿಚಾರಣೆ ನಡೆಸಿದ್ದ ಕೋರ್ಟ್, ಸೆ.22 ರಂದು ವಿಚಾರಣೆ ಮುಗಿಸಿ ಅಂತಿಮ ತೀರ್ಪು ಕಾಯ್ದಿರಿಸಿತ್ತು.
The Supreme Court Thursday delivered a split verdict in the Karnataka hijab ban case with one of the judges upholding the March 15 high court order validating the ban and the other setting aside the HC ruling and calling wearing of the apparel a “matter of…choice”.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm