ಬ್ರೇಕಿಂಗ್ ನ್ಯೂಸ್
14-10-22 04:13 pm HK News Desk ದೇಶ - ವಿದೇಶ
ನವದೆಹಲಿ, ಅ.14 : ಜ್ಞಾನವಾಪಿ ಮಸೀದಿ ಮತ್ತು ಶೃಂಗಾರ ಗೌರಿಗೆ ಪೂಜೆ ಸಲ್ಲಿಸುವ ಪ್ರಕರಣಕ್ಕೆ ಸಂಬಂಧಿಸಿ ವಾರಣಾಸಿ ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ. ಜ್ಞಾನವಾಪಿಯಲ್ಲಿ ಪತ್ತೆಯಾದ ಶಿವಲಿಂಗದ ಕಾರ್ಬನ್ ಡೇಟಿಂಗ್ ಬೇಡಿಕೆಯನ್ನು ಕೋರ್ಟ್ ತಿರಸ್ಕರಿಸಿದೆ.
ಶಿವಲಿಂಗದ ಕಾರ್ಬನ್ ಡೇಟಿಂಗ್ ನಡೆಸಲು ಅವಕಾಶ ನೀಡುವಂತೆ ಕೋರಿ ವಾರಣಾಸಿ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ಸಂಬಂಧ ತೀರ್ಪು ನೀಡಿದ ವಾರಣಾಸಿ ಜಿಲ್ಲಾ ನ್ಯಾಯಾಧೀಶ ಅಜಯ್ ಕೃಷ್ಣ ವಿಶ್ವೇಶ್, ಹಿಂದೂಗಳ ಕಡೆಯ ಅರ್ಜಿಯನ್ನು ತಿರಸ್ಕರಿಸಿದ್ದಾರೆ.
ಶಿವಲಿಂಗದ ಕಾರ್ಬನ್ ಡೇಟಿಂಗ್ ಮತ್ತು ವೈಜ್ಞಾನಿಕ ಪರೀಕ್ಷೆಯ ವಿಷಯದಲ್ಲಿ ಚರ್ಚೆಗಳು ಪೂರ್ಣಗೊಂಡ ನಂತರ ತೀರ್ಪು ಪ್ರಕಟಿಸಲಾಯಿತು. ಶಿವಲಿಂಗದ ಕಾರ್ಬನ್ ಡೇಟಿಂಗ್ ಅರ್ಜಿಯ ಕುರಿತು ಜಿಲ್ಲಾ ನ್ಯಾಯಾಧೀಶ ಡಾ ಅಜಯ್ ಕೃಷ್ಣ ವಿಶ್ವೇಶ್ ಅವರ ಪೀಠದಲ್ಲಿ ಅಕ್ಟೋಬರ್ 12ರಂದು ವಿಚಾರಣೆ ನಡೆದಿತ್ತು. ವಿಚಾರಣೆ ನಂತರ, ತೀರ್ಪು ಕಾದಿರಿಸಲಾಗಿತ್ತು.
ಅಂಜುಮನ್ ಮಸೀದಿ ಪರವಾಗಿ ವಾದ ಮಂಡಿಸಿದ್ದ ವಕೀಲರು, ಕೇವಲ ಶೃಂಗಾರ ಗೌರಿ ಪೂಜೆ ಮತ್ತು ದರ್ಶನಕ್ಕಾಗಿ ಪ್ರಕರಣ ದಾಖಲಿಸಲಾಗಿತ್ತು. ಮೇ 17ರಂದು ಕಂಡುಬಂದ ಆಕೃತಿಯನ್ನು ರಕ್ಷಿಸಲು ಮತ್ತು ಸಂರಕ್ಷಿಸಲು ಸುಪ್ರೀಂ ಕೋರ್ಟ್ ಆದೇಶಿಸಿದೆ. ಕಾರ್ಬನ್ ಡೇಟಿಂಗ್ ಜೀವಿಗಳು ಮತ್ತು ಪ್ರಾಣಿಗಳ ಮೇಲೆ ನಡೆಸಬೇಕು. ಅದು ಕಲ್ಲಿನ ಮೇಲೆ ನಡೆಸುವುದು ಸಾಧ್ಯವಿಲ್ಲ. ಏಕೆಂದರೆ ಕಲ್ಲು ಇಂಗಾಲಕ್ಕೆ ಹೊಂದಿಕೊಳ್ಳುವುದಿಲ್ಲ. ಪ್ರಕರಣವನ್ನು ಬಲಪಡಿಸಲು ಮತ್ತು ಪುರಾವೆಗಳನ್ನು ಸಂಗ್ರಹಿಸಲು ಕಾರ್ಬನ್ ಡೇಟಿಂಗ್ ಮಾಡಲಾಗುತ್ತದೆ. ಹೀಗಾಗಿ ಕಾರ್ಬನ್ ಡೇಟಿಂಗ್ ಅರ್ಜಿಯನ್ನು ತಿರಸ್ಕರಿಸಬೇಕು ಎಂದು ವಾದಿಸಿದ್ದರು.
A Varanasi district court on Friday (October 14) rejected the demand for carbon dating of a "Shivling", claimed to be found on the Gyanvapi mosque premises. Hindu petitioners demanded the scientific test to establish the age of the alleged 'Shivling' but the court did not find legal merit in their demand.The claim was disputed by the Muslim side, which said the object was part of a "fountain".
16-07-25 11:47 am
HK News Desk
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
16-07-25 01:01 pm
Mangalore Correspondent
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
16-07-25 11:42 am
Mangalore Correspondent
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm