ಕಾಂಗ್ರೆಸ್ ಅಧ್ಯಕ್ಷ ಹುದ್ದೆ ; ಖರ್ಗೆ - ತರೂರ್ ನಡುವೆ ನೇರ ಸ್ಪರ್ಧೆ, ಅ.17ಕ್ಕೆ ಚುನಾವಣೆ, 19ಕ್ಕೆ ಫಲಿತಾಂಶ 

16-10-22 10:21 pm       HK News Desk   ದೇಶ - ವಿದೇಶ

ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೆ ಅ.17ರಂದು ಚುನಾವಣೆ ನಡೆಯಲಿದೆ. ಕರ್ನಾಟಕದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರು ನಡುವೆ ನೇರ ಸ್ಪರ್ಧೆ ಇದ್ದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯ ನಡುವೆ ಅಧ್ಯಕ್ಷ ಸ್ಥಾನಕ್ಕೆ ಮತದಾನ ನಡೆಯಲಿದೆ. 

ನವದೆಹಲಿ, ಅ.16 : ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೆ ಅ.17ರಂದು ಚುನಾವಣೆ ನಡೆಯಲಿದೆ. ಕರ್ನಾಟಕದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರು ನಡುವೆ ನೇರ ಸ್ಪರ್ಧೆ ಇದ್ದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯ ನಡುವೆ ಅಧ್ಯಕ್ಷ ಸ್ಥಾನಕ್ಕೆ ಮತದಾನ ನಡೆಯಲಿದೆ. 

ಈ ಬಗ್ಗೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ, ಸೋಮವಾರ ಬೆಳಗ್ಗೆ 10 ರಿಂದ ಸಂಜೆ 4 ರ ನಡುವೆ, ಎಲ್ಲಾ ರಾಜ್ಯ ಘಟಕದ ಪ್ರತಿನಿಧಿಗಳು ತಾವು ಬೆಂಬಲಿಸುವ ಅಭ್ಯರ್ಥಿಗೆ ಮತ ಚಲಾಯಿಸಲಿದ್ದಾರೆ. ಸುಗಮ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಒಂಬತ್ತು ಸಾವಿರಕ್ಕೂ ಹೆಚ್ಚು ಪ್ರದೇಶ ಕಾಂಗ್ರೆಸ್ ಸಮಿತಿ (ಪಿಸಿಸಿ) ಪ್ರತಿನಿಧಿಗಳು ಮತದಾನ ಮಾಡಲಿದ್ದು, ಪಕ್ಷದ ಮುಖ್ಯಸ್ಥರನ್ನು ಆಯ್ಕೆ ಮಾಡಲಿದ್ದಾರೆ ಎಂದವರು ಹೇಳಿದ್ದಾರೆ. 

ಗಾಂಧಿ ಕುಟುಂಬಕ್ಕೆ ಆಪ್ತರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪಕ್ಷದ ಅಧಿಕೃತ ಅಭ್ಯರ್ಥಿ ಎನ್ನುವಂತೆ ಪರಿಗಣಿಸಲಾಗಿದೆ. ಪ್ರತಿಸ್ಪರ್ಧಿ ಶಶಿ ತರೂರ್, ಗಾಂಧಿ ಕುಟುಂಬ ಹೊರತಾದ ಬದಲಾವಣೆಯ ಹರಿಕಾರ ಎಂಬ ರೀತಿ ಬಿಂಬಿಸಲಾಗಿದೆ. ತರೂರ್ ತಮ್ಮನ್ನು ಪಕ್ಷದಲ್ಲಿ ಬದಲಾವಣೆ ತರುವುದಕ್ಕಾಗಿ ಬೆಂಬಲಿಸುವಂತೆ ಕೇಳಿಕೊಂಡಿದ್ದಾರೆ. 

Rahul Gandhi responds to 'remote-controlled' new Congress president charges  | Latest News India - Hindustan Times

ಈ ನಡುವೆ, ಬಳ್ಳಾರಿಯಲ್ಲಿ ಯಾತ್ರೆ ನಡೆಸುತ್ತಿರುವ ರಾಹುಲ್ ಗಾಂಧಿ ಮತ್ತಿತರ ರಾಜ್ಯ ನಾಯಕರು ಪಕ್ಷದ ನಾಯಕನ ಸ್ಥಾನಕ್ಕೆ ಅಲ್ಲಿಂದಲೇ ಮತ ಚಲಾಯಿಸಲು ವ್ಯವಸ್ಥೆ ಮಾಡಲಾಗಿದೆ. ರಾಹುಲ್ ಸಂಗನಕಲ್ಲು ಮತಗಟ್ಟೆಯಲ್ಲಿ ಮತದಾನ ಮಾಡಲಿದ್ದಾರೆಂದು ರಾಜ್ಯಸಭೆ ಸದಸ್ಯ ಜೈರಾಮ್ ರಮೇಶ್ ತಿಳಿಸಿದ್ದಾರೆ. ರಾಹುಲ್ ಗಾಂಧಿ ಪಾದಯಾತ್ರೆ ಕಾರಣ ಎಲ್ಲಿಂದ ಮತ ಚಲಾಯಿಸುತ್ತಾರೆಂದು ಹಲವರು ಜಾಲತಾಣದಲ್ಲಿ ಪ್ರಶ್ನೆ ಮಾಡಿದ್ದರು. ಬ್ಯಾಲೆಟ್ ಪೇಪರಿನಲ್ಲಿ ನಡೆಯುವ ಚುನಾವಣೆಯ ಫಲಿತಾಂಶ 19 ರಂದು ಹೊರ ಬೀಳಲಿದೆ.

The Congress is all set to vote to elect its next president on Monday (October 17) with senior party leaders Mallikarjun Kharge and Shashi Tharoor are pitted against each other. This will be the sixth time in its nearly 137-year-old history that an electoral contest would decide who would take up the mantle of the party’s president. The voting will be done between 10 am and 4 pm, with the results likely to be declared on October 19.