ಬ್ರೇಕಿಂಗ್ ನ್ಯೂಸ್
17-10-22 09:44 pm HK News Desk ದೇಶ - ವಿದೇಶ
ನವದೆಹಲಿ, ಅ.17: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಡಿವೈ ಚಂದ್ರಚೂಡ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನೇಮಕ ಮಾಡಿದ್ದಾರೆ.
ನವೆಂಬರ್ 9, 2022ರಿಂದ ಈ ನೇಮಕಾತಿ ಜಾರಿಗೆ ಬರಲಿದ್ದು, ಚಂದ್ರಚೂಡ್ ಅವರು ಭಾರತ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರು ಅಕ್ಟೋಬರ್ 11ರಂದು ಡಿವೈ ಚಂದ್ರಚೂಡ್ ಅವರನ್ನು ತನ್ನ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದರು. ಇದನ್ನು ರಾಷ್ಟ್ರಪತಿಗಳು ಅನುಮೋದಿಸಿದ್ದು, ನೇಮಕ ಆದೇಶಕ್ಕೆ ಸಹಿ ಹಾಕಿದ್ದಾರೆ. 2024ರ ನವೆಂಬರ್ 10ರ ವರೆಗೆ ಚಂದ್ರಚೂಡ್ ಅವರ ಅಧಿಕಾರಾವಧಿ ಇರಲಿದೆ.
ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೇರಿದ ಅಪ್ಪ–ಮಗ
ಡಿವೈ ಚಂದ್ರಚೂಡ್ ಅವರ ತಂದೆಯೂ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು. ನಿವೃತ್ತ ಮುಖ್ಯ ನ್ಯಾಯಮೂರ್ತಿ ವೈವಿ ಚಂದ್ರಚೂಡ್ ಅವರ ಮಗನೂ ಅತ್ಯುನ್ನತ ಹುದ್ದೆಗೇರಿದ್ದಾರೆ. ಆಮೂಲಕ ತಂದೆ- ಮಗನ ಜೋಡಿ ಅತ್ಯಂತ ಅಪರೂಪದ ಹೆಗ್ಗಳಿಕೆಗೆ ಭಾಜನರಾಗಿದ್ದಾರೆ. ವೈ.ವಿ.ಚಂದ್ರಚೂಡ್ 1975ರಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ 1985ರ ವರೆಗೆ ಅಧಿಕಾರದಲ್ಲಿದ್ದರು. ಸುದೀರ್ಘ ಏಳು ವರ್ಷಗಳ ವರೆಗೆ ಮುಖ್ಯ ನ್ಯಾಯಮೂರ್ತಿಯಾಗಿದ್ದ ಏಕೈಕ ವ್ಯಕ್ತಿಯೂ ಅವರಾಗಿದ್ದರು. ಮಗ ಡಿವೈ ಚಂದ್ರಚೂಡ್ ಅವರು ಎರಡು ವರ್ಷಗಳ ವರೆಗೆ ನ್ಯಾಯಮೂರ್ತಿ ಸ್ಥಾನದಲ್ಲಿರಲಿದ್ದು, ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಅವಧಿಗೆ ಸ್ಥಾನ ಅಲಂಕರಿಸಲಿದ್ದಾರೆ.
ಡಿವೈ ಚಂದ್ರಚೂಡ್ ಅವರು 2000ನೇ ಇಸವಿಯಲ್ಲಿ ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಸೇವೆಗೆ ಸೇರಿದ್ದರು. ಅಲ್ಲಿ 13 ವರ್ಷಗಳ ಕಾಲ ನ್ಯಾಯಮೂರ್ತಿಯಾಗಿದ್ದ ಬಳಿಕ 2013ರಲ್ಲಿ ಅಲಹಾಬಾದ್ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು. ಮೂರು ವರ್ಷಗಳ ನಂತರ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನಿಯುಕ್ತರಾಗಿದ್ದರು. ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಖಾಸಗಿತನ, ಸಲಿಂಗಕಾಮ, ಶಬರಿಮಲೆಗೆ ಮಹಿಳೆಯರ ಪ್ರವೇಶ, ಹಾದಿಯಾ ಪ್ರಕರಣ, ಸಿನೆಮಾ ಹಾಲ್ ಗಳಲ್ಲಿ ರಾಷ್ಟ್ರ ಗೀತೆ ಹಾಡುವ ತೀರ್ಪು, ಮಹಿಳೆಯರ ಗರ್ಭಪಾತದ ಹಕ್ಕು ಸೇರಿದಂತೆ ಮಹತ್ವದ ಪ್ರಕರಣಗಳಲ್ಲಿ ತೀರ್ಪು ನೀಡಿದ ಅನುಭವ ಹೊಂದಿದ್ದಾರೆ.
In exercise of the power conferred by the Constitution of India, Hon'ble President appoints Dr. Justice DY Chandrachud, Judge, Supreme Court as the Chief Justice of India with effect from 9th November, 22.
— Kiren Rijiju (@KirenRijiju) October 17, 2022
Union Law and Justice Minister Kiren Rijiju on Monday said President Draupadi Murmu has appointed Dr. Justice DY Chandrachud, Judge, Supreme Court as the Chief Justice of India with effect from 9th November. Chandrachud's formal oath-taking ceremony as the Chief Justice of India will be held on 9th November 2022, as reported by news agency ANI.
16-07-25 11:47 am
HK News Desk
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
16-07-25 01:01 pm
Mangalore Correspondent
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
16-07-25 11:42 am
Mangalore Correspondent
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm