ಬ್ರೇಕಿಂಗ್ ನ್ಯೂಸ್
18-10-22 06:45 pm HK News Desk ದೇಶ - ವಿದೇಶ
ಕೇದಾರನಾಥ, ಅ18: ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಇಂದು ಉತ್ತರಾಖಂಡದ ಕೇದಾರನಾಥ ಬಳಿ ಪತನಗೊಂಡಿದ್ದು, ಪೈಲಟ್ ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ.
ಗಾರು ಚಟ್ಟಿ ಬಳಿ ಹೆಲಿಕಾಪ್ಟರ್ ಪತನವಾಗಿದ್ದು, ಇದುವರೆಗೆ ಏಳು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಮೃತರನ್ನು ಪೂರ್ವ ರಾಮಾನುಜ, ಕೃತಿ ಬ್ರಾಡ್, ಉರ್ವಿ, ಸುಜಾತಾ, ಪ್ರೇಮ್ ಕುಮಾರ್, ಕಾಂತಿ, ಹಾಗು ಪೈಲಟ್ ಅನಿಲ್ ಸಿಂಗ್ ಎಂದು ಗುರುತಿಸಲಾಗಿದೆ.


ಗುಪ್ತಕಾಶಿಯಿಂದ ಹೆಲಿಕಾಪ್ಟರ್ ಟೇಕಾಫ್ ಆಗಿದ್ದು, ಅದರಲ್ಲಿ ಪೈಲಟ್ ಸೇರಿದಂತೆ ಒಟ್ಟು ಏಳು ಮಂದಿ ಇದ್ದರು. ಯಾತ್ರಾರ್ಥಿಗಳೊಂದಿಗೆ ಹೆಲಿಕಾಪ್ಟರ್ ಮುಂದೆ ಸಾಗಿದಾಗ ಗರುಡಚಟ್ಟಿ ಬಳಿ ಪತನಗೊಂಡಿದೆ. ಹೆಲಿಕಾಪ್ಟರ್ ನೆಲಕ್ಕೆ ಬಿದ್ದ ತಕ್ಷಣ ಬೆಂಕಿ ಹೊತ್ತಿಕೊಂಡಿದ್ದು, ಅದರಲ್ಲಿ ಕುಳಿತಿದ್ದ ಏಳು ಮಂದಿ ಸಾವನ್ನಪ್ಪಿದ್ದಾರೆ. ಪ್ರತ್ಯಕ್ಷದರ್ಶಿಗಳು ಇಲ್ಲಿ ಮಳೆಯು ತುಂಬಾ ಜೋರಾಗುತ್ತಿದೆ ಎಂದು ಹೇಳಿದ್ದಾರೆ. ಇದ್ದಕ್ಕಿದ್ದಂತೆ 15 ನಿಮಿಷಗಳಲ್ಲಿ ಹವಾಮಾನ ವೈಪರೀತ್ಯ ಉಂಟಾಯಿತು ಎಂದು ಹೇಳಿಕೊಂಡಿದ್ದಾರೆ. ನಮ್ಮ ವಿಮಾನವನ್ನೂ ಇಲ್ಲಿ ನಿಲ್ಲಿಸಲಾಗಿದ್ದು, ಹೆಲಿಕಾಪ್ಟರ್ ಪತನಗೊಂಡಿದೆ ಎಂದು ಸ್ಥಳೀಯರು ಹೇಳಿಕೊಂಡಿದ್ದಾರೆ.

ಅಕ್ಟೋಬರ್ 21-22 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಇಲ್ಲಿಗೆ ಬರುತ್ತಿರುವ ಸಮಯದಲ್ಲಿ ಈ ಘಟನೆ ನಡೆದಿದೆ. ಕೇದಾರನಾಥ ಮತ್ತು ಬದರಿನಾಥಕ್ಕೆ ಭೇಟಿ ನೀಡಲಿದ್ದಾರೆ. ಹಲವಾರು ಅಭಿವೃದ್ಧಿ ಯೋಜನೆಗಳ ಅವಲೋಕನಕ್ಕಾಗಿ ಪ್ರಧಾನಿ ಇಲ್ಲಿಗೆ ಆಗಮಿಸುತ್ತಿದ್ದಾರೆ. ಇದಾದ ಬಳಿಕ ಕೇದ್ರನಾಥಕ್ಕೆ ಭೇಟಿ ನೀಡಲಿದ್ದು, ಬದರಿನಾಥಕ್ಕೂ ತೆರಳಲಿದ್ದಾರೆ. ಅಕ್ಟೋಬರ್ 21 ರಂದು ಕೇದಾರನಾಥ ದರ್ಶನದ ನಂತರ ರಾತ್ರಿ ಇಲ್ಲಿಯೇ ತಂಗುವ ಪ್ರಧಾನಿ ಅಕ್ಟೋಬರ್ 22 ರಂದು ಬದರಿನಾಥ ದರ್ಶನಕ್ಕೆ ತೆರಳಲಿದ್ದಾರೆ.


ಉತ್ತರಾಖಂಡದಲ್ಲಿ ನಡೆಯುತ್ತಿರುವ ಚಾರ್ ಧಾಮ್ ಯಾತ್ರೆಯಲ್ಲಿ ಅಪಾರ ಸಂಖ್ಯೆಯ ಭಕ್ತರ ದಂಡೇ ಇದೆ. ಕೇದಾರನಾಥ ಧಾಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇರುತ್ತಿದ್ದಾರೆ. ಎರಡು ವರ್ಷಗಳ ಬಳಿಕ ಕೊರೊನಾ ಭೀತಿಯಿಂದ ಮುಕ್ತಿ ಪಡೆದ ಭಕ್ತರಿಗೆ ಚಾರ್‌ಧಾಮ್ ಯಾತ್ರೆ ಆರಂಭವಾಗಿದೆ. ಇನ್ನೇನು ಚಾರ್ ಧಾಮ ಯಾತ್ರೆ ಹಿಮಪಾದದಿಂದ ಕೈಗೊಳ್ಳಲು ಸಾಧ್ಯವಾಗುವುದಿಲ್ಲ. ಹೀಗಾಗಿ ಆರು ತಿಂಗಳ ಸಮಯದಲ್ಲಿ ಕೇದಾರನಾಥಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುತ್ತಿದ್ದಾರೆ.
A helicopter ferrying pilgrims from Kedarnath temple to Guptkashi in Rudraprayag crashed into a hill due to poor visibility on October 18, killing all six pilgrims and the pilot on the spot.The chopper — Bell 407 (VT-RPN) and operated by Aryan Aviation — burst into flames at around 11.45 a.m. at Dev Darshini in Garud Chatti, Rudraprayag District Disaster Management Officer Nandan Singh said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm