ಬ್ರೇಕಿಂಗ್ ನ್ಯೂಸ್
18-10-22 07:45 pm HK News Desk ದೇಶ - ವಿದೇಶ
ಮಾಸ್ಕೋ, ಅ.18 : ಉಕ್ರೇನ್ ಜೊತೆಗೆ ಯುದ್ಧದಲ್ಲಿ ತೊಡಗಿರುವ ರಷ್ಯಾದ ಯುದ್ಧ ವಿಮಾನ, ಎಂಜಿನ್ ವೈಫಲ್ಯಕ್ಕೀಡಾಗಿ ಓಝೋ ಸಮುದ್ರ ತೀರದ ಯೇಸ್ಕೆ ನಗರದ ವಸತಿ ಪ್ರದೇಶದಲ್ಲಿ ಒಂಭತ್ತು ಅಂತಸ್ತಿನ ಕಟ್ಟಡದ ಮೇಲೆ ಪತನಗೊಂಡಿದೆ. ಅವಘಡದಲ್ಲಿ ಕಟ್ಟಡದಲ್ಲಿದ್ದ 13ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.
ಪತನಗೊಂಡ ಎಸ್‌ಯು-34 ಯುದ್ಧ ವಿಮಾನವು ತರಬೇತಿಯಲ್ಲಿತ್ತು ಎನ್ನಲಾಗುತ್ತಿದೆ. ಯೇಸ್ಕೆ ನಗರದಿಂದ ವಿಮಾನವು ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಪತನಗೊಂಡಿದೆ.


ವಿಮಾನದಲ್ಲಿದ್ದ ಇಬ್ಬರು ಸಿಬ್ಬಂದಿ ವಿಮಾನದಲ್ಲಿ ಬೆಂಕಿ ಕಾಣಿಸುತ್ತಲೇ ಪ್ಯಾರಾಚೂಟ್ ಮೂಲಕ ಹೊರಕ್ಕೆ ಹಾರಿದ್ದಾರೆ. ಆದರೆ, ವಿಮಾನವು ವಸತಿ ಕಟ್ಟಡದ ಮೇಲೆ ಎರಗಿದ್ದಲ್ಲದೆ ಇಂಧನ ಟ್ಯಾಂಕ್ ಸ್ಫೋಟಗೊಂಡು ಭಾರಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಯಿಂದ ಕಟ್ಟಡದಲ್ಲಿದ್ದ ಹಲವಾರು ಮಂದಿ ಮೃತಪಟ್ಟರೆ, ಬೆಂಕಿಯಿಂದ ತಪ್ಪಿಸಿಕೊಳ್ಳಲು ಕಟ್ಟಡದಿಂದ ಹೊರಕ್ಕೆ ಹಾರಿದ ಇತರ ಮೂವರು ಕೂಡ ಮೃತಪಟ್ಟಿದ್ದಾರೆ.



ಕಟ್ಟಡದ ಅವಶೇಷಗಳ ಮಧ್ಯೆ 13 ನಿವಾಸಿಗಳ ಮೃತದೇಹಗಳು ಸಿಕ್ಕಿವೆ. ಇದರಲ್ಲಿ ಮೂವರು ಮಕ್ಕಳೂ ಸೇರಿದ್ದಾರೆ. 19 ಮಂದಿ ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಟ್ಟಡದಲ್ಲಿದ್ದ 500 ನಿವಾಸಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ರಷ್ಯಾದ ರಕ್ಷಣಾ ಸಚಿವ ತಿಳಿಸಿದ್ದಾರೆ.
In this handout photo released by Kooperativ Telegram Channel, flames and smoke rise from the scene after a warplane crashed into a residential area in Yeysk, Russia.A burnt bus and debris of a warplane crashed into a residential area are seen in Yeysk, Russia.A firefighter works at the scene after a warplane crashed into a residential area in Yeysk, Russia.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm