ಬ್ರೇಕಿಂಗ್ ನ್ಯೂಸ್
20-10-22 06:45 pm HK News Desk ದೇಶ - ವಿದೇಶ
ಲಂಡನ್, ಅ.20: ಆಂಗ್ಲರ ನಾಡಿನಲ್ಲಿ ಮತ್ತೆ ರಾಜಕೀಯ ಬಿಕ್ಕಟ್ಟು ಎದುರಾಗಿದೆ. ಇತ್ತೀಚೆಗಷ್ಟೇ ಬ್ರಿಟನ್ ಪ್ರಧಾನಿ ಹುದ್ದೆಗೇರಿದ್ದ ಲಿಜ್ ಟ್ರಸ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾಗಿ ಹೇಳಿದ್ದಾರೆ.
ಲಿಜ್ ಟ್ರಸ್ ಸಂಪುಟದಲ್ಲಿದ್ದ ಇಬ್ಬರು ಸಚಿವರು ಬೆನ್ನು ಬೆನ್ನಿಗೆ ರಾಜಿನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಲಿಜ್ ಟ್ರಸ್ ಪ್ರಧಾನಿ ಹುದ್ದೆ ತೊರೆಯಲಿದ್ದಾರೆ ಎನ್ನುವ ವದಂತಿ ಹರಡಿತ್ತು. ಇದೀಗ ಸ್ವತಃ ಟ್ರಸ್ ಅವರೇ ತಮ್ಮ ಸ್ಥಾನ ತೊರೆಯುವುದಾಗಿ ಪ್ರಕಟಿಸಿದ್ದಾರೆ.
ನಾನು ಪ್ರಧಾನಿ ಹುದ್ದೆಗೇರಿದರೂ, ಈ ಸ್ಥಾನಕ್ಕೆ ನ್ಯಾಯ ದೊರಕಿಸಲು ಆಗುತ್ತಿಲ್ಲ. ಕನ್ಸರ್ವೇಟಿವ್ ಪಕ್ಷದ ಅಧ್ಯಕ್ಷರು ಮತ್ತು ಕಿಂಗ್ ಚಾರ್ಲ್ಸ್ ಜೊತೆಗೆ ಮಾತನಾಡಿದ್ದೇನೆ. ಮುಂದಿನ ಪ್ರಧಾನಿ ಆಗುವ ವರೆಗೆ ಈ ಸ್ಥಾನದಲ್ಲಿ ಹಂಗಾಮಿ ಇರುತ್ತೇನೆ. ಆದಷ್ಟು ಬೇಗ ಹೊಸ ಪ್ರಧಾನಿಯನ್ನು ಆಯ್ಕೆ ಮಾಡಬೇಕಾಗಿದೆ ಎಂದು ಹೇಳಿದ್ದಾರೆ.
ಬ್ರಿಟನ್ ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದ್ದು, ಅದಕ್ಕಾಗಿ ಮಿನಿ ಬಜೆಟ್ ಮಾಡುವುದಕ್ಕೆ ಲಿಜ್ ಟ್ರಸ್ ಮುಂದಾಗಿದ್ದರು. ಆದರೆ ಈ ಪ್ರಸ್ತಾಪಕ್ಕೆ ಸಂಪುಟದಲ್ಲಿ ಸಹಮತ ಸಿಕ್ಕಿರಲಿಲ್ಲ. ಇದೇ ಗೊಂದಲದಲ್ಲಿ ಕೆಲವು ಸಚಿವರು ರಾಜಿನಾಮೆ ಕೊಟ್ಟಿದ್ದರು. ಇದೀಗ ಸ್ವತಃ ಪ್ರಧಾನಿಯೇ ರಾಜಿನಾಮೆ ಕೊಟ್ಟಿದ್ದಾರೆ. ಇತ್ತೀಚೆಗಷ್ಟೇ ಭಾರತ ಮೂಲದ ರಿಷಿ ಸುನಕ್ ಮತ್ತು ಲಿಜ್ ಟ್ರಸ್ ನಡುವೆ ಭಾರೀ ಪೈಪೋಟಿ ಏರ್ಪಟ್ಟು ಟ್ರಸ್ ಪ್ರಧಾನಿ ಸ್ಥಾನಕ್ಕೇರಿದ್ದರು. ಆರು ವಾರಗಳ ವರೆಗೆ ಪ್ರಧಾನಿ ಕಚೇರಿಯಲ್ಲಿದ್ದ ಲಿಜ್ ಈಗ ಹೊರ ನಡೆದಿದ್ದಾರೆ.
British Prime Minister Liz Truss has described herself as “a fighter and not a quitter” as she faces down a hostile opposition and fury from her own Conservative Party over her botched economic plan.Truss on Wednesday attended her first session of Prime Minister’s Questions since newly appointed chancellor Jeremy Hunt ripped up the tax-cutting package unveiled by her new government less than a month ago.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm