ಬ್ರೇಕಿಂಗ್ ನ್ಯೂಸ್
22-10-22 08:33 pm HK News Desk ದೇಶ - ವಿದೇಶ
ಕಾಸರಗೋಡು, ಅ.22: ಉಪ್ಪಳದ ಬೇಕೂರು ಸರಕಾರಿ ಶಾಲೆಯಲ್ಲಿ ಚಪ್ಪರ ಕುಸಿತ ಪ್ರಕರಣದಲ್ಲಿ ಶಾಮಿಯಾನ ಕಂಟ್ರಾಕ್ಟರ್ ಸೇರಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಶಾಮಿಯಾನ ಗುತ್ತಿಗೆದಾರ ಗೋಕುಲದಾಸ್, ಅಹ್ಮದಾಲಿ, ಅಬ್ದುಲ್ ಬಶೀರ್, ಅಬ್ದುಲ್ ಶಮೀಲ್, ಇಲ್ಯಾಸ್ ಅಹ್ಮದ್ ಮತ್ತು ಅಶ್ರಫ್ ಬಂಧಿತರು. ಮಂಜೇಶ್ವರ ಉಪ ಜಿಲ್ಲಾ ಮಟ್ಟದ ವಿಜ್ಞಾನ ಮೇಳ ನಡೆಯುತ್ತಿದ್ದಾಗ ತಗಡು ಶೀಟಿನ ಚಪ್ಪರ ಕುಸಿದು ಬಿದ್ದಿತ್ತು. ಶುಕ್ರವಾರ ಮಧ್ಯಾಹ್ನ ನಡೆದ ಘಟನೆಯಲ್ಲಿ 60ಕ್ಕೂ ಹೆಚ್ಚು ಮಕ್ಕಳಿಗೆ ಗಾಯಗಳಾಗಿದ್ದವು. ಆ ಪೈಕಿ 15 ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು ಮಂಗಳೂರಿನ ಆಸ್ಪತ್ರೆಗೆ ಸೇರಿಸಲಾಗಿದೆ.
ಘಟನೆ ಬಗ್ಗೆ ಕೇರಳ ಶಿಕ್ಷಣ ಸಚಿವ ಶಿವನ್ ಕುಟ್ಟಿ ಉನ್ನತ ಮಟ್ಟದ ತನಿಖೆಗೆ ಆದೇಶ ಮಾಡಿದ್ದಾರೆ. ಎಸ್ಪಿ ಸೂಚನೆಯಂತೆ ಮಂಜೇಶ್ವರ ಪೊಲೀಸರು ಶಾಮಿಯಾನ ಹಾಕಿದ್ದ ಗುತ್ತಿಗೆದಾರ ಮತ್ತು ಕಾರ್ಮಿಕನ ನಿರ್ಲಕ್ಷ್ಯ ವಿರುದ್ಧ ಪ್ರಕರಣ ದಾಖಲಿಸಿದ್ದು ಅವರನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಉಪ ಜಿಲ್ಲಾ ಮಟ್ಟದ ಹನ್ನೊಂದು ಶಾಲೆಗಳ 200ಕ್ಕೂ ಹೆಚ್ಚು ಮಕ್ಕಳು ವಿಜ್ಞಾನ ಮೇಳಕ್ಕೆ ಬಂದಿದ್ದರು. ಶಾಮಿಯಾನ ಹಾಕುವಾಗ ವಹಿಸಿದ್ದ ನಿರ್ಲಕ್ಷ್ಯದಿಂದಾಗಿ ಘಟನೆ ನಡೆದಿತ್ತು.
ಹಲವಾರು ಮಕ್ಕಳನ್ನು ಮಂಜೇಶ್ವರ ಸರಕಾರಿ ಆಸ್ಪತ್ರೆ, ಮಂಗಲ್ಪಾಡಿ ಮತ್ತು ಕಾಸರಗೋಡಿನ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಚಪ್ಪರ ಕುಸಿದಾಗ 200ರಷ್ಟು ಮಕ್ಕಳು ಅಡಿಗೆ ಬಿದ್ದು ತಗಡಿ ಅಡಿಯಲ್ಲಿ ಸಿಲುಕಿಕೊಂಡಿದ್ದರು. ಶಾಲೆಯ ಮೈದಾನದಲ್ಲಿ ಬೃಹತ್ತಾಗಿ ಚಪ್ಪರ ಹಾಕಲಾಗಿತ್ತು. ಘಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಜಿಲ್ಲಾಧಿಕಾರಿ ಮತ್ತು ಎಸ್ಪಿ ಭೇಟಿಯಿತ್ತು ಪರಿಶೀಲನೆ ನಡೆಸಿದ್ದರು. ತಪ್ಪಿತಸ್ಥರ ವಿರುದ್ಧ ತುರ್ತು ಕ್ರಮಕ್ಕೆ ಸೂಚನೆ ನೀಡಿದ್ದರು.
ಉಪ್ಪಳ ಬೇಕೂರಿನ ಶಾಲೆಯಲ್ಲಿ ವಿಜ್ಞಾನ ಮೇಳ ; ಮಕ್ಕಳ ಮೇಲೆ ಕುಸಿದು ಬಿದ್ದ ತಗಡಿನ ಚಪ್ಪರ, ಹಲವರಿಗೆ ಗಾಯ
Manjeshwar police arrested six persons in connection with the pandal collapse that occurred at the sub district science exhibition on Friday. The arrested are identified as contractor of the pandal Gokuldas, Ahmed Ali A P, Abdul Basheer, Abdul Shameel, Ilyas Mohammed and Ashraf.
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm