ಬ್ರೇಕಿಂಗ್ ನ್ಯೂಸ್
24-10-22 11:22 am HK News Desk ದೇಶ - ವಿದೇಶ
ಲಂಡನ್, ಅ.24 : ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್, ಕನ್ಸರ್ವೇಟಿವ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದು, ಭಾರತ ಮೂಲದ ರಿಷಿ ಸುನಕ್ ಮುಂದಿನ ಪ್ರಧಾನಿಯಾಗುವುದು ಬಹುತೇಕ ಖಚಿತವಾಗಿದೆ.
ಕನ್ಸರ್ವೇಟಿವ್ ಪಕ್ಷದ ಅಧ್ಯಕ್ಷರಾಗುವವರು ಪ್ರಧಾನಿಯಾಗಲಿದ್ದು, ರಿಷಿ ಸುನಾಕ್ ಈಗಾಗಲೇ ತಾವು ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ. ಸೋಮವಾರ ಕನ್ಸರ್ವೇಟಿವ್ ಪಕ್ಷದ ಸಂಸದರಿಂದ ಮೊದಲ ಹಂತದ ಮತದಾನ ನಡೆಯಲಿದೆ.
ರಿಷಿ ಸುನಾಕ್ ಅವರಿಗೆ ಹೆಚ್ಚಿನ ಬೆಂಬಲ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಬೋರಿಸ್ ಜಾನ್ಸನ್ ಕಣದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗುತ್ತಿದೆ. ಈ ಮೊದಲು ಬೋರಿಸ್ ಜಾನ್ಸನ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ರಿಷಿ ಸುನಕ್, ಲಿಜ್ ಟ್ರಸ್ ಎದುರು ತೀವ್ರ ಪೈಪೋಟಿ ಕೊಟ್ಟು ಕೊನೆ ಕ್ಷಣದಲ್ಲಿ ಸೋಲು ಕಂಡಿದ್ದರು. ಆದರೆ ಹದಗೆಟ್ಟಿರುವ ಬ್ರಿಟನ್ ಆರ್ಥಿಕ ಪರಿಸ್ಥಿತಿಯನ್ನು ತಹಬದಿಗೆ ತರಲು ಲಿಜ್ ಟ್ರಸ್ ವಿಫಲರಾದ ಕಾರಣ ಕೇವಲ 45 ದಿನಗಳಲ್ಲಿಯೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಹೀಗಾಗಿ ಮತ್ತೆ ಚುನಾವಣೆ ನಡೆಯುತ್ತಿದ್ದು, ತಾವು ಕಣಕ್ಕಿಳಿಯುವುದಾಗಿ ರಿಷಿ ಸುನಾಕ್ ಈಗಾಗಲೇ ಘೋಷಿಸಿದ್ದಾರೆ. ಅಲ್ಲದೆ ತಾವು ಆಯ್ಕೆಯಾದರೆ ಬ್ರಿಟನ್ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ವಿಶ್ವಾಸ ಹೊಂದಿರುವುದಾಗಿ ತಿಳಿಸಿದ್ದಾರೆ.
In a surprise move, former British PM Boris Johnson on Sunday announced that he will not be contesting the Conservative Party leadership race, with frontrunner Rishi Sunak moving a step closer to be elected Britain's first Indian-origin prime minister.The 55-year-old former leader claimed he had crossed the 100-MPs threshold but decided not to go forward in the interest of Tory party's unity.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm