ಬ್ರೇಕಿಂಗ್ ನ್ಯೂಸ್
24-10-22 08:20 pm HK News Desk ದೇಶ - ವಿದೇಶ
ಲಂಡನ್, ಅ.24: ಭಾರತ ಮೂಲದ ಬ್ರಿಟನ್ ಯುವ ರಾಜಕಾರಣಿ ರಿಷಿ ಸುನಕ್ ಅವರು ಬ್ರಿಟನ್ ದೇಶದ ಮುಂದಿನ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಒಂದು ಕಾಲದಲ್ಲಿ ಸುಮಾರು 200 ವರ್ಷಗಳಿಗೂ ಹೆಚ್ಚು ಕಾಲ ಭಾರತವನ್ನು ಆಳಿದ್ದ ಬ್ರಿಟನ್ಗೆ ಇದೀಗ ಭಾರತ ಮೂಲದ ವ್ಯಕ್ತಿಯೊಬ್ಬರೇ ಆಡಳಿತ ಚುಕ್ಕಾಣಿ ಹಿಡಿಯುವಂತಾಗಿದೆ.
ವಿಶೇಷ ಅಂದ್ರೆ, ಇದೇ ಸುನಕ್ ಗೂ ಕನ್ನಡಿಗರಿಗೂ ನೇರ ನಂಟಿದೆ. ಈತ ಕನ್ನಡಿಗರಾದ ಇನ್ಫೋಸಿಸ್ ಕಂಪನಿ ಸ್ಥಾಪಕರಾದ ನಾರಾಯಣ ಮೂರ್ತಿ ಹಾಗೂ ಸುಧಾಮೂರ್ತಿ ದಂಪತಿಯ ಅಳಿಯನೂ ಹೌದು. ಬ್ರಿಟನ್ನಲ್ಲಿ ಪ್ರಬಲ ಯುವ ರಾಜಕಾರಣಿಯಾಗಿ ಬೆಳದಿರುವ ರಿಷಿ ಸುನಕ್ ಬದಲಾದ ಪರಿಸ್ಥಿತಿಯಲ್ಲಿ ಅತ್ಯುನ್ನತ ಹುದ್ದೆ ಪಡೆಯುವಂತಾಗಿದೆ. ಕೇವಲ 45 ದಿನ ಆಡಳಿತ ನಡೆಸಿದ ಲಿಜ್ ಟ್ರಸ್ ರಾಜಿನಾಮೆಯಿಂದಾಗಿ ಹೊಸ ಪ್ರಧಾನಿ ಆಯ್ಕೆ ಮಾಡಬೇಕಿತ್ತು. ಕನ್ಸರ್ವೇಟಿವ್ ಪಕ್ಷದ ಅರ್ಧಕ್ಕೂ ಹೆಚ್ಚು ಸಂಸದರು ಇವತ್ತು ರಿಷಿ ಸುನಕ್ ಅವರು ಪ್ರಧಾನಿಯಾಗಲು ಹಸಿರು ನಿಶಾನೆ ತೋರಿದರು.
ಪ್ರತಿಸ್ಫರ್ಧಿಯಾಗಲು ಬಯಸಿದ್ದ ಸಂಸದೆ ಪೆನ್ನಿ ಮೊರ್ಡಾಂಟ್ ಅವರಿಗೆ ಕೇವಲ 28 ಸಂಸದರು ಬೆಂಬಲ ನೀಡಿದರು. 198 ಸಂಸದರು ರಿಷಿ ಪರ ನಿಂತಿದ್ದರಿಂದ ಪ್ರಧಾನಿ ಸ್ಥಾನಕ್ಕೇರುವುದು ಸುಲಭ ಆಗಿದೆ. ಪ್ರತಿಸ್ಪರ್ಧಿಯೇ ಇಲ್ಲದೆ ಸುನಕ್ ಆಯ್ಕೆಯಾಗಿದ್ದಾರೆ. ಇದಕ್ಕೂ ಮುನ್ನ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ತಾನು ಪುನರಾಯ್ಕೆ ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದ ನಂತರ ರಿಷಿ ಸುನಕ್ ದಾರಿ ಸುಗಮವಾಗಿತ್ತು.
ಭಗವದ್ಗೀತೆ ಹಿಡಿದು ಪ್ರಮಾಣ ಸ್ವೀಕರಿಸಿದ್ದ ಸುನಕ್ !
ರಿಷಿ ಸುನಕ್ ಅವರು ಸಂಸತ್ತಿನಲ್ಲಿ ಭಗವದ್ಗೀತೆಯನ್ನು ಮುಂದಿಟ್ಟು ಯಾರ್ಕ್ಷೈರ್ ನಗರದ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಭಗವದ್ಗೀತೆ ಹಿಡಿದು ಪ್ರಮಾಣ ಸ್ವೀಕರಿಸಿದ್ದ ಮೊದಲ ಯುಕೆ ಸಂಸದ ಸುನಕ್. 2020ರಿಂದ ತೊಡಗಿ ಆರು ತಿಂಗಳ ಹಿಂದೆ ಬೋರಿಸ್ ಜಾನ್ಸನ್ ಪ್ರಧಾನಿ ಸ್ಥಾನದಿಂದ ಇಳಿಯುವ ವರೆಗೂ ಅವರ ಜೊತೆಗೆ ರಿಷಿ ಸುನಕ್ ಹಣಕಾಸು ಸಚಿವರಾಗಿದ್ದರು.
ರಿಷಿ ಸುನಕ್ ಅವರ ತಂದೆ ತಾಯಿಯರಿಬ್ಬರೂ ಭಾರತೀಯ ಮೂಲದವರು. ಸುನಕ್ ಅವರ ಪೋಷಕರು 1960ರ ದಶಕದಲ್ಲಿ ಪೂರ್ವ ಆಫ್ರಿಕಾದಿಂದ ಬ್ರಿಟನ್ಗೆ ವಲಸೆ ಬಂದಿದ್ದರು. ಇನ್ಫೋಸಿಸ್ ಮುಖ್ಯಸ್ಥ ನಾರಾಯಣ ಮೂರ್ತಿ ಅವರ ಪುತ್ರಿ ಅಕ್ಷತಾ ಮೂರ್ತಿ ಅವರನ್ನು ವಿವಾಹವಾಗಿದ್ದ ಸುನಕ್ ಅವರಿಗೆ ಕೃಷ್ಣ ಮತ್ತು ಅನೌಷ್ಕಾ ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಇವರು ತನ್ನ ಹೆಂಡತಿ ಮತ್ತು ಇಬ್ಬರು ಮಕ್ಕಳೊಂದಿಗೆ ಆಗಾಗ್ಗೆ ಬೆಂಗಳೂರಿಗೆ ಭೇಟಿ ನೀಡುತ್ತಿದ್ದರು.
Rishi Sunak on Monday is all set to make history as Britain's first Indian-origin Prime Minister after being elected unopposed as the new leader of the governing Conservative Party on Diwali, following Penny Mordaunt's withdrawal from the race.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm