ಬ್ರೇಕಿಂಗ್ ನ್ಯೂಸ್
26-10-22 10:06 pm HK News Desk ದೇಶ - ವಿದೇಶ
ನವದೆಹಲಿ, ಅ.26 : ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಧ್ಯಕ್ಷರಾಗಿ ಪದಗ್ರಹಣ ಮಾಡುತ್ತಲೇ 47 ಸದಸ್ಯರ ಸ್ಟೀರಿಂಗ್ ಸಮಿತಿಯನ್ನು ರಚಿಸಿದ್ದಾರೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಕೆಲಸವನ್ನು ಸ್ಟೀರಿಂಗ್ ಕಮಿಟಿ ಮಾಡಲಿದೆ
ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಖರ್ಗೆ ಅಧಿಕಾರ ವಹಿಸಿಕೊಂಡ ಕೆಲವೇ ಗಂಟೆಗಳಲ್ಲಿ ಹೊಸ ಸಮಿತಿಯನ್ನು ಪ್ರಕಟಿಸಲಾಗಿದ್ದು ಕಳೆದ ಬಾರಿ ಸಿಡಬ್ಲ್ಯುಸಿಯಲ್ಲಿದ್ದ ಬಹುತೇಕ ಸದಸ್ಯರನ್ನು ಸ್ಟೀರಿಂಗ್ ಕಮಿಟಿಯಲ್ಲಿ ಉಳಿಸಿಕೊಳ್ಳಲಾಗಿದೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಹಿರಿಯ ನಾಯಕರನ್ನು ನೂತನ ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ. ಪ್ರಿಯಾಂಕಾ ಗಾಂಧಿ, ಎಕೆ ಆಂಟನಿ, ಅಂಬಿಕಾ ಸೋನಿ, ಆನಂದ್ ಶರ್ಮಾ, ಕೆಸಿ ವೇಣುಗೋಪಾಲ್ ಮತ್ತು ರಣದೀಪ್ ಸುರ್ಜೆವಾಲಾ ಕೂಡ ಹೊಸ ಸಮಿತಿಯ ಭಾಗವಾಗಿದ್ದಾರೆ. ಈ ನಡುವೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಖರ್ಗೆ ವಿರುದ್ಧ ಸ್ಪರ್ಧಿಸಿದ್ದ ಶಶಿ ತರೂರ್ ಅವರು ಪಟ್ಟಿಯಿಂದ ನಾಪತ್ತೆಯಾಗಿದ್ದಾರೆ.
ವರದಿಗಳ ಪ್ರಕಾರ, ಪಕ್ಷದ ಎಲ್ಲ ಸಿಡಬ್ಲ್ಯುಸಿ ಸದಸ್ಯರು ಮತ್ತು ಪದಾಧಿಕಾರಿಗಳು ಹೊಸ ಅಧ್ಯಕ್ಷರು ತಮ್ಮ ಸ್ವಂತ ತಂಡವನ್ನು ಆಯ್ಕೆ ಮಾಡುವ ಸಲುವಾಗಿ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದರು. 'ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಸಂವಿಧಾನದ XV (ಬಿ) ಪ್ರಕಾರ, ಕಾಂಗ್ರೆಸ್ ಅಧ್ಯಕ್ಷರು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಬದಲಿಗೆ ಕಾರ್ಯ ನಿರ್ವಹಣೆಯ ಸಮಿತಿಯನ್ನು ರಚಿಸಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
New Congress president Mallikarjun Kharge on Wednesday set up a 47-member Steering Committee that includes former prime minister Manmohan Singh and the party's ex-presidents Sonia Gandhi and Rahul Gandhi.The interim panel headed by him would take the place of the Congress Working Committee, the apex decision-making body, till a new CWC is formed after Kharge's election is ratified at the party plenary.
16-07-25 07:05 pm
Bangalore Correspondent
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
16-07-25 01:01 pm
Mangalore Correspondent
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
16-07-25 04:37 pm
HK News Desk
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm