ಬ್ರೇಕಿಂಗ್ ನ್ಯೂಸ್
31-10-22 12:27 pm HK News Desk ದೇಶ - ವಿದೇಶ
ಅಹ್ಮದಾಬಾದ್, ಅ.31: ಮೋರ್ಬಿ ತೂಗು ಸೇತುವೆ ದುರಂತದಲ್ಲಿ ರಾಜಕೋಟ್ ಸಂಸದ ಮೋಹನ್ ಭಾಯ್ ಕುಂಡರಿಯಾ ಕುಟುಂಬಕ್ಕೆ ಸೇರಿದ 12 ಮಂದಿ ಸಾವು ಕಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕುಂಡರಿಯಾ, ನನ್ನ ಸೋದರಿಯ ಕುಟುಂಬಸ್ಥರು ದುರಂತದಲ್ಲಿ ಪ್ರಾಣ ಕಳಕೊಂಡಿದ್ದಾರೆ. ಐವರು ಮಕ್ಕಳು ಸೇರಿದಂತೆ 12 ಜನರು ಪ್ರವಾಸ ಹೋಗಿದ್ದಾಗ ದುರಂತ ಸಂಭವಿಸಿದೆ ಎಂದು ಹೇಳಿದ್ದಾರೆ.
ಸೇತುವೆ ದುರಸ್ತಿ ಆಗುತ್ತಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕ ಸಂಚಾರಕ್ಕೆ ಹೇಗೆ ಅವಕಾಶ ನೀಡಿರುವುದು ಹೇಗೆ ಎನ್ನುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲಾಗುವುದು. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು. ಮೃತರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳಾಗಿದ್ದಾರೆ. ಅತ್ಯಂತ ದುಃಖದ ಸಂಗತಿ. ನಾವು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಎನ್ ಡಿಆರ್ ಎಫ್ ತಂಡ ಕಾರ್ಯಾಚರಣೆ ನಡೆಸುತ್ತಿದೆ ಎಂದು ಕುಂಡರಿಯಾ ತಿಳಿಸಿದ್ದಾರೆ.
ಗುಜರಾತ್ ರಾಜಧಾನಿ ಅಹ್ಮದಾಬಾದ್ ನಿಂದ 300 ಕಿಮೀ ದೂರದ ಮೋರ್ಬಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಗೃಹ ಸಚಿವ ಹರ್ಷ ಸಾಂಘವಿ ಆಗಮಿಸಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಸಲು ಉನ್ನತ ಮಟ್ಟದ ಅಧಿಕಾರಿಗಳ ತಂಡವನ್ನು ನೇಮಕ ಮಾಡಲಾಗುವುದು ಎಂದು ಸಾಂಘವಿ ತಿಳಿಸಿದ್ದಾರೆ. ಐದು ಮಂದಿ ಅಧಿಕಾರಿಗಳ ತಂಡವನ್ನು ರಚಿಸಲಾಗಿದ್ದು, ಈಗಾಗ್ಲೇ ಘಟನೆ ಬಗ್ಗೆ ಸೆಕ್ಷನ್ 302, 304 ಮತ್ತು 114 ಪ್ರಕಾರ ಎಫ್ಐಆರ್ ದಾಖಲಾಗಿದೆ.
ಪ್ರಧಾನಿ ಚುನಾವಣೆ ಪ್ರಚಾರ ನಿಮಿತ್ತ ಗುಜರಾತ್ ಮತ್ತು ರಾಜಸ್ಥಾನಕ್ಕೆ ಮೂರು ದಿನಗಳ ಪ್ರವಾಸದಲ್ಲಿದ್ದಾರೆ. ಸೋಮವಾರ ಅಹ್ಮದಾಬಾದ್ ನಲ್ಲಿ ಸಾರ್ವಜನಿಕ ರ್ಯಾಲಿ ಏರ್ಪಾಡು ಮಾಡಲಾಗಿತ್ತು. ಮೋರ್ಬಿ ಸೇತುವೆ ದುರಂತದ ಹಿನ್ನೆಲೆಯಲ್ಲಿ ಮೋದಿ ರ್ಯಾಲಿಯನ್ನು ರದ್ದುಪಡಿಸಲಾಗಿದೆ. ಸಿಎಂ ಭೂಪೇಂದ್ರ ಪಟೇಲ್ ಅವರ ಚುನಾವಣಾ ರ್ಯಾಲಿಯನ್ನೂ ರದ್ದು ಪಡಿಸಲಾಗಿದೆ. ಚುನಾವಣೆಗೆ ಕೆಲವೇ ತಿಂಗಳು ಇರುವಾಗ ದುರಂತ ನಡೆದಿರುವುದು ಆಡಳಿತಾರೂಢ ಬಿಜೆಪಿಗೆ ಮುಜುಗರ ತಂದಿದೆ.
As many as twelve family members of Mohanbhai Kalyanji Kundariya, BJP MP from Rajkot, also lost their lives in the Morbi bridge collapse in Gujarat on Sunday evening. Speaking to India Today TV, Mohanbhai Kalyanji Kundariya said, "I have lost 12 members of my family, including five children, in the mishap. I lost family members who were from my sister's family."
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm