ಬ್ರೇಕಿಂಗ್ ನ್ಯೂಸ್
03-11-22 02:49 pm HK News Desk ದೇಶ - ವಿದೇಶ
ನವದೆಹಲಿ, ನ.3 : ಗುಜರಾತ್ ವಿಧಾನಸಭೆ ಚುನಾವಣೆಗೆ ಆಯೋಗ ದಿನಾಂಕ ಪ್ರಕಟಿಸಿದೆ. ಡಿಸೆಂಬರ್ 1 ಮತ್ತು 5ರಂದು ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8ರಂದು ಮತ ಎಣಿಕೆಗೆ ದಿನಾಂಕ ನಿಗದಿ ಮಾಡಲಾಗಿದೆ. ಹಿಮಾಚಲ ಪ್ರದೇಶದ ಚುನಾವಣೆಯೂ ಇದೇ ವೇಳೆ ನಡೆಯಲಿದ್ದು, ಡಿಸೆಂಬರ್ 8ರಂದೇ ಅಲ್ಲಿನ ಫಲಿತಾಂಶವೂ ಪ್ರಕಟವಾಗಲಿದೆ.
ದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಪ್ರಕಟಿಸಿದ್ದಾರೆ. ಗುಜರಾತಿನಲ್ಲಿ 182 ವಿಧಾನಸಭೆ ಸ್ಥಾನಗಳಿದ್ದು, ಈ ಪೈಕಿ 142 ಸಾಮಾನ್ಯ, 17 ಪರಿಶಿಷ್ಟ ಜಾತಿ ಮತ್ತು 23 ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದೆ. 4.9 ಕೋಟಿ ಮತದಾರರಿದ್ದು, ಈ 4.6 ಲಕ್ಷದಷ್ಟು ಹೊಸ ಮತದಾರರಿದ್ದಾರೆ. ಚುನಾವಣೆಗಾಗಿ 51 ಸಾವಿರ ಮತಗಟ್ಟೆಗಳನ್ನು ರೆಡಿ ಮಾಡಲಾಗುತ್ತಿದೆ. ಡಿ.1ರ ಮೊದಲ ಹಂತದ ಮತದಾನಕ್ಕೆ ನ.5ರಂದು ಅಧಿಸೂಚನೆ ಹೊರ ಬೀಳಲಿದೆ. ಎರಡನೇ ಹಂತದ ಡಿ.5ರ ಮತದಾನಕ್ಕೆ ನ.10ರಂದು ಅಧಿಸೂಚನೆ ಬರಲಿದೆ. ನ.14ರಿಂದ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.
ಈಗಾಗಲೇ ಗುಜರಾತ್ ಚುನಾವಣೆ ಪ್ರಚಾರಕ್ಕೆ ಬಿಜೆಪಿ, ಕಾಂಗ್ರೆಸ್ ಜೊತೆಗೆ ಆಮ್ ಆದ್ಮಿ ಪಕ್ಷವೂ ಕಣಕ್ಕಿಳಿದಿದ್ದು ತ್ರಿಕೋನ ರೂಪದಲ್ಲಿ ಸೆಣಸಾಟ ನಡೆಯುವ ನಿರೀಕ್ಷೆ ವ್ಯಕ್ತವಾಗಿದೆ. ಬಿಜೆಪಿ ಕಳೆದ 23 ವರ್ಷಗಳಿಂದ ಸುದೀರ್ಘ ಆಡಳಿತದಲ್ಲಿದ್ದು, ಆಡಳಿತ ವಿರೋಧಿ ಅಲೆಯನ್ನು ಮೆಟ್ಟಿ ನಿಲ್ಲಲು ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ಅವಿರತ ಶ್ರಮದಲ್ಲಿದ್ದಾರೆ.
ಇದೇ ವೇಳೆ, ಆಮ್ ಆದ್ಮಿ ಪಕ್ಷದ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎನ್ನುವ ಬಗ್ಗೆ ಜನರಿಂದಲೇ ಆಯ್ಕೆ ನಡೆಸಲಿದ್ದಾರೆ. ಪಂಜಾಬ್ ಮಾದರಿಯಲ್ಲಿ ಜನರಿಂದಲೇ ಸಿಎಂ ಅಭ್ಯರ್ಥಿ ಆಯ್ಕೆ ನಡೆಸಲಾಗುತ್ತಿದ್ದು, ಅದಕ್ಕಾಗಿ ಆನ್ಲೈನ್ ವೋಟಿಂಗ್ ಮಾಡಲು ಅವಕಾಶ ನೀಡಲಾಗಿದೆ. ಗುಜರಾತ್ ಘಟಕದ ಅಧ್ಯಕ್ಷ ಗೋಪಾಲ್ ಇಟಾಲಿಯಾ ಮತ್ತು ಆಪ್ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಇಸುದಾನ್ ಗಾಂಧವಿ ಸಿಎಂ ಅಭ್ಯರ್ಥಿ ಸ್ಥಾನದ ನಿರೀಕ್ಷೆಯಲ್ಲಿದ್ದಾರೆ.
Voting for the Gujarat Assembly election will take place in two phases,Election Commission announced on Thursday, adding that polling for the first phase will take place on December 1 and for the second phase on December 5.The counting of votes will take place on December 8, coinciding with that of Himachal Pradesh Assembly election.Chief Election Commissioner Rajiv Kumar addressed a press conference on the elections in New Delhi and expressed his condolences to the victims of the Morbi bridge collapse, that killed at least 135 people.
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm