ಬ್ರೇಕಿಂಗ್ ನ್ಯೂಸ್
05-11-22 05:56 pm HK News Desk ದೇಶ - ವಿದೇಶ
ಅಹ್ಮದಾಬಾದ್, ನ.5:ಗುಜರಾತ್ ನಲ್ಲಿ ಕಾಂಗ್ರೆಸ್ ಪಕ್ಷವು 5 ಸೀಟನ್ನೂ ಗೆಲ್ಲುವುದಿಲ್ಲ. ಈ ಬಗ್ಗೆ ನಾನು ಬರೆದು ಕೊಡುತ್ತೇನೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ಇಂಡಿಯಾ ಡುಡೇಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಅರವಿಂದ ಕೇಜ್ರಿವಾಲ್ ಈ ಮಾತು ಹೇಳಿದ್ದಾರೆ. ನಾವು ಕಾಂಗ್ರೆಸನ್ನು ಗಂಭೀರವಾಗಿ ಪರಿಗಣಿಸಿಯೇ ಇಲ್ಲ. ಅದು ಹೆಚ್ಚೆಂದರೆ ಐದು ಸೀಟಿಗಿಂತ ಕಡಿಮೆ ಗೆಲ್ಲಬಹುದಷ್ಟೇ ಎಂದು ಹೇಳಿದ್ದಾರೆ. ಗುಜರಾತಿನ ಜನರು ಬದಲಾವಣೆ ಬಯಸಿದ್ದಾರೆ. ಜನ ಬದಲಾವಣೆ ಬಯಸದೇ ಇದ್ದರೆ, ನಮಗೆ ಅಲ್ಲಿ ಜಾಗವೇ ಇರುತ್ತಿರಲಿಲ್ಲ. ನಾವು ಗುಜರಾತಿನಲ್ಲಿ 30 ಶೇಕಡಾ ಮತಗಳನ್ನು ಪಡೆಯುತ್ತೇವೆ. ಪಂಜಾಬ್ ಸರಕಾರ ರಚನೆ ಮಾಡಿದ್ದೇವೆ. ಗುಜರಾತಿನಲ್ಲೂ ಏನೋ ಒಂದು ಹೊಸತು ಆಗಲಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ 5 ಸೀಟಿಗಿಂತ ಹೆಚ್ಚು ಗೆಲ್ಲುವುದಿಲ್ಲ ಅನ್ನುವುದನ್ನು ಕಾಗದದಲ್ಲಿ ಬರೆದುಕೊಡುತ್ತೇನೆ. ನನ್ನ ಮಾತು ದಾಖಲೆ ಆಗಿರುತ್ತದೆ. ನಾವು ಅಲ್ಲಿ ಎರಡನೇ ಸ್ಥಾನದಲ್ಲಿರುತ್ತೇವೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಆದರೆ ಆಪ್ ಎಷ್ಟು ಸ್ಥಾನ ಗೆಲ್ಲುತ್ತದೆ ಅನ್ನುವುದನ್ನು ಖಚಿತವಾಗಿ ಹೇಳಿಲ್ಲ. ಎರಡನೇ ಸ್ಥಾನದಲ್ಲಂತೂ ಪಕ್ಷ ಇರಲಿದೆ ಎಂದಿದ್ದಾರೆ.
ಬಿಜೆಪಿ ಹಿಂದಿಗಿಂತ 20 ಶೇಕಡಾ ಮತಗಳನ್ನು ಕಳಕೊಳ್ಳಲಿದೆ. ನಮ್ಮ ಆಂತರಿಕ ಸರ್ವೇಯಲ್ಲಿ ಮತಗಳು ಆಮ್ ಆದ್ಮಿ ಪಾಲಾಗುವುದು ಕಂಡುಬಂದಿದೆ. ಕಾಂಗ್ರೆಸ್ ಪಾಲಿಗೆ ಮತ ಹೋಗಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ. 2024ರ ಲೋಕಸಭೆ ಚುನಾವಣೆಗೆ ತಯಾರಾಗುತ್ತೀರಾ ಎಂಬ ಪ್ರಶ್ನೆಗೆ, ಲೋಕಸಭೆ ಚುನಾವಣೆಗೆ ಇನ್ನೂ ಕಾಲ ಇದೆ, ಈಗ ಗುಜರಾತ್ ಚುನಾವಣೆ ಎದುರಿಸುತ್ತಿದ್ದೇವೆ ಎಂದಿದ್ದಾರೆ.
The Congress will get fewer than five seats in Gujarat, Delhi chief minister Arvind Kejriwal declared Saturday. Speaking at a media conclave hosted by India Today in the national capital, the AAP boss panned his rival's chances ahead of next month's polls and asked 'who takes the Congress seriously'.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm