ಬ್ರೇಕಿಂಗ್ ನ್ಯೂಸ್
08-11-22 08:34 pm HK News Desk ದೇಶ - ವಿದೇಶ
ನವದೆಹಲಿ, ನ.8 : ಖಾಸಗಿ ಅನುದಾನ ರಹಿತ ವೈದ್ಯಕೀಯ ಕಾಲೇಜುಗಳಲ್ಲಿ ಎಂಬಿಬಿಎಸ್ ಕೋರ್ಸ್ ವಾರ್ಷಿಕ ಬೋಧನಾ ಶುಲ್ಕವನ್ನು ರೂ. 24 ಲಕ್ಷಕ್ಕೆ ಹೆಚ್ಚಿಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ತಡೆ ನೀಡಿದ್ದ ಆಂಧ್ರ ಪ್ರದೇಶ ಹೈಕೋರ್ಟ್ ಆದೇಶವನ್ನ ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಶಿಕ್ಷಣ ಲಾಭ ಗಳಿಸುವ ವ್ಯವಹಾರ ಅಲ್ಲ, ಬೋಧನಾ ಶುಲ್ಕ ಯಾವಾಗಲೂ ಜನರಿಗೆ ಕೈಗೆಟುಕುವಂತಿರಬೇಕು ಎಂದು ಹೇಳಿದೆ.
2011ರಲ್ಲಿ ನಿಗದಿಪಡಿಸಿದ್ದ ಶುಲ್ಕಕ್ಕಿಂತ ಏಳು ಪಟ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ 2017ರಲ್ಲಿ ಕೈಗೊಂಡ ನಿರ್ಧಾರ ಅಸಮರ್ಥನೀಯ ಎಂದು ನ್ಯಾಯಮೂರ್ತಿಗಳಾದ ಎಂ.ಆರ್. ಶಾ ಮತ್ತು ಎಂ.ಎಂ.ಸುಂದ್ರೇಶ್ ಅವರಿದ್ದ ಪೀಠ ತೀರ್ಪು ನೀಡಿದೆ.
ಈ ಹಿನ್ನೆಲೆಯಲ್ಲಿ ಸರ್ಕಾರ ಹಾಗೂ ಅರ್ಜಿದಾರ ವೈದ್ಯಕೀಯ ಕಾಲೇಜಿಗೆ ತಲಾ ರೂ.2.5 ಲಕ್ಷ ದಂಡ ವಿಧಿಸಿದ ನ್ಯಾಯಾಲಯ ದಂಡದ ಮೊತ್ತವನ್ನು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ (ನಾಲ್ಸಾ) ಮತ್ತು ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಮತ್ತು ಸಮನ್ವಯ ಯೋಜನಾ ಸಮಿತಿಗೆ ಪಾವತಿಸುವಂತೆ ಸೂಚಿಸಿದೆ.
ಇದೇ ವೇಳೆ, 2017ರ ಸೆಪ್ಟೆಂಬರ್‌ನಲ್ಲಿ ಹೊರಡಿಸಲಾದ ಸರ್ಕಾರಿ ಆದೇಶದ ಅನ್ವಯ ವಿದ್ಯಾರ್ಥಿಗಳಿಂದ ವಸೂಲಿ ಮಾಡಿದ್ದ ಹೆಚ್ಚುವರಿ ಶುಲ್ಕವನ್ನು ಮರು ಪಾವತಿಸುವಂತೆ ವೈದ್ಯಕೀಯ ಕಾಲೇಜುಗಳಿಗೆ ಹೈಕೋರ್ಟ್ ನೀಡಿದ್ದ ನಿರ್ದೇಶನವನ್ನೂ ಸುಪ್ರೀಂ ಕೋರ್ಟ್ ಎತ್ತಿ ಹಿಡಿಯಿತು.
ಪ್ರವೇಶಾತಿ ಮತ್ತು ಶುಲ್ಕ ನಿಯಂತ್ರಣ ಸಮಿತಿ (ಎಎಫ್‌ಆರ್‌ಸಿ) ಈ ಹಿಂದೆ ನಿಗದಿಪಡಿಸಿದ್ದ ಬೋಧನಾ ಶುಲ್ಕಕ್ಕಿಂತ ಹೆಚ್ಚಿನ ಮೊತ್ತವನ್ನು ನಿಗದಿಪಡಿಸಿದ್ದರೆ ಸಂಬಂಧಪಟ್ಟ ವಿದ್ಯಾರ್ಥಿಗಳಿಂದ ಆ ಮೊತ್ತವನ್ನು ಸಂಗ್ರಹಿಸಲು ವೈದ್ಯಕೀಯ ಕಾಲೇಜುಗಳು ಮುಕ್ತವಾಗಿರುತ್ತವೆ. ಆದರೆ, ಸಂಗ್ರಹಿಸಿದ ಮೊತ್ತ ಇರಿಸಿಕೊಳ್ಳಲು ಸಂಬಂಧಪಟ್ಟ ವೈದ್ಯಕೀಯ ಕಾಲೇಜುಗಳಿಗೆ ಅನುಮತಿ ನೀಡುವಂತಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.
ಶುಲ್ಕದ ನಿರ್ಣಯ ಅಥವಾ ಶುಲ್ಕದ ಪರಿಶೀಲನೆ, ಶುಲ್ಕ ನಿಗದಿ ನಿಯಮಗಳಿಗೆ ಒಳಪಟ್ಟಿರಬೇಕು. ಬೋಧನಾ ಶುಲ್ಕ ಪರಿಷ್ಕರಿಸುವಾಗ ನಿಯಮಾವಳಿಗಳನ್ನು ಎಎಫ್‌ಆರ್‌ಸಿ ಪರಿಗಣಿಸುವ ಅಗತ್ಯವಿದೆ ಎಂದು ಪೀಠ ಹೇಳಿದೆ.
Education is not a business to earn profit and tuition fees shall always be affordable, the Supreme Court has said while upholding the Andhra Pradesh High Court order quashing the state government’s decision to enhance the tuition fee in medical colleges to Rs 24 lakh per annum.A bench of Justices M R Shah and Sudhanshu Dhulia imposed a cost of Rs 5 lakh on the petitioner, Narayana Medical College, and Andhra Pradesh to be deposited with the court registry within a period of six weeks.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm