ರಾಜೀವ ಗಾಂಧಿ ಹಂತಕರಿಗೆ ಕಡೆಗೂ ಬಿಗ್ ರಿಲೀಫ್ ; ನಳಿನಿ ಸೇರಿ ಆರು ಮಂದಿಗೆ ಬಿಡುಗಡೆ ಭಾಗ್ಯ ! 

11-11-22 05:13 pm       HK News Desk   ದೇಶ - ವಿದೇಶ

ದಿವಂಗತ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಆರು ಮಂದಿ ಹಂತಕರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಸುದೀರ್ಘ ಕಾಲದ ಜೈಲು ವಾಸದ ಬಳಿಕ ಜೈಲಿನಿಂದ ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ನೀಡಿದೆ. 

ನವದೆಹಲಿ, ನ.11 : ದಿವಂಗತ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಆರು ಮಂದಿ ಹಂತಕರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಸುದೀರ್ಘ ಕಾಲದ ಜೈಲು ವಾಸದ ಬಳಿಕ ಜೈಲಿನಿಂದ ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ನೀಡಿದೆ. 

ಪ್ರಕರಣದಲ್ಲಿ ನಳಿನಿ ಶ್ರೀಹರನ್ ಸೇರಿದಂತೆ ಐವರು ತಮಿಳುನಾಡಿನ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದರು. ಈ ಹಿಂದೆ ತಮಿಳುನಾಡು ಸರ್ಕಾರವೂ ರಾಜೀವ್ ಗಾಂಧಿ ಹಂತಕರ ಬಿಡುಗಡೆಗೆ ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು. ಇದನ್ನು ಸುಪ್ರೀಂ ಕೋರ್ಟ್ ಪರಿಗಣಿಸಿದ್ದು, ಅವರ ಬಿಡುಗಡೆಗೆ ಆದೇಶಿಸಿದೆ. ಮೇ ತಿಂಗಳಲ್ಲಿ ಮತ್ತೋರ್ವ ಆರೋಪಿ ಪೇರಾರಿವಾಳನ್ ಅವರನ್ನು ಸುಪ್ರೀಂ ಕೋರ್ಟ್ ಬಿಡುಗಡೆ ಮಾಡಿತ್ತು. 

Fresh injustice, Orwellian': Supreme Court dissent in EWS ruling decries  'othering' of SC/STs, OBCs

ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ 21 ಮಂದಿಯ ಪೈಕಿ ನಳಿನಿ ಶ್ರೀಹರನ್, ಶ್ರೀಹರನ್, ಸಂತನ್, ಮುರುಗನ್, ರಾಬರ್ಟ್ ಪಾಯಸ್ ಮತ್ತು ರವಿಚಂದ್ರನ್ ಜೈಲಿನಲ್ಲಿದ್ದಾರೆ. ಸುಪ್ರೀಂ ಕೋರ್ಟಿನ ನ್ಯಾಯಾಧೀಶರಾದ ಬಿ.ಆರ್ ಗವಾಯಿ, ಬಿ.ವಿ ನಾಗರತ್ನ ಅವರಿದ್ದ ಪೀಠವು ಅಪರಾಧಿಗಳ ಬಿಡುಗಡೆಗೆ ಆದೇಶ ನೀಡಿದೆ. 

1991ರ ಮೇ 21ರಂದು ತಮಿಳುನಾಡಿನ ಪೆರಂಬೂರಿನಲ್ಲಿ ಎಲ್ಟಿಟಿಇ ಗುಂಪಿನ ಮಹಿಳಾ ಆತ್ಯಾಹುತಿ ಬಾಂಬರ್ ಗಳು ರಾಜೀವ್ ಗಾಂಧಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ಹತ್ಯೆ ಮಾಡಿದ್ದರು.

The Supreme Court on Friday set free Nalini Sriharan, R P Ravichandran and four others serving life sentences in the Rajiv Gandhi assassination case.