ಬ್ರೇಕಿಂಗ್ ನ್ಯೂಸ್
17-11-22 01:18 pm Bangalore Correspondent ದೇಶ - ವಿದೇಶ
ಬೆಂಗಳೂರು, ನ.17 : ರಾಜ್ಯದ ಎಲೆಕ್ಟ್ರಾನಿಕ್ ವಲಯದಲ್ಲಿ 36,804 ಕೋಟಿ ರು. ಬಂಡವಾಳ ಹೂಡಿಕೆಗೆ ಉದ್ಯಮಿಗಳು ಆಸಕ್ತಿ ವ್ಯಕ್ತಪಡಿಸಿದ್ದಾರೆ ಎಂದು ಐಟಿ-ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರಕಟಿಸಿದರು. ಬೆಂಗಳೂರು ತಂತ್ರಜ್ಞಾನ ಸಮಾವೇಶ'ದಲ್ಲಿ ಮಾತನಾಡಿದ ಅವರು, ಎಲೆಕ್ಟ್ರಾನಿಕ್ ವಲಯದಲ್ಲಿ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ 36 ಸಾವಿರ ಕೋಟಿ ರು. ಹೂಡಿಕೆ ಮಾಡಲು ಕಂಪನಿಗಳು ಆಸಕ್ತಿ ವಹಿಸಿವೆ. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಬೆಂಗಳೂರಿನ ಸಾಧನೆ ಅಭೂತಪೂರ್ವವಾಗಿದ್ದು, ಇಡೀ ದೇಶ ಮತ್ತು ಜಗತ್ತು ಬೆಂಗಳೂರಿನತ್ತ ನೋಡುತ್ತಿವೆ ಎಂದು ಹೇಳಿದರು.
ಐಟಿ ಮತ್ತು ಬಿಟಿ ವಲಯದಲ್ಲಿ ಈಗ ನಡೆಯುತ್ತಿರುವ 135 ಶತಕೋಟಿ ಡಾಲರ್ ಮೌಲ್ಯದ ರಫ್ತು ವಹಿವಾಟನ್ನು 2025ರ ಹೊತ್ತಿಗೆ 300 ಶತಕೋಟಿ ಡಾಲರ್‌ಗೆ ಹೆಚ್ಚಿಸುವ ಗುರಿಯಿದೆ. ರಾಜ್ಯವು ಸೆಮಿ ಕಂಡಕ್ಟರ್, ಚಿಪ್, ವಿನ್ಯಾಸ ಇತ್ಯಾದಿ ಕ್ಷೇತ್ರಗಳ ತೊಟ್ಟಿಲಾಗುತ್ತಿದೆ. ಸೆಮಿ ಕಂಡಕ್ಟರ್ ಕ್ಷೇತ್ರದಲ್ಲಿ ಈಗಾಗಲೇ 22,900 ಕೋಟಿ ರು. ಮೊತ್ತದ ಹೂಡಿಕೆಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದರು.
ರಾಜ್ಯದಲ್ಲಿ ಗುಣಮಟ್ಟದ ಶಿಕ್ಷಣ ಮತ್ತು ಕೌಶಲ್ಯ ತರಬೇತಿಗೆ ಆದ್ಯತೆ ನೀಡಲಾಗಿದೆ. ಉದ್ಯಮಗಳಿಗೆ ಬೇಕಾದ ನುರಿತ ಮಾನವ ಸಂಪನ್ಮೂಲವನ್ನು ನಿರಂತರವಾಗಿ ಪೂರೈಸುವ ದಕ್ಷ ವ್ಯವಸ್ಥೆಯನ್ನು ಸೃಷ್ಟಿಸಲಾಗುತ್ತಿದೆ. ದೇಶದ ಒಟ್ಟು ಸ್ಟಾರ್ಟಪ್ ವಲಯದ ಮೌಲ್ಯದಲ್ಲಿ ರಾಜ್ಯವು ಶೇ.55 ರಷ್ಟು ಪಾಲು ಹೊಂದಿದೆ. ರಾಜ್ಯದಲ್ಲಿ ಮೂಲಸೌಲಭ್ಯ ಸುಧಾರಣೆ ಮತ್ತು ಸಂಚಾರ ವ್ಯವಸ್ಥೆಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಪ್ರಾಶಸ್ತ್ಯ ನೀಡಿದೆ ಎಂದರು.
ಟೆಕ್ ಶೃಂಗದಲ್ಲಿ ಭಾಗಿಯಾಗಿರುವ 100ಕ್ಕೂ ಅಧಿಕ ಸ್ಟಾರ್ಟ್ ಅಪ್ ಮಳಿಗೆಗಳಿಗೆ ಐಟಿ-ಬಿಟಿ ಸಚಿವ ಡಾ.ಸಿ ಎನ್.ಅಶ್ವತ್ಥನಾರಾಯಣ ಅವರು ಭೇಟಿ ನೀಡಿ, ಮೆಚ್ಚುಗೆ ವ್ಯಕ್ತಪಡಿಸಿದರು. ನವೋದ್ಯಮವನ್ನು ಉತ್ತೇಜಿಸಲು ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ತಿಳಿಸಿದರು. ಯುವ ಜನರು ಮತ್ತು ಮಕ್ಕಳೊಂದಿಗೂ ಮಾತನಾಡಿದರು. ಐಟಿ-ಬಿಟಿ ಇಲಾಖೆ ನಿರ್ದೇಶಕಿ ಮೀನಾ ನಾಗರಾಜ್, ಸಂಸ್ಥೆಯ ಪ್ರಧಾನ ವ್ಯವಸ್ಥಾಪಕ ಅರ್ಜುನ್ ಒಡೆಯರ್ ಸಚಿವರಿಗೆ ಸಾಥ್ ನೀಡಿದರು.
Electronic manufacturers have shown interest to set up units in the state with big ticket investments adding up to about Rs 36,804 crore, IT/BT Minister CN Ashwath Narayan on Wednesday. Karnataka is well placed to attract investments in the ESDM (electronics system design & manufacturing) sector, and the government is ready to support investors in line with the Make in India policy, he said speaking at the Bengaluru Tech Summit, 2022.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm