ಬ್ರೇಕಿಂಗ್ ನ್ಯೂಸ್
17-11-22 05:10 pm HK News Desk ದೇಶ - ವಿದೇಶ
ಸಿಲಿಗುರಿ,(ಪ. ಬಂಗಾಳ), ನ.17 : ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಿದ್ದಾಗ ವೇದಿಕೆಯಲ್ಲೇ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ.
ವೇದಿಕೆಯ ಮೇಲಿದ್ದಾಗ ಸಕ್ಕರೆ ಮಟ್ಟ ಕಡಿಮೆಯಾಗಿದ್ದು, ತಕ್ಷಣವೇ ಅವರಿಗೆ ಪ್ರಥಮ ಚಿಕಿತ್ಸೆ ನೀಡಲಾಯ್ತು. ಆನಂತರ, ಚಿಕಿತ್ಸೆಗಾಗಿ ತಕ್ಷಣವೇ ಅವರನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ.
ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಸರ್ಕಾರದ ಯೋಜನೆಗಳನ್ನು ಉದ್ಘಾಟಿಸಲು ನಿತಿನ್ ಗಡ್ಕರಿ ಆಗಮಿಸಿದ್ದರು. ಸಿಲಿಗುರಿಯಲ್ಲಿ 1206 ಕೋಟಿ ವೆಚ್ಚದ 3 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ್ದರು. ಕಾರ್ಯಕ್ರಮ ನಡೆಯುತ್ತಿರುವಾಗಲೇ ಗಡ್ಕರಿ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಇದಾದ ಬಳಿಕ ಸುಕ್ನಾ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರ ತಂಡ ಆಗಮಿಸಿ ಚಿಕಿತ್ಸೆ ನೀಡಿದೆ.
ಈ ಹಿಂದೆಯೂ ಕಾರ್ಯಕ್ರಮದ ವೇಳೆ ಗಡ್ಕರಿ ಅವರ ಆರೋಗ್ಯ ಹದಗೆಟ್ಟಿತ್ತು. 2018ರ ಡಿಸೆಂಬರ್ ನಲ್ಲಿ ಮಹಾರಾಷ್ಟ್ರದ ಅಹ್ಮದ್ ನಗರ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಆರೋಗ್ಯ ಹದಗೆಟ್ಟಿತ್ತು. ಗಡ್ಕರಿ ವೇದಿಕೆಯಲ್ಲೇ ಪ್ರಜ್ಞೆ ತಪ್ಪಿ ಕುಸಿದಿದ್ದರು. ನಂತರ ನಿತಿನ್ ಗಡ್ಕರಿ ಅವರನ್ನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
Union Minister for Road Transport and Highways Nitin Gadkari fell ill on stage in Siliguri in north Bengal on Thursday. Gadkari was attending an event to launch the construction of the proposed 13 km four-lane elevated road along NH10 at the northern end of the city.The Union Minister complained about uneasiness in the middle of the programme. Soon, doctors came and examined him."Sudden drop in his blood sugar parameter led to the Union Minister’s illness. Doctors treated him,’’ said a BJP leader.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm