ಸೌದಿ ಅರೇಬಿಯಾಕ್ಕೆ ಪ್ರಯಾಣಿಸಲು ಇನ್ಮುಂದೆ ಪೊಲೀಸ್ ಕ್ಲಿಯರೆನ್ಸ್ ಬೇಕಾಗಿಲ್ಲ ! ಭಾರತೀಯರಿಗೆ ವಿನಾಯಿತಿ ನೀಡಿದ ಸೌದಿ ಸರ್ಕಾರ  

18-11-22 02:33 pm       HK News Desk   ದೇಶ - ವಿದೇಶ

ಸೌದಿ ಅರೇಬಿಯಾಕ್ಕೆ ಪ್ರಯಾಣಿಸುವ ಭಾರತೀಯರಿಗೆ ಇನ್ನು ಮುಂದೆ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರದ ಅಗತ್ಯವಿರುವುದಿಲ್ಲ. ಸೌದಿ ವೀಸಾಗೆ ಅರ್ಜಿ ಸಲ್ಲಿಸಲು ಭಾರತೀಯರು ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರ ನೀಡುವುದಕ್ಕೆ ವಿನಾಯ್ತಿ ನೀಡಲಾಗಿದೆ. 

ನವದೆಹಲಿ, ನ.18: ಸೌದಿ ಅರೇಬಿಯಾಕ್ಕೆ ಪ್ರಯಾಣಿಸುವ ಭಾರತೀಯರಿಗೆ ಇನ್ನು ಮುಂದೆ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರದ ಅಗತ್ಯವಿರುವುದಿಲ್ಲ. ಸೌದಿ ವೀಸಾಗೆ ಅರ್ಜಿ ಸಲ್ಲಿಸಲು ಭಾರತೀಯರು ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರ ನೀಡುವುದಕ್ಕೆ ವಿನಾಯ್ತಿ ನೀಡಲಾಗಿದೆ. 

ಸೌದಿ ಅರೇಬಿಯಾ ಮತ್ತು ಭಾರತದ ನಡುವಿನ ಸಂಬಂಧ ಬಲಗೊಳಿಸುವ ದೃಷ್ಟಿಯಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಭಾರತದಲ್ಲಿನ ಸೌದಿ ರಾಯಭಾರ ಕಚೇರಿ ಟ್ವೀಟ್ ಮಾಡಿದೆ. ಇನ್ನು ಮುಂದೆ ಭಾರತೀಯ ಪ್ರಜೆಗಳು ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರವನ್ನು (ಪಿಸಿಸಿ) ರಾಯಭಾರ ಕಚೇರಿಗೆ ಸಲ್ಲಿಸುವ ಅಗತ್ಯವಿಲ್ಲ ಎಂದು ನವದೆಹಲಿಯಲ್ಲಿರುವ ಸೌದಿ ಅರೇಬಿಯಾ ರಾಯಭಾರ ಕಚೇರಿ ತಿಳಿಸಿದೆ. 

Indians No Longer Needs Police Clearance Certificate to Obtain Saudi Visa

ರಾಯಭಾರ ಕಚೇರಿ ಈ ಬಗ್ಗೆ ಟ್ವೀಟ್ ಮಾಡಿದ್ದು, ಸೌದಿ ಅರೇಬಿಯಾ ಮತ್ತು ಭಾರತದ ನಡುವಿನ ಬಲವಾದ ಸಂಬಂಧಗಳು ಮತ್ತು ಕಾರ್ಯತಂತ್ರದ ಪಾಲುದಾರಿಕೆ ದೃಷ್ಟಿಯಿಂದ, ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರವನ್ನು (ಪಿಸಿಸಿ) ಸಲ್ಲಿಸುವುದರಿಂದ ಭಾರತೀಯ ಪ್ರಜೆಗಳಿಗೆ ವಿನಾಯಿತಿ ನೀಡಲು ಸೌದಿ ಸರ್ಕಾರ ನಿರ್ಧರಿಸಿದೆ ಎಂದು ಹೇಳಿದೆ. 

ರಾಜ್ಯದಲ್ಲಿ ಶಾಂತಿಯುತವಾಗಿ ವಾಸಿಸುತ್ತಿರುವ ಎರಡು ಮಿಲಿಯನ್ ಭಾರತೀಯ ನಾಗರಿಕರ ಕೊಡುಗೆಯನ್ನು ರಾಯಭಾರ ಕಚೇರಿ ಪ್ರಶಂಶಿಸುತ್ತದೆ ಎಂದು ರಾಯಭಾರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ. ಸೌದಿ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನಿ ಮೊಹಮ್ಮದ್ ಬಿನ್ ಸಲ್ಮಾನ್ ಈ ತಿಂಗಳು ಭಾರತಕ್ಕೆ ಭೇಟಿ ನೀಡಲಿದ್ದರು. ಆದರೆ, ಕೊನೆ ಕ್ಷಣದಲ್ಲಿ ಭೇಟಿ ರದ್ದಾಗಿತ್ತು.

Indian citizens will no longer require police clearance certificate (PCC) for obtaining Saudi visa, the Royal Embassy of Saudi Arabia has announced.“The PCC will no longer be a requirement for Indian citizens to obtain a visa for travelling to Saudi Arabia,” it said in a public announcement.