ಬ್ರೇಕಿಂಗ್ ನ್ಯೂಸ್
18-11-22 02:55 pm HK News Desk ದೇಶ - ವಿದೇಶ
ನವದೆಹಲಿ, ನ.18 : ಭಾರತದ ಮೊಟ್ಟಮೊದಲ ಖಾಸಗಿ ಕಂಪೆನಿ ನಿರ್ಮಿತ ರಾಕೆಟ್ ವಿಕ್ರಮ್- ಸಬ್ ಆರ್ಬಿಟಲ್ (ವಿಕೆಎಸ್) ಯಶಸ್ವಿಯಾಗಿ ಅಂತರಿಕ್ಷಕ್ಕೆ ಉಡಾವಣೆಯಾಗಿದೆ. ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಬೆಳಗ್ಗೆ 11.30ರ ಸುಮಾರಿಗೆ ಇಸ್ರೋ ಯಶಸ್ವಿ ಉಡಾವಣೆ ಮಾಡಿದೆ.
ಸ್ಕೈರೂಟ್ ಏರೋಸ್ಪೇಸ್ ಅಭಿವೃದ್ಧಿಪಡಿಸಿದ ರಾಕೆಟ್‌ಗೆ ಭಾರತದ ಬಾಹ್ಯಾಕಾಶ ಕ್ಷೇತ್ರದ ಪಿತಾಮಹ ಎಂದು ಕರೆಯಲ್ಪಡುವ ವಿಕ್ರಮ್ ಸಾರಾಭಾಯ್ ಅವರ ಹೆಸರನ್ನು ಇಡಲಾಗಿದೆ. IN-SPACe (ಭಾರತೀಯ ರಾಷ್ಟ್ರೀಯ ಬಾಹ್ಯಾಕಾಶ ಪ್ರಚಾರ ಮತ್ತು ಅಧಿಕಾರ ಕೇಂದ್ರ) ಅಧ್ಯಕ್ಷರಾದ ಡಾ.ಪವನ್ ಕುಮಾರ್ ಗೋಯೆಂಕಾ ಅವರು ಯಶಸ್ವಿ ರಾಕೆಟ್ ಉಡಾವಣೆ ಪ್ರಯತ್ನವನ್ನು ಭಾರತದ ಬಾಹ್ಯಾಕಾಶ ಇತಿಹಾಸದಲ್ಲಿ "ಹೊಸ ಮೈಲಿಗಲ್ಲು" ಎಂದು ಕರೆದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 2020 ರಲ್ಲಿ ಖಾಸಗಿ ಕಂಪನಿಗಳಿಗೆ ಬಾಹ್ಯಾಕಾಶ ಕ್ಷೇತ್ರವನ್ನು ತೆರೆದ ನಂತರ ಮೊದಲ ಬಾರಿಗೆ ದೇಶೀಯವಾಗಿ ಖಾಸಗಿ ರಾಕೆಟ್ ಉಡಾವಣೆ ಮಾಡಲಾಗಿದೆ. ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ರಾಕೆಟ್ ಉಡಾವಣೆ ವೇಳೆ ಪಾಲ್ಗೊಂಡು ತಂಡದೊಂದಿಗಿನ ಫೋಟೋವನ್ನೂ ಹಂಚಿಕೊಂಡಿದ್ದಾರೆ. "ಇದು ನಿಜವಾಗಿಯೂ ಖಾಸಗಿ ಬಾಹ್ಯಾಕಾಶ ವಲಯಕ್ಕೆ ಹೊಸ ಪ್ರಾರಂಭ ಎಂದಿರುವ ಅವರು ಇದು ಭಾರತದ ಸ್ಟಾರ್ಟ್‌ಅಪ್ ಚಳುವಳಿಯಲ್ಲಿ ಒಂದು ಮಹತ್ವದ ತಿರುವು ಎಂದಿದ್ದಾರೆ.
ಹೈದರಾಬಾದ್ ಮೂಲದ ಸ್ಕೈರೂಟ್ ಅನ್ನು 2018 ರಲ್ಲಿ ಸ್ಥಾಪಿಸಲಾಗಿತ್ತು. ಸಿಂಗಾಪುರದ ಸಾರ್ವಭೌಮ ಸಂಪತ್ತು ನಿಧಿ ಜಿಐಸಿ ಬೆಂಬಲದಲ್ಲಿ ಕಾರ್ಯಾಚರಿಸುತ್ತಿದೆ. ಸರ್ಕಾರವು ಖಾಸಗಿ ಕಂಪನಿಗಳಿಗೆ ಬಾಹ್ಯಾಕಾಶ ವಲಯವನ್ನು ಬಾಗಿಲು ತೆರೆದ ನಂತರ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಉಡಾವಣೆ ಮತ್ತು ಪರೀಕ್ಷಾ ಸೌಲಭ್ಯಗಳನ್ನು ಬಳಸುವ ಒಪ್ಪಂದಕ್ಕೆ ಸಹಿ ಹಾಕಿತ್ತು. ಈ ಪ್ರಯೋಗದ ಮೂಲಕ ಭಾರತದ ಬಾಹ್ಯಾಕಾಶ ಕ್ಷೇತ್ರಕ್ಕೆ ಖಾಸಗಿ ಕಂಪನಿಗಳು ಪ್ರವೇಶ ಪಡೆದಂತಾಗಿದೆ.
India’s space sector has scaled a new peak on Friday with the successful launch of the country’s first-ever private rocket—Vikram-S Suborbital Flight (Prarambh mission) from Sounding Rocket Complex in Sriharikota, Andhra Pradesh.“Mission Prarambh is successfully accomplished. Congratulations @SkyrootA (Skyroot Aerospace) and Congratulations India,” said a tweet by Indian Space Research Organisation (ISRO).
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm