ಬ್ರೇಕಿಂಗ್ ನ್ಯೂಸ್
18-11-22 11:03 pm HK News Desk ದೇಶ - ವಿದೇಶ
ನವದೆಹಲಿ, ನ.18 : ಭಯೋತ್ಪಾದನೆಯನ್ನು ಯಾವುದೇ ಧರ್ಮ, ರಾಷ್ಟ್ರೀಯತೆ ಅಥವಾ ಗುಂಪಿಗೆ ಜೋಡಿಸಬಾರದು ಮತ್ತು ಆ ರೀತಿಯ ನಂಟನ್ನೂ ಕಲ್ಪಿಸಬಾರದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಮೂರನೇ ನೋ ಮನಿ ಫಾರ್ ಟೆರರ್ (ಎನ್‌ಎಂಎಫ್‌ಟಿ) ಹೆಸರಲ್ಲಿ 70ಕ್ಕೂ ದೇಶಗಳ ಪ್ರತಿನಿಧಿಗಳ ಸಮಾವೇಶದಲ್ಲಿ ಮಾತನಾಡಿದರು. ಭಯೋತ್ಪಾದಕರು ಮತ್ತು ಭಯೋತ್ಪಾದಕ ಗುಂಪುಗಳು ಆಧುನಿಕ ಶಸ್ತ್ರಾಸ್ತ್ರಗಳು, ಮಾಹಿತಿ ತಂತ್ರಜ್ಞಾನ ಮತ್ತು ಸೈಬರ್ ಮತ್ತು ಹಣಕಾಸು ಕ್ಷೇತ್ರಗಳ ಡೈನಾಮಿಕ್ಸ್‌ನ ಸೂಕ್ಷ್ಮ ವ್ಯತ್ಯಾಸಗಳನ್ನು ಅರ್ಥ ಮಾಡಿಕೊಂಡು, ಅವುಗಳನ್ನು ಬಳಸುತ್ತವೆ. ಭಯೋತ್ಪಾದನೆಯನ್ನು "ಡೈನಮೈಟ್‌ನಿಂದ ಮೆಟಾವರ್ಸ್" ಮತ್ತು "ಎಕೆ-47 ನಿಂದ ವರ್ಚುವಲ್ ಆಸ್ತಿಗಳಿಗೆ" ಪರಿವರ್ತಿಸುವುದು ಕಳವಳಕಾರಿ ವಿಷಯವಾಗಿದೆ. ಅದರ ವಿರುದ್ಧ ಸಾಮಾನ್ಯ ಕಾರ್ಯತಂತ್ರವನ್ನು ರೂಪಿಸಲು ನಾವು ಒಟ್ಟಾಗಿ ಕೆಲಸ ಮಾಡಬೇಕು ಎಂದು ಶಾ ಹೇಳಿದರು.
ಕೆಲವು ದೇಶಗಳು ಭಯೋತ್ಪಾದಕರನ್ನು ರಕ್ಷಿಸುತ್ತವೆ ಮತ್ತು ಆಶ್ರಯ ನೀಡುವುದನ್ನು ನಾವು ನೋಡಿದ್ದೇವೆ. ಭಯೋತ್ಪಾದಕನನ್ನು ರಕ್ಷಿಸುವುದು ಭಯೋತ್ಪಾದನೆಯನ್ನು ಉತ್ತೇಜಿಸುವುದಕ್ಕೆ ಸಮ. ಅಂತಹ ಅಂಶಗಳು ಎಂದಿಗೂ ಯಶಸ್ವಿಯಾಗದಂತೆ ನೋಡಿಕೊಳ್ಳುವುದು ಸಾಮೂಹಿಕ ಜವಾಬ್ದಾರಿ ಎಂದು ಅಮಿತ್ ಷಾ ಹೇಳಿದರು. ಪಾಕಿಸ್ತಾನ ಹೊರತುಪಡಿಸಿ ಕನಿಷ್ಠ 77 ದೇಶಗಳು ಮತ್ತು ಇಂಟರ್‌ಪೋಲ್‌ನಂತಹ 16 ಬಹುಪಕ್ಷೀಯ ಏಜೆನ್ಸಿಗಳು ಸಮ್ಮೇಳನದಲ್ಲಿ ಭಾಗವಹಿಸುತ್ತಿವೆ, 2018 ರ ಬಳಿಕ ಮೂರನೇ ಬಾರಿಗೆ ನೋ ಟೆರರ್ ಫಂಡಿಂಗ್ ಹೆಸರಲ್ಲಿ ಭಯೋತ್ಪಾದನೆ ವಿರುದ್ಧ ದೇಶಗಳನ್ನು ಒಗ್ಗೂಡಿಸುವ ಪ್ರಯತ್ನವಾಗಿದೆ. ಭಯೋತ್ಪಾದಕರು ಮತ್ತು ಸಂಘಟಿತ ಅಪರಾಧಗಳ ನಡುವಿನ ಸಂಬಂಧ, ಟೆರರ್ ಫಂಡಿಂಗ್, ಭಯೋತ್ಪಾದನೆ, ಸಾಮಾಜಿಕ ಮಾಧ್ಯಮಗಳ ಬಳಕೆ, ಭಯೋತ್ಪಾದಕ ಸಂಸ್ಥೆಗಳಿಗೆ ಧನ ಸಹಾಯಕ್ಕಾಗಿ ಡಾರ್ಕ್ ವೆಬ್ ಬಳಕೆ ಇತ್ಯಾದಿ ವಿಚಾರಗಳ ಬಗ್ಗೆ ಚರ್ಚೆ ನಡೆಯುವ ನಿರೀಕ್ಷೆಯಿದೆ. ಎರಡು ದಿನಗಳ ಸಮ್ಮೇಳನದಲ್ಲಿ 20 ದೇಶಗಳ ಸಚಿವರು ಭಾಗವಹಿಸುತ್ತಿದ್ದಾರೆ. ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನಕ್ಕೆ ಆಹ್ವಾನ ನೀಡಿಲ್ಲ.
ಸಮಾವೇಶ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ, ಭಯೋತ್ಪಾದಕ ಗುಂಪುಗಳಿಗೆ ರಾಜಕೀಯ, ಸೈದ್ಧಾಂತಿಕ ಮತ್ತು ಆರ್ಥಿಕ ನೆರವು ನೀಡುವ ಮೂಲಕ ತಮ್ಮ ವಿದೇಶಾಂಗ ನೀತಿಯ ಭಾಗವಾಗಿ ಭಯೋತ್ಪಾದನೆಯನ್ನು ಬೆಂಬಲಿಸುವ ದೇಶಗಳಿಗೆ ದಂಡ ವಿಧಿಸುವಂತೆ ಕರೆ ನೀಡಿದ್ದಾರೆ.
Union Home Minister Amit Shah today said financing of terrorism is more dangerous than terrorism the threat of which cannot and should not be linked to any religion or group. He also said that terrorists are constantly finding new ways to carry out violence, radicalise youth and raise financial resources and the darknet is being used by terrorists to spread radical content and conceal their identities.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm