ಬ್ರೇಕಿಂಗ್ ನ್ಯೂಸ್
09-12-22 02:13 pm HK News Desk ದೇಶ - ವಿದೇಶ
ಶಿಮ್ಲಾ, ಡಿ.9 : ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ 25 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ ಪ್ರವಾಸಿ ತಾಣ ಶಿಮ್ಲಾ, ಹಮೀರ್ ಪುರ ಮತ್ತು ಕಾಂಗ್ರಾ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತೀವ್ರ ಹಿನ್ನಡೆ ಅನುಭವಿಸಿದೆ. ಸಿಎಂ ಜೈರಾಮ್ ಠಾಕೂರ್ ಸ್ವಕ್ಷೇತ್ರ ಮಂಡಿ ಲೋಕಸಭಾ ವ್ಯಾಪ್ತಿಯಲ್ಲಿ ಪಕ್ಷ ಉತ್ತಮ ಸಾಧನೆ ಮಾಡಿದೆ.
68 ಸದಸ್ಯ ಬಲದ ವಿಧಾನಸಭೆಯಲ್ಲಿ 40 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಹಿಮಾಚಲ ಪ್ರದೇಶವನ್ನು ಬಿಜೆಪಿಯಿಂದ ಕಸಿದುಕೊಂಡಿದೆ. ಹಳೆಯ ಪಿಂಚಣಿ ಮರು ಜಾರಿ ಭರವಸೆ ಕಾಂಗ್ರೆಸ್ ಪಕ್ಷಕ್ಕೆ ನೆರವು ನೀಡಿದ್ದರೆ, ಸೇಬು ಬೆಳೆಗಾರರ ಸಮಸ್ಯೆಗಳ ಬಗ್ಗೆ ಬಿಜೆಪಿ ಕಡೆಗಣನೆ ಮಾಡಿದ್ದು 20 ಕ್ಷೇತ್ರಗಳಲ್ಲಿ ಕಂಟಕವಾಗಿ ಪರಿಣಮಿಸಿದೆ ಎನ್ನಲಾಗುತ್ತಿದೆ. ಅದಲ್ಲದೆ, ನಿರುದ್ಯೋಗ, ಹಣದುಬ್ಬರ, ಆಡಳಿತ ವಿರೋಧಿ ಅಲೆಯಿಂದ ಮತದಾರರು ಬೇಸತ್ತಿದ್ದರು ಎಂದು ರಾಜಕೀಯ ತಜ್ಞರು ಅಭಿಪ್ರಾಯ ಪಡುತ್ತಾರೆ.
ನಿರ್ಗಮಿತ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರ ಜನಪ್ರಿಯತೆ ಮಂಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಜೆಪಿ ಪರವಾಗಿ ಕೆಲಸ ಮಾಡಿದೆ. ಕಳೆದ ವರ್ಷ ಮಂಡಿ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್ ಗೆದ್ದಿತ್ತು. ಆದರೆ, ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಇಲ್ಲಿನ 17 ಸ್ಥಾನಗಳ ಪೈಕಿ ಕೇವಲ 5 ರಲ್ಲಿ ಕಾಂಗ್ರೆಸ್ ಗೆದ್ದಿದೆ. ಹಮೀರ್ ಪುರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಅದಕ್ಕೆ ಆ ಭಾಗಕ್ಕೆ ಸಂಪುಟದಲ್ಲಿ ಸ್ಥಾನದಲ್ಲಿ ಸ್ಥಾನ ನೀಡದೆ ಇದ್ದದ್ದು ಹಾಗೂ ಆ ಭಾಗದ ಮುಖಂಡ ಮಾಜಿ ಮುಖ್ಯಮಂತ್ರಿ ಪ್ರೇಮ್ ಕುಮಾರ್ ಧುಮಾಲ್ ಅವರನ್ನು ಪಕ್ಷದಲ್ಲಿ ಕಡೆಗಣಿಸಿದ್ದು ಬಿಜೆಪಿಗೆ ಮುಳುವಾಗಿ ಪರಿಣಮಿಸಿದೆ.
ಹಮೀರ್ ಪುರ ವ್ಯಾಪ್ತಿಯ 17 ಅಸೆಂಬ್ಲಿ ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಮತ್ತು ಪಕ್ಷೇತರರು 13 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಕಾಂಗ್ರಾ ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಬ್ರಾಹ್ಮಣರ ನಿರ್ಲಕ್ಷ್ಯ ಬಿಜೆಪಿ ವಿರುದ್ಧ ಕೆಲಸ ಮಾಡಿತ್ತು ಎನ್ನುವ ಲೆಕ್ಕಾಚಾರ ಕೇಳಿಬರುತ್ತಿದೆ.
ಸಚಿವ ಅನುರಾಗ್ ಠಾಕೂರ್ ಕ್ಷೇತ್ರದಲ್ಲಿ ಬಿಜೆಪಿಗೆ ಹಿನ್ನಡೆ
ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಪಕ್ಷವು ಕೇಂದ್ರ ಸಚಿವ ಅನುರಾಗ್ ಠಾಕೂರ್ ಪ್ರತಿನಿಧಿಸುತ್ತಿರುವ ಲೋಕಸಭಾ ಕ್ಷೇತ್ರ ಹಮೀರ್‌ಪುರದ ಐದು ವಿಧಾನಸಭಾ ಸ್ಥಾನಗಳನ್ನು ಬಿಜೆಪಿ ಕಳೆದುಕೊಂಡಿದೆ. ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ತವರು ಜಿಲ್ಲೆ ಬಿಲಾಸ್‌ಪುರದ ಎಲ್ಲಾ ಮೂರು ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿದೆ. ಅನುರಾಗ್ ಠಾಕೂರ್ ತಂದೆ ಹಾಗೂ ಮಾಜಿ ಮುಖ್ಯಮಂತ್ರಿ ಪ್ರೇಮ್ ಕುಮಾರ್ ಧುಮಾಲ್ ಸ್ಪರ್ಧಿಸುತ್ತಿದ್ದ ಸುಜಾನ್‌ಪುರದಿಂದ ಕಾಂಗ್ರೆಸ್ ಅಭ್ಯರ್ಥಿ ಕೇವಲ 399 ಮತಗಳ ಅಂತರದಿಂದ ಗೆದ್ದಿದ್ದಾರೆ. ಧುಮಾಲ್‌ಗೆ ಈ ಬಾರಿ ಟಿಕೆಟ್ ನೀಡಿರಲಿಲ್ಲ.
The BJP which managed to win 25 seats on Thursday in the Himachal Pradesh elections suffered a setback in the assembly segments falling under Shimla, Hamirpur and Kangra parliamentary constituencies in the hill state.However, the party put up a good show in the Mandi Lok Sabha constituency.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm