ಪ್ರಧಾನಿ ಹತ್ಯೆಗೆ ಕರೆ ನೀಡಿದ್ದ ಕಾಂಗ್ರೆಸ್ ಮುಖಂಡ ರಾಜಾ ಪಟೇರಿಯಾ ಮಧ್ಯಪ್ರದೇಶದಲ್ಲಿ ಬಂಧನ

13-12-22 06:19 pm       HK News Desk   ದೇಶ - ವಿದೇಶ

ಸಂವಿಧಾನ ಉಳಿಸುವುದಕ್ಕಾಗಿ ಪ್ರಧಾನಿ ಮೋದಿ ಹತ್ಯೆಗೆ ಸಿದ್ಧರಾಗಿ ಎಂದು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ರಾಜಾ ಪಟೇರಿಯಾ ಅವರನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ.

ಭೋಪಾಲ್, ಡಿ.13: ಸಂವಿಧಾನ ಉಳಿಸುವುದಕ್ಕಾಗಿ ಪ್ರಧಾನಿ ಮೋದಿ ಹತ್ಯೆಗೆ ಸಿದ್ಧರಾಗಿ ಎಂದು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ರಾಜಾ ಪಟೇರಿಯಾ ಅವರನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ.

ದಮೋಹ್ ಜಿಲ್ಲೆಯ ಹಾಜಾ ನಗರದಲ್ಲಿರುವ ರಾಜಾ ಅವರ ನಿವಾಸಕ್ಕೆ ಬೆಳಗ್ಗೆ 5 ಗಂಟೆಗೆ ತೆರಳಿದ್ದ ಪೊಲೀಸರು ಅವರನ್ನು ಕರೆದೊಯ್ದಿದ್ದಾರೆ. ವಿವಾದಾತ್ಮಕ ಹೇಳಿಕೆಯ ವಿಡಿಯೋ ವೈರಲ್ ಹಿನ್ನೆಲೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ಎಫ್ಐಆರ್ ದಾಖಲಿಸಿಕೊಂಡಿದ್ದರು.

कौन हैं कांग्रेस नेता राजा पटेरिया, जिन्होंने कहा, 'मोदी की हत्या के लिए  तैयार रहो' | Who is Congress Leader raja patria who says kill Modi if need  be in order to

ಪನ್ನಾ ಜಿಲ್ಲೆಯ ಪವಯ್ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ರಾಜಾ ಪಟೇರಿಯಾ ಮೋದಿ ಬಗ್ಗೆ ಅವಹೇಳನಕಾರಿ ಮಾತನಾಡಿದ್ದರು. ಮೋದಿ ಅವರು ಭಾಷೆ, ಧರ್ಮದ ಆಧಾರದಲ್ಲಿ ದೇಶವನ್ನು ಒಡೆಯುತ್ತಿದ್ದಾರೆ. ಇದರಿಂದ ಸಂವಿಧಾನಕ್ಕೆ ಆಪತ್ತು ಎದುರಾಗಿದೆ. ದಲಿತರು, ಅಲ್ಪಸಂಖ್ಯಾತರ ಉಳಿವಿಗಾಗಿ, ಸಂವಿಧಾನದ ಉಳಿವಿಗಾಗಿ ಮೋದಿಯನ್ನು ಹತ್ಯೆ ಮಾಡಬೇಕು ಎಂದು ಹೇಳಿಕೆ ನೀಡಿದ್ದ ವಿಡಿಯೋ ಸೋಮವಾರ ವೈರಲ್ ಆಗಿತ್ತು.

Congress Leader Arrested For "Be Ready To Kill Modi" Remark

ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಮಧ್ಯಪ್ರದೇಶ ಕಾಂಗ್ರೆಸ್ ಘಟಕದ ಅಧ್ಯಕ್ಷ ಕಮಲನಾಥ್, ಪಕ್ಷವು ಅಹಿಂಸೆಯಲ್ಲಿ ನಂಬಿಕೆ ಇಟ್ಟುಕೊಂಡಿದೆ. 45 ವರ್ಷಗಳ ರಾಜಕೀಯ ಬದುಕಿನಲ್ಲಿ ಸತ್ಯ, ಅಹಿಂಸೆಯನ್ನು ಪಾಲಿಸಿದ್ದೇನೆ. ಪಕ್ಷದ ಮುಖಂಡರೊಬ್ಬರು ತಪ್ಪಾಗಿ ಹೇಳಿಕೆ ನೀಡಿದ್ದಲ್ಲಿ ಅದಕ್ಕಾಗಿ ವಿಷಾದ ವ್ಯಕ್ತಪಡಿಸಬೇಕು. ಆ ರೀತಿಯ ಹೇಳಿಕೆಯನ್ನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ.

Former Madhya Pradesh Minister and Congress leader Raja Pateria, who had called for 'killing' Prime Minister Narendra Modi to save the Constitution in Panna, was arrested from Hatta in Damoh at around 5:30 am on Tuesday. The Madhya Pradesh police on Monday had booked the senior Congress leader over his controversial remarks to 'kill Modi' to save the Constitution after an FIR was filed against the leader.