ಬ್ರೇಕಿಂಗ್ ನ್ಯೂಸ್
23-12-22 07:33 pm HK News Desk ದೇಶ - ವಿದೇಶ
ನವದೆಹಲಿ, ಡಿ 23: ಚೀನಾ, ಅಮೆರಿಕ ಮತ್ತು ಬ್ರಿಟನ್ ನಲ್ಲಿ ಕೋವಿಡ್ ರೂಪಾಂತರಿ ವೈರಸ್ ಓಮಿಕ್ರಾನ್ BF.7 ಅಬ್ಬರದ ನಡುವೆಯೇ ಇಂದು ದೇಶಾದ್ಯಂತ 163 ಹೊಸ ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿದೆ.
ಶುಕ್ರವಾರ ನವೀಕರಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 163 ಹೊಸ ಕೊರೋನವೈರಸ್ ಸೋಂಕು ಪ್ರಕರಣಗಳು ವರದಿಯಾಗಿದೆ. ಆದರೆ ಸಕ್ರಿಯ ಪ್ರಕರಣಗಳ ಸಂಖ್ಯೆ 3,380 ಕ್ಕೆ ಇಳಿದಿದೆ.
ಕೋವಿಡ್ ಪ್ರಕರಣಗಳ ಸಂಖ್ಯೆ 4.46 ಕೋಟಿ (4,46,76,678) ದಾಖಲಾಗಿದ್ದು, 24 ಗಂಟೆಗಳ ಅವಧಿಯಲ್ಲಿ ಒಂಬತ್ತು ಸೋಂಕಿತರು ಸಾವನ್ನಪ್ಪಿದ್ದಾರೆ. ಆ ಮೂಲಕ ಮಹಾಮಾರಿಗೆ ಬಲಿಯಾದವರ ಸಂಖ್ಯೆ 5,30,690ಕ್ಕೆ ಏರಿಕೆಯಾಗಿದೆ. ಈ 9 ಪ್ರಕರಣಗಳ ಪೈಕಿ ಕೇರಳ ರಾಜ್ಯವೊಂದರಲ್ಲೇ 6 ಸಾವುಗಳು ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಿಂದ ಎರಡು ಮತ್ತು ದೆಹಲಿಯಿಂದ ಒಂದು ಸಾವು ವರದಿಯಾಗಿದೆ ಎಂದು ಬೆಳಿಗ್ಗೆ 8 ಗಂಟೆಗೆ ನವೀಕರಿಸಿದ ಡೇಟಾ ತಿಳಿಸಿದೆ.
ಇನ್ನು ಒಟ್ಟು ಸೋಂಕುಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ 0.01 ಪ್ರತಿಶತವನ್ನು ಒಳಗೊಂಡಿವೆ, ಆದರೆ ರಾಷ್ಟ್ರೀಯ COVID-19 ಚೇತರಿಕೆ ದರವು 98.80 ಪ್ರತಿಶತಕ್ಕೆ ಹೆಚ್ಚಾಗಿದೆ ಎಂದು ಸಚಿವಾಲಯ ತಿಳಿಸಿದೆ.
24 ಗಂಟೆಗಳ ಅವಧಿಯಲ್ಲಿ ಸಕ್ರಿಯ COVID-19 ಪ್ರಕರಣಗಳ ಸಂಖ್ಯೆಯಲ್ಲಿ 22 ಪ್ರಕರಣಗಳ ಇಳಿಕೆ ದಾಖಲಾಗಿದೆ. ಅಂತೆಯೇ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4,41,42,608 ಕ್ಕೆ ಏರಿದೆ. ಆದರೆ ಪ್ರಕರಣದ ಸಾವಿನ ಪ್ರಮಾಣವು ಶೇಕಡಾ 1.19 ರಷ್ಟಿದೆ. ಸಚಿವಾಲಯದ ವೆಬ್‌ಸೈಟ್ ಪ್ರಕಾರ, ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದ ಅಡಿಯಲ್ಲಿ ಇದುವರೆಗೆ ದೇಶದಲ್ಲಿ ಈ ವರೆಗೂ 220.03 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.
India logged 163 new coronavirus infections, while the active cases declined to 3,380, according to the Union Health Ministry data updated on Friday.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 06:05 pm
Mangalore Correspondent
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
16-05-25 09:20 pm
HK News Desk
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm