ಬ್ರೇಕಿಂಗ್ ನ್ಯೂಸ್
27-12-22 06:01 pm HK News Desk ದೇಶ - ವಿದೇಶ
ಮುಂಬೈ, ಡಿ.28: ಬಾಲಿವುಡ್ ಸ್ಟಾರ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವನ್ನಪ್ಪಿ 2 ವರ್ಷ ಕಳೆದಿದ್ದು, ಪ್ರಕರಣದ ಬಗ್ಗೆ ಇನ್ನೂ ತನಿಖೆ ನಡೆಯುತ್ತಿದೆ. ಈ ಹಿಂದೆ ಸುಶಾಂತ್ ಸಿಂಗ್ ಅವರನ್ನ ಕೊಲೆ ಮಾಡಲಾಗಿದೆ ಅನ್ನೋ ಆರೋಪ ಸಹ ಕೇಳಿಬಂದಿತ್ತು.
ಈ ಆರೋಪಕ್ಕೆ ಪುಷ್ಠಿ ಎಂಬಂತೆ ಸುಶಾಂತ್ ಸಿಂಗ್ ಮರಣೋತ್ತರ ಪರೀಕ್ಷೆ ನಡೆಸಿದ್ದ ಆಸ್ಪತ್ರೆ ಸಿಬ್ಬಂದಿ ಸ್ಫೋಟಕ ಹೇಳಿಕೆಯೊಂದನ್ನ ನೀಡಿದ್ದಾರೆ.
ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಆತನನ್ನ ಕೊಲೆ ಮಾಡಲಾಗಿದೆ ಎಂದು ಕೂಪರ್ ಆಸ್ಪತ್ರೆಯ ಶವಾಗಾರದ ನಿವೃತ್ತ ಸಿಬ್ಬಂದಿ ರೂಪ್ಕುಮಾರ್ ಶಾ ಆರೋಪಿಸಿದ್ದಾರೆ. ಸುಶಾಂತ್ ಸಿಂಗ್ ಶವ ಪತ್ತೆ ಆದಾಗ ಆತನ ದೇಹದ ಮೇಲೆ ಗಾಯಗಳಿದ್ದವು ಎಂದು ರೂಪ್ ಕುಮಾರ್ ಮಾಹಿತಿ ನೀಡಿದ್ದಾರೆ.
ಇತ್ತೀಚೆಗೆ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿರುವ ರೂಪ್ಕುಮಾರ್ ಶಾ.. ಸುಶಾಂತ್ ಸಾವನ್ನಪ್ಪಿದ ದಿನ 5 ಶವಗಳನ್ನ ಕಪೂರ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಬಂದಿದ್ದವು. ಈ ಪೈಕಿ ಒಂದು ವಿಐಪಿಯದ್ದು ಎಂಬ ಸುದ್ದಿ ಇತ್ತು. ನಂತರ ಅದು ಸುಶಾಂತ್ ಸಿಂಗ್ರದ್ದು ಅಂತಾ ಗೊತ್ತಾಯಿತು. ಪರೀಕ್ಷೆ ವೇಳೆ ದೇಹದ ಮೇಲೆ ಹಾಗೂ ಕತ್ತಿನ ಭಾಗದಲ್ಲಿ ಸಾಕಷ್ಟು ಗುರುತುಗಳಿದ್ದವು. ಮರಣೋತ್ತರ ಪರೀಕ್ಷೆ ನಡೆಸೋದನ್ನ ರೆಕಾರ್ಡ್ ಮಾಡಬೇಕಿತ್ತು. ಆದರೆ ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ಫೋಟೋ ಮಾತ್ರ ತೆಗೆಯಲಾಗಿತ್ತು.
ಮರಣೋತ್ತರ ಪರೀಕ್ಷೆ ಬಳಿಕ ಸುಶಾಂತ್ ಹತ್ಯೆ ಆಗಿರಬಹುದು ಎಂಬ ವಿಚಾರವನ್ನ ನಾನು ಹಿರಿಯ ಅಧಿಕಾರಿಗಳಿಗೆ ತಿಳಿಸಿದರೂ ಅವರು ನಿಯಮಗಳ ಪ್ರಕಾರವೇ ಮಾಡು ಎಂದು ನನಗೆ ಸೂಚಿಸಿದ್ದರು. ನನ್ನ ಹಿರಿಯ ಅಧಿಕಾರಿ, ಆದಷ್ಟು ಬೇಗ ಮೃತದೇಹದ ಚಿತ್ರವನ್ನ ತೆಗೆದುಕೊಂಡು ಪೊಲೀಸರಿಗೆ ನೀಡುವಂತೆ ಹೇಳಿದ್ದರು. 2020, ಜೂನ್ನಲ್ಲಿ ಸುಶಾಂತ್ ಸಿಂಗ್ ದೇಹವು ಮುಂಬೈನ ಅಪಾರ್ಟ್ಮೆಂಟ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
Over the past two years, late Bollywood actor Sushant Singh Rajput has been in and out of the news, with no end to the conspiracy theories surrounding his suicide. In a fresh turn of events, a mortuary staff member, Roopkumar Shah has made a shocking claim about the actor’s death in an interview with TV9 Marathi. He said the actors death was not suicide, but that he was murdered. He also claimed to have seen injuries on his body and around the neck.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm