ಕೋವಿಡ್ ಸೋಂಕು ; ಮುಂದಿನ 40 ದಿನ ದೇಶಕ್ಕೆ ನಿರ್ಣಾಯಕ - ಕೇಂದ್ರ ಆರೋಗ್ಯ ಇಲಾಖೆ 

28-12-22 09:09 pm       HK News Desk   ದೇಶ - ವಿದೇಶ

ಚೀನಾದಲ್ಲಿ ಉಲ್ಬಣಿಸಿರುವ ಕೊರೊನಾ ಸೋಂಕು ಭಾರತದಲ್ಲೂ ಹೊಸ ಅಲೆಯ ಭೀತಿ ಸೃಷ್ಟಿಸಿದ್ದು, ಮುಂದಿನ 40 ದಿನಗಳು ದೇಶಕ್ಕೆ ಅತ್ಯಂತ ನಿರ್ಣಾಯಕವಾಗಿರಲಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಅಭಿಪ್ರಾಯಪಟ್ಟಿದೆ. 

ನವದೆಹಲಿ, ಡಿ.28 : ಚೀನಾದಲ್ಲಿ ಉಲ್ಬಣಿಸಿರುವ ಕೊರೊನಾ ಸೋಂಕು ಭಾರತದಲ್ಲೂ ಹೊಸ ಅಲೆಯ ಭೀತಿ ಸೃಷ್ಟಿಸಿದ್ದು, ಮುಂದಿನ 40 ದಿನಗಳು ದೇಶಕ್ಕೆ ಅತ್ಯಂತ ನಿರ್ಣಾಯಕವಾಗಿರಲಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಅಭಿಪ್ರಾಯಪಟ್ಟಿದೆ. 

ಕೇಂದ್ರ ಆರೋಗ್ಯ ಇಲಾಖೆಯ ಕೋವಿಡ್ ತಜ್ಞರ ಸಲಹಾ ಸಮಿತಿ ಸಭೆಯ ಬಳಿಕ ಈ ಮಾಹಿತಿ ನೀಡಲಾಗಿದ್ದು, ಮುಂದಿನ ತಿಂಗಳು ದೇಶದಲ್ಲಿ ಸೋಂಕು ಉತ್ತುಂಗಕ್ಕೇರಲಿದ್ದು ಎಚ್ಚರಿಕೆ ವಹಿಸುವಂತೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. 

ಜನವರಿ ತಿಂಗಳಲ್ಲಿ ದೇಶದಲ್ಲಿ ಕೋವಿಡ್ ಪ್ರಕರಣಗಳ ಉಲ್ಬಣ ಆಗಲಿದ್ದು ಮುಂದಿನ 40 ದಿನಗಳು ನಿರ್ಣಾಯಕ ಆಗಿರುತ್ತದೆ. ಆದರೆ ಸೋಂಕು ಉತ್ತುಂಗಕ್ಕೇರಿದರೂ ಸಾವು ಮತ್ತು ಆಸ್ಪತ್ರೆಗೆ ದಾಖಲಾಗುವರ ಸಂಖ್ಯೆ ತೀರಾ ಕಡಿಮೆ ಇರುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ..

ಈ ಹಿಂದೆ, ಕೋವಿಡ್ -19 ರ ಹೊಸ ಅಲೆಯು ಪೂರ್ವ ಏಷ್ಯಾಕ್ಕೆ ಅಪ್ಪಳಿಸಿದ 30-35 ದಿನಗಳ ನಂತರ ಭಾರತ ಪ್ರವೇಶಿಸಿದ ಉದಾಹರಣೆ ಇದೆ. ಅದನ್ನು ಆಧರಿಸಿ ತಜ್ಞರು ಈ ಎಚ್ಚರಿಕೆ ನೀಡಿದ್ದಾರೆ. ನಿರ್ಲಕ್ಷ್ಯ ವಹಿಸದೆ ಕೋವಿಡ್ ಮುನ್ನೆಚ್ಚರಿಕೆ ನಿರ್ವಹಿಸಿದರೆ ಪರಿಣಾಮಕಾರಿಯಾಗಿ ಪರಿಸ್ಥಿತಿ ಎದುರಿಸಬಹುದು. ಕೋವಿಡ್ ಉಪ ತಳಿಯಿಂದ ಸೋಂಕು ಹೆಚ್ಚುವ ನಿರೀಕ್ಷೆ ಇದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

The next 40 days are going to be crucial as India may see a surge in COVID-19 cases in January, official sources said on Wednesday citing the pattern of previous outbreaks. “Previously, it has been noticed that a new wave of COVID-19 hits India around 30-35 days after it hits East Asia…. This has been a trend,” an official said.