ಬ್ರೇಕಿಂಗ್ ನ್ಯೂಸ್
30-12-22 11:16 am HK News Desk ದೇಶ - ವಿದೇಶ
ಅಹ್ಮದಾಬಾದ್, ಡಿ.30: ಕಳೆದೆರಡು ದಿನಗಳಿಂದ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ತಾಯಿ ಹೀರಾ ಬೇನ್ (100) ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಎರಡು ದಿನದಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಹೀರಾ ಬೆನ್ ಅವರನ್ನು ಅಹ್ಮದಾಬಾದಿನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಶುಕ್ರವಾರ ಮುಂಜಾನೆ 3.30ರ ಸುಮಾರಿಗೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ಘೋಷಣೆ ಮಾಡಿದ್ದಾರೆ. ತಾಯಿ ತೀರಿಕೊಂಡ ಬಗ್ಗೆ ಭಾವುಕರಾಗಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಭವ್ಯವಾದ ಶತಮಾನವೊಂದು ದೇವರ ಪಾದ ಸೇರಿದೆ. ಅಮ್ಮನಲ್ಲಿಯೇ ನಾನು ಆ ತ್ರಿಮೂರ್ತಿಗಳನ್ನು ಕಂಡಿದ್ದೆ. ತಪಸ್ವಿ ರೀತಿಯ ಅವರ ಜೀವನ ಪ್ರಯಾಣ, ನಿಸ್ವಾರ್ಥ ಕರ್ಮಯೋಗಿಯ ರೀತಿ ಮೌಲ್ಯಗಳಿಗೆ ಬದ್ಧವಾಗಿತ್ತು ಎಂದು ಹೇಳಿದ್ದಾರೆ.




ಮನೆಗೆ ಬಂದು ಅಮ್ಮನ ಅಂತಿಮ ದರ್ಶನ ಪಡೆದ ಮೋದಿ, ಅಲ್ಲಿಂದ ಅಂತ್ಯಕ್ರಿಯೆಗೆ ಸಾಗುವ ಸಂದರ್ಭ ಕುಟುಂಬ ಸದಸ್ಯರ ಜೊತೆಗೆ ಶವಯಾತ್ರೆಗೆ ಹೆಗಲು ಕೊಟ್ಟು ನಡೆದಿದ್ದಾರೆ. ಸುತ್ತ ಭದ್ರತಾ ಸಿಬಂದಿಯ ಜೊತೆಗೆ ಶವಕ್ಕೆ ಹೆಗಲು ಕೊಟ್ಟ ಚಿತ್ರ ವೈರಲ್ ಆಗಿದೆ. ದೇಶಕ್ಕೆ ಹೆಮ್ಮೆ ತಂದ ಪುತ್ರನಿಗೆ ಜನ್ಮ ಕೊಟ್ಟ ಮೋದಿಯ ತಾಯಿ ನಿಧನಕ್ಕೆ ದೇಶಾದ್ಯಂತ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ರಾಷ್ಟ್ರಪತಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
Prime Minister Narendra Modi's mother Heeraben Modi, who dies early this morning, has been cremated in Gandhinagar. PM Modi, who reached Gujarat early this morning, performed the last rites. Heeraben Modi was 99.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm