35 ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿಯೇ ಬಿಟ್ಟು ಟೇಕಾಫ್ ಆದ ವಿಮಾನ ; ಸ್ಕೂಟ್ ಏರ್ಲೈನ್ಸ್ ಎಡವಟ್ಟು, ನಿಲ್ದಾಣದಲ್ಲಿಯೇ ಪ್ರತಿಭಟನೆ !

19-01-23 12:48 pm       HK News Desk   ದೇಶ - ವಿದೇಶ

ಇತ್ತೀಚಿನ ದಿನಗಳಲ್ಲಿ ವಿಮಾನಯಾನ ಅವಾಂತಗಳು ಹೆಚ್ಚಾಗುತ್ತಿದ್ದು, ಇದೀಗ ವಿಮಾನವೊಂದು ಬರೊಬ್ಬರಿ 35 ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿಯೇ ಬಿಟ್ಟು ಹೋಗಿರುವ ಘಟನೆ ಅಮೃತಸರದಲ್ಲಿ ವರದಿಯಾಗಿದೆ.

ನವದೆಹಲಿ, ಜ.19: ಇತ್ತೀಚಿನ ದಿನಗಳಲ್ಲಿ ವಿಮಾನಯಾನ ಅವಾಂತಗಳು ಹೆಚ್ಚಾಗುತ್ತಿದ್ದು, ಇದೀಗ ವಿಮಾನವೊಂದು ಬರೊಬ್ಬರಿ 35 ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿಯೇ ಬಿಟ್ಟು ಹೋಗಿರುವ ಘಟನೆ ಅಮೃತಸರದಲ್ಲಿ ವರದಿಯಾಗಿದೆ.

ಅಮೃತಸರ–ಸಿಂಗಪುರ ಮಾರ್ಗದ ಸ್ಕೂಟ್ ಏರ್ಲೈನ್ಸ್ ವಿಮಾನವು ಬುಧವಾರ 35 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಆಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 

Indira Gandhi International Airport - Wikipedia

ಏನಿದು ಗೊಂದಲ?

ಸಿಂಗಾಪುರ ವಿಮಾನವನ್ನು ತಪ್ಪಿಸಿಕೊಂಡ ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಗದ್ದಲ ಉಂಟು ಮಾಡಿದರು ಹಾಗೂ ಪ್ರತಿಭಟನೆಯನ್ನು ನಡೆಸಿದರು. ಅವರು ವಿಮಾನ ನಿಲ್ದಾಣದಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ತಮ್ಮ ದೂರನ್ನು ದಾಖಲಿಸಿದ್ದಾರೆ. ವಿಮಾನ ನಿಲ್ದಾಣದ ಅಧಿಕಾರಿಗಳು ವಿಮಾನಯಾನ ಅಧಿಕಾರಿಗಳನ್ನು ಸಂಪರ್ಕಿಸಿದಾಗ, ಪ್ರಯಾಣಿಕರಿಗೆ ಇ-ಮೇಲ್ ಮೂಲಕ ಹಾರಾಟದ ಸಮಯದಲ್ಲಿ ಬದಲಾವಣೆಯ ಬಗ್ಗೆ ತಿಳಿಸಲಾಗಿತ್ತು ಎಂದು ಅವರು ಮಾಹಿತಿ ನೀಡಿದ್ದಾರೆ.

ದೂರು ದಾಖಲು, ಡಿಜಿಸಿಎ ತನಿಖೆ ಇನ್ನು ಘಟನೆಯಿಂದ ಕೆರಳಿದ ಪ್ರಯಾಣಿಕರು ಅಮೃತಸರ ವಿಮಾನ ನಿಲ್ದಾಣದಲ್ಲಿಯೇ ಪ್ರತಿಭಟನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ದಾಖಲಿಸಿದ್ದಾರೆ. ಅಂತೆಯೇ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಈ ವೈಫಲ್ಯದ ಬಗ್ಗೆ ತನಿಖೆಗೆ ಆದೇಶಿಸಿದೆ.

"ಸುಮಾರು 280 ಪ್ರಯಾಣಿಕರು ಸಿಂಗಾಪುರಕ್ಕೆ ಪ್ರಯಾಣಿಸಬೇಕಾಗಿತ್ತು. ಆದರೆ 253 ಪ್ರಯಾಣಿಕರು ವಿಮಾನದಲ್ಲಿ ಪ್ರಯಾಣಿಸಿದ್ದು, ಇದರಿಂದಾಗಿ 30 ಕ್ಕೂ ಹೆಚ್ಚು ಪ್ರಯಾಣಿಕರು ಉಳಿದಿದ್ದಾರೆ" ಎಂದು ಅಮೃತಸರ ವಿಮಾನ ನಿಲ್ದಾಣದ ನಿರ್ದೇಶಕರು ತಿಳಿಸಿದ್ದಾರೆ.

Amritsar News: 35 यात्रियों को छोड़कर समय से पहले उड़ा विमान, एयरपोर्ट पर  हुआ हंगामा - Amritsar News plane took off before the scheduled time 35  passengers were left uproar at the airport

ಒಂದು ಗುಂಪಿನಲ್ಲಿ 30 ಜನರಿಗೆ ಟಿಕೆಟ್ಗಳನ್ನು ಕಾಯ್ದಿರಿಸಿದ ಟ್ರಾವೆಲ್ ಏಜೆಂಟ್, ವಿಮಾನದ ಸಮಯದಲ್ಲಿ ಬದಲಾವಣೆಯ ಬಗ್ಗೆ  ಪ್ರಯಾಣಿಕರಿಗೆ ತಿಳಿಸಲಿಲ್ಲ, ಇದರಿಂದಾಗಿ ಸಮಯಕ್ಕೆ ಸರಿಯಾಗಿ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕರೊಂದಿಗೆ ವಿಮಾನವು ಹಾರಾಟ ನಡೆಸಿತು ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Go First becomes first airline to launch direct flights from Srinagar to  Sharjah | Travel - Hindustan Times

ಈ ಹಿಂದೆ ಬೆಂಗಳೂರಿನಿಂದ ದೆಹಲಿಗೆ ಹೊರಟಿದ್ದ ಗೋ ಫಸ್ಟ್ ವಿಮಾನವು 55 ಪ್ರಯಾಣಿಕರನ್ನು ಬಿಟ್ಟು ಹಾರಿದ್ದು ಇತ್ತೀಚೆಗೆ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಅದರ ಬೆನ್ನಲ್ಲೇ ಈಗ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.

A Singapore bound flight took off hours ahead of schedule, leaving behind 35 passengers at the Amritsar airport, triggering massive chaos. The Scoot Airline flight was scheduled to depart at 7.55 pm but it took off at 3 pm. The airline said passengers were communicated through e-mail about the change in flight time.