ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ; ಆರೋಪಿಗೆ ಏರ್ ಇಂಡಿಯಾದಲ್ಲಿ 4 ತಿಂಗಳು ಬ್ಯಾನ್ ಶಿಕ್ಷೆ !

19-01-23 06:03 pm       HK News Desk   ದೇಶ - ವಿದೇಶ

ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜಿಸಿದ್ದ ಆರೋಪಿ ಶಂಕರ್ ಮಿಶ್ರಾಗೆ ವಿಮಾನ ಪ್ರಯಾಣದಿಂದ 4 ತಿಂಗಳು ನಿಷೇಧಿಸಿ ಏರ್‌ ಇಂಡಿಯಾ ಕಂಪನಿ ಆದೇಶಿಸಿದೆ.

ನವದೆಹಲಿ, ಜ.19: ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜಿಸಿದ್ದ ಆರೋಪಿ ಶಂಕರ್ ಮಿಶ್ರಾಗೆ ವಿಮಾನ ಪ್ರಯಾಣದಿಂದ 4 ತಿಂಗಳು ನಿಷೇಧಿಸಿ ಏರ್‌ ಇಂಡಿಯಾ ಕಂಪನಿ ಆದೇಶಿಸಿದೆ.

ಈ ಕುರಿತು ಎಎನ್‌ಐ ಟ್ವೀಟ್ ಮಾಡಿದೆ. ಶಂಕರ್ ಮಿಶ್ರಾ ಏರ್ ಇಂಡಿಯಾದ ಯಾವುದೇ ವಿಮಾನಗಳಲ್ಲಿ 4 ತಿಂಗಳುವರೆಗೆ ಪ್ರಯಾಣ ಮಾಡುವಂತಿಲ್ಲ ಎಂದು ಕಟ್ಟುನಿಟ್ಟಿನ ನಿರ್ಧಾರ ತೆಗೆದುಕೊಂಡಿದೆ.

2022ರ ನವೆಂಬರ್‌ 26 ರಂದು, ಮುಂಬೈ ಮೂಲದ ಉದ್ಯಮಿ ಶಂಕರ್ ಮಿಶ್ರಾ ಕುಡಿದ ಮತ್ತಿನಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜಿಸಿದ್ದ. ವಿಮಾನ ಲ್ಯಾಂಡ್‌ ಆದ ನಂತರವೂ ಮಿಶ್ರಾ ವಿರುದ್ಧ ಯಾವುದೇ ಕ್ರಮ ಜರುಗಿಸಿರಲಿಲ್ಲ. ನ್ಯೂಯಾರ್ಕ್‌ನಿಂದ ದೆಹಲಿಗೆ ಬರುತ್ತಿದ್ದ ವಿಮಾನದ ಬ್ಯುಸಿನೆಸ್‌ ಕ್ಲಾಸ್‌ನಲ್ಲಿ ಈ ಘಟನೆ ನಡೆದಿತ್ತು.

Air India 'pee-gate': Who is Shankar Mishra, the man accused of urinating  on an elderly co-passenger - India News News

ಮಹಿಳೆ ಏರ್‌ ಇಂಡಿಯಾಗೆ ನೀಡಿದ ದೂರಿನ ಮೇರೆಗೆ ದೆಹಲಿ ಪೊಲೀಸರು ಈತನ ವಿರುದ್ಧ ಜನವರಿ 4ರಂದು ಎಫ್‌ಐಆರ್‌ ದಾಖಲಿಸಿಕೊಂಡಿದ್ದರು. ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿದ್ದ ಮಿಶ್ರಾನನ್ನು ಬಂಧಿಸಿ ದೆಹಲಿಗೆ ಕರೆತರಲಾಗಿತ್ತು.

ಜ.7 ರಂದು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಜಾಮೀನು ಅರ್ಜಿ ವಿಚಾರಣೆ ನಡೆಸಿದ ಪಟಿಯಾಲಾ ಹೌಸ್ ಕೋರ್ಟ್‌ ನ್ಯಾಯಾಧೀಶರು, ಇದೊಂದು ಅತ್ಯಂತ ಅಸಹ್ಯಕರ ಘಟನೆ ಎಂದು ಖಂಡಿಸಿತ್ತು.

Airline carrier Air India has banned Shankar Mishra, accused of urinating on a co-passenger onboard a New York-Delhi flight last November, from flying for four months, news agency PTI reported citing an official. Earlier, Air India had announced a ban of 30 days on Mishra after the incident came to light.