ಪ್ರವೀಣ್​ ನೆಟ್ಟಾರು ಕೊಲೆ ಪ್ರಕರಣ ; 1500 ಪುಟಗಳ ಚಾರ್ಜ್​ಶೀಟ್ ಸಲ್ಲಿಕೆ, ಪಿಎಫ್‌ಐ ನಂಟುಳ್ಳ 20 ಆರೋಪಿಗಳ ವಿರುದ್ಧ ಆರೋಪಪಟ್ಟಿ ! 

21-01-23 11:57 am       HK News Desk   ದೇಶ - ವಿದೇಶ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ. ಎನ್​ಐಎ ತಂಡ ಶುಕ್ರವಾರ ಬೆಂಗಳೂರಿನ ಎನ್​ಐಎ ವಿಶೇಷ ನ್ಯಾಯಾಲಯಕ್ಕೆ ಸುದೀರ್ಘವಾದ 1500 ಪುಟಗಳ ಚಾರ್ಜ್​ಶೀಟ್​ ಸಲ್ಲಿಸಿದೆ.

ಹೊಸದಿಲ್ಲಿ, ಜ.20: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ. ಎನ್​ಐಎ ತಂಡ ಶುಕ್ರವಾರ ಬೆಂಗಳೂರಿನ ಎನ್​ಐಎ ವಿಶೇಷ ನ್ಯಾಯಾಲಯಕ್ಕೆ ಸುದೀರ್ಘವಾದ 1500 ಪುಟಗಳ ಚಾರ್ಜ್​ಶೀಟ್​ ಸಲ್ಲಿಸಿದೆ.  240 ಸಾಕ್ಷಿಗಳ ಹೇಳಿಕೆಗಳು ಸೇರಿ ಒಟ್ಟು 20 ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ. ಇನ್ನು ಪ್ರವೀಣ್ ಹತ್ಯೆ ಪ್ರಕರಣ ಸಂಬಂಧ ಈವರೆಗೆ 14 ಆರೋಪಿಗಳನ್ನು ಬಂಧಿಸಿಲಾಗಿದ್ದು, 6 ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ತಲೆಮರೆಸಿಕೊಂಡಿರುವ 6 ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸಿರುವ ಎನ್​ಐಎ ಅಧಿಕಾರಿಗಳು, ಪತ್ತೆಯಾಗದ ಹಿನ್ನಲೆಯಲ್ಲಿ ಲುಕ್​ಔಟ್​ ನೋಟಿಸ್ ಜಾರಿ ಮಾಡಿದೆ. ಆರೋಪಿಗಳ ಸುಳಿವು ನೀಡಿದವರಿಗೆ ನಗದು ಬಹುಮಾನ ಘೋಷಣೆ ಮಾಡಿದ್ದಾರೆ.

NIA Carries Out Raids At 56 Locations Across Kerala In PFI Case

Explained | What does the ban on PFI, affiliate organisations mean? |  Popular Front of India Ban | Explainer

ಇಬ್ಬರು ಆರೋಪಿಗಳ ಪತ್ತೆಗೆ 10 ಲಕ್ಷ ಬಹುಮಾನ ; 

ಬಂಟ್ವಾಳ ತಾಲೂಕಿನ ಕೊಡಾಜೆಯ ನಿಷೇಧಿತ ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ) ಸಂಘಟನೆಯ ಷರೀಫ್ ಮತ್ತು ನೆಕ್ಕಿಲಾಡಿಯ ಅಗ್ನಾಡಿ ಹೌಸ್​ನ ಅಬೂಬಕರ್ ಮಗ ಮಸೂದ್ ಕೆ.ಎ ಆರೋಪಿಗಳ ಸುಳಿವು ನೀಡಿದವರಿಗೆ ತಲಾ 5 ಲಕ್ಷದಂತೆ ಇಬ್ಬರಿಂದ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್​ಐಎ ಅಧಿಕಾರಿಗಳು ಜನವರಿ 20 ರಂದು ಘೋಷಣೆ ಮಾಡಿದ್ದು, ಆರೋಪಿಗಳ ಸುಳಿವು ಸಿಕ್ಕರೆ ಬೆಂಗಳೂರಿನ ಎನ್​ಐಎ ಎಸ್​ಪಿ ಕಚೇರಿಗೆ ಮಾಹಿತಿ ನೀಡಲು ಮನವಿ ಮಾಡಿದ್ದಾರೆ.

PUCL and 100 Organisations demand the repeal of the UAPA – The Leaflet

ನಾಲ್ಕು ಮಂದಿ ಟಾರ್ಗೆಟ್ ; 

ಮುಸ್ತಫಾನ ಸೂಚನೆಯಂತೆ ಹಿಂದೂ ಸಮುದಾಯದ ನಾಲ್ವರನ್ನು ಗುರುತಿಸಲಾಗಿತ್ತು. ಜುಲೈ 2022ರಂದು, ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಅವರ ಮೇಲೆ ಸಾರ್ವಜನಿಕರ ಎದುರಿನಲ್ಲಿಯೇ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿತ್ತು. ಜನಸಮೂಹದಲ್ಲಿ, ಮುಖ್ಯವಾಗಿ ನಿರ್ದಿಷ್ಟ ಸಮುದಾಯವೊಂದರ ಸದಸ್ಯರ ನಡುವೆ ಭಯ ಸೃಷ್ಟಿಸುವುದು ಅದರ ಉದ್ದೇಶವಾಗಿತ್ತು.

ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 120ಬಿ (ಅಪರಾಧ ಸಂಚಿನ ಶಿಕ್ಷೆ) , 153ಎ (ವಿಭಿನ್ನ ಗುಂಪುಗಳ ನಡುವೆ ವೈರತ್ವ ಪ್ರಚೋದನೆ), 302 (ಕೊಲೆ) ಮತ್ತು 34 (ಸಾಮಾನ್ಯ ಉದ್ದೇಶದಿಂದ ಅನೇಕ ವ್ಯಕ್ತಿಗಳು ನಡೆಸಿರುವ ಕೃತ್ಯ) ಹಾಗೂ ಯುಎಪಿಎ ಕಾಯ್ದೆಯ 16, 18 ಮತ್ತು 20ನೇ ಸೆಕ್ಷನ್‌ಗಳು ಹಾಗೂ ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 15 (1) (a) ಅಡಿ ಪ್ರಕರಣ ದಾಖಲು ಮಾಡಲಾಗಿದೆ.

Serial killer' of MP: 'Angry' young man and a loner who wanted to be  'famous' - India Today

ಆರೋಪಿಗಳು ಯಾರ್ಯಾರು?

ಸುಳ್ಯ ಪಟ್ಟಣದ ಮಹಮ್ಮದ್ ಶಿಯಾಬ್, ಸುಳ್ಯ ತಾಲೂಕಿನ ಅಬ್ದುಲ್ ಬಶೀರ್, ಪಲ್ತಾಡಿಯ ರಿಯಾಜ್, ಸುಳ್ಯ ತಾಲೂಕಿನ ಮುಸ್ತಫಾ ಪೈಚರ್, ನೆಕ್ಕಿಲಾಡಿಯ ಮಸೂದ್ ಕೆಎ, ಬಂಟ್ವಾಳದ ಕೊಡಾಜೆ ಮೊಹಮ್ಮದ್ ಶೆರಿಫ್, ಬೆಳ್ಳಾರೆಯ ಅಬೂಬಕ್ಕರ್ ಸಿದ್ದಿಕ್, ಸುಳ್ಯ ತಾಲೂಕಿನ ನೌಫಾಲ್ ಎಂ, ಬೆಳ್ಳಾರೆ ಗ್ರಾಮದ ಇಸ್ಮಾಯಿಲ್ ಶಫಿ ಕೆ, ಶೇಖ್ ಸದ್ದಾಂ ಹುಸೇನ್, ಎನ್ ಅಬ್ದುಲ್ ಹ್ಯಾರಿಸ್ ಮತ್ತು ಕೆ ಮೊಹಮ್ಮದ್ ಇಕ್ಬಾಲ್, ಬೆಳ್ಳಾರೆಯ ಮೊಹಮ್ಮದ್ ಶಫೀಕ್, ಮಂಗಳಂತಿಯ ಶಹೀದ್ ಎಂ, ಸುಳ್ಯದ ಉಮ್ಮರ್ ಫಾರೂಕ್ ಎಂಆರ್, ಮಸೀದಿಯ ಅಬ್ದುಲ್ ಕಬೀರ್, ನೆಲ್ಲೂರು ಕೆಮ್ರಾಜೆ ಗ್ರಾಮದ ಮುಹಮ್ಮದ್ ಇಬ್ರಾಹಿಂ ಶಾ, ನಾವೂರ್‌ನ ಸೈನುಲ್ ಅಬಿದ್ ವೈ, ಸವಣೂರ್‌ನ ಝಕಿಯಾರ್ ಎ ಹಾಗೂ ಮಡಿಕೇರಿಯ ತುಫೈಲ್ ಎಂಎಚ್.

ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿರುವ 20 ಆರೋಪಿಗಳ ಪೈಕಿ, ಮುಸ್ತಫಾ ಪೈಚರ್, ಮಸೂದ್ ಕೆಎ, ಕೊಡಾಜೆ ಮೊಹಮ್ಮದ್ ಶೆರಿಫ್, ಅಬೂಬಕ್ಕರ್ ಸಿದ್ದಿಕಿ, ಉಮ್ಮರ್ ಫಾರೂಕ್ ಎಂಆರ್ ಮತ್ತು ತುಫೈಲ್ ಎಂಎಚ್ ತಲೆಮರೆಸಿಕೊಂಡಿದ್ದಾರೆ. ಅವರ ಬಂಧನಕ್ಕೆ ಪೂರಕವಾದ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಿಸಲಾಗಿದೆ.

Turn of fortune for Indian rupee: From Asia's best performer to worst in  just two weeks | The Financial Express

ನಾಲ್ಕು ಆರೋಪಿಗಳ ಪತ್ತೆಗೆ 14 ಲಕ್ಷ ಬಹುಮಾನ ; 

ಪ್ರವೀಣ್ ಹತ್ಯೆ ಪ್ರಕರಣದ ಸಂಬಂಧಿಸಿದಂತೆ ಜನವರಿ 11ರಂದು ರಾಷ್ಟ್ರೀಯ ತನಿಖಾ ದಳ 4 ಆರೋಪಿಗಳ ಪತ್ತೆ ಒಟ್ಟು 14 ಲಕ್ಷ ರೂ ಬಹುಮಾನ ಘೋಷಣೆ ಮಾಡಿತ್ತು. ಪ್ರಮುಖ ಆರೋಪಿಗಳಾದ ಮೊಹಮ್ಮದ್ ಮುಸ್ತಫಾಗೆ ಹಾಗೂ ತುಫೈಲ್‌ಗೆ ತಲಾ 5 ಲಕ್ಷ ಹಾಗೂ ಉಮರ್ ಫಾರೂಕ್ ಮತ್ತು ಅಬೂಬಕ್ಕರ್ ಸಿದ್ದಿಕ್​ಗೆ ತಲಾ 2 ರೂ. ಬಹುಮಾನ ಘೋಷಿಸಿದೆ.

ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್​ ಬಳಿ ಚಿಕನ್ ಅಂಗಡಿ ಹೊಂದಿದ್ದ 31 ವರ್ಷದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್​ ನೆಟ್ಟಾರು ಅವರನ್ನು ರಾತ್ರಿ 8ರ ಸಮಯದಲ್ಲಿ ಬೈಕ್​ನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಮಾಡಿದ್ದರು. ತಕ್ಷಣ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು.

Praveen Nettaru's wife get's a 'Group C' job in CMO

ಪ್ರವೀಣ್​ ಪತ್ನಿಗೆ ಸರ್ಕಾರಿ ಕೆಲಸ ; 

ಪ್ರವೀಣ್​ ನೆಟ್ಟಾರು ಹತ್ಯೆ ಸಂದರ್ಭದಲ್ಲಿ ವಯಸ್ಸಾದ ಅತ್ತೆ-ಮಾವರನ್ನು ನೋಡಿಕೊಳ್ಳುವುದಕ್ಕಾಗಿ ಪ್ರವೀಣ್​ ಪತ್ನಿ ನೂತನ ಕುಮಾರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಿ ಕೆಲಸ ಕೊಡಿಸುವ ಭರವಸೆ ನೀಡಿದ್ದರು. ಅಂತೆಯೇ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ  ಪರಿಹಾರ ನಿಧಿ ವಿಭಾಗದಲ್ಲಿ ಕೆಲಸ ಕೊಡಿಸಿದ್ದರು. ಆದರೆ ನೂತನ ಕುಮಾರಿ ಅವರ ಮನವಿ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ  ಗುತ್ತಿಗೆ ಆಧಾರದ ಮೇಲೆ  ಕೆಲಸ ನೀಡಲಾಗಿದೆ.

NIA submits 1500 page charge sheet against 20 PFI members in BJP leader Praveen Nettaru murder case. The charge sheet has been filed before a Special NIA court in Bengaluru. On Friday, the counter-terrorist task enforcement agency declared a reward of Rs five lakhs on two PFI members -- Kodaje Mohammed Sheriff and Masud K.A.