ಮೈಸೂರು ವಿವಿ 100ನೇ ಘಟಿಕೋತ್ಸವ ; ದಸರಾ ಶುಭಕೋರಿದ ಮೋದಿ

19-10-20 01:31 pm       Headline Karnataka News Network   ದೇಶ - ವಿದೇಶ

ಮೈಸೂರು ದಸರಾ, ನಾಡಹಬ್ಬದ ಹೃದಯಪೂರ್ವಕ ಶುಭಾಶಯಗಳು. ಈ ಬಾರಿ ಕೋವಿಡ್ 19 ಗೆ ಸಂಬಂಧಿಸಿದ ನಿರ್ಬಂಧಗಳಿರಬಹುದು. ಆದರೆ, ಸಂಭ್ರಮದ ಉತ್ಸಾಹಕ್ಕೆ ಕೊರತೆ ಇಲ್ಲ ಎಂದರು.

ಮೈಸೂರು, ಅಕ್ಟೋಬರ್ 19: ಮೈಸೂರು ವಿಶ್ವವಿದ್ಯಾಲಯದ 100ನೇ ಘಟಿಕೋತ್ಸವ ಪ್ರಯುಕ್ತ ಪ್ರಧಾನಿ ಮೋದಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದ್ದು, ನಾಡಿನ ಜನತೆಗೆ ದಸರಾ ಹಬ್ಬದ ಶುಭಾಶಯ ಕೋರಿದ್ದಾರೆ.

ಮೈಸೂರು ವಿಶ್ವವಿದ್ಯಾಲಯ 100 ನೇ ಘಟಿಕೋತ್ಸವ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಎಲ್ಲರಿಗೂ ಮೈಸೂರು ದಸರಾ, ನಾಡಹಬ್ಬದ ಹೃದಯಪೂರ್ವಕ ಶುಭಾಶಯಗಳು. ಈ ಬಾರಿ ಕೋವಿಡ್ 19 ಗೆ ಸಂಬಂಧಿಸಿದ ನಿರ್ಬಂಧಗಳಿರಬಹುದು. ಆದರೆ, ಸಂಭ್ರಮದ ಉತ್ಸಾಹಕ್ಕೆ ಕೊರತೆ ಇಲ್ಲ ಎಂದರು.

ಪದವಿ ಜೊತೆ ರಾಷ್ಟ್ರ ನಿರ್ಮಾಣದ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ. ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರ ಶಿಕ್ಷಣವೇ ಬೆಳಕು ಉಕ್ತಿಯನ್ನು ಕನ್ನಡದಲ್ಲೇ ಉಲ್ಲೇಖಿಸಿ ಶಿಕ್ಷಣದ ಮಹತ್ವವನ್ನು ವಿದ್ಯಾರ್ಥಿಗಳಿಗೆ ಮೋದಿ ಮನದಟ್ಟು ಮಾಡಿದರು.